ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ODI ranking: ಮತ್ತೆ ಅಗ್ರಸ್ಥಾನಕ್ಕೇರಿದ ಸ್ಮೃತಿ ಮಂಧಾನ

ಬೌಲಿಂಗ್ ಶ್ರೇಯಾಂಕದಲ್ಲಿ, ಭಾರತದ ಸ್ನೇಹ್ ರಾಣಾ ಐದು ಸ್ಥಾನಗಳ ಜಿಗಿತವನ್ನು ಕಂಡಿದ್ದು, ಒಟ್ಟಾರೆಯಾಗಿ 13 ನೇ ಸ್ಥಾನಕ್ಕೆ ತಲುಪಿದ್ದಾರೆ. ಕಳೆದ ವಾರ ಯಾವುದೇ ಪಂದ್ಯಗಳನ್ನು ಆಡದಿದ್ದರೂ ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್ ತನ್ನ ನಂ.1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ದುಬೈ: ಐಸಿಸಿ ನೂತನ ಮಹಿಳಾ ಏಕದಿನ ಬ್ಯಾಟಿಂಗ್‌ ಶ್ರೇಯಾಂಕ(ODI ranking) ಪ್ರಕಟಗೊಂಡಿದ್ದು, ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ(Smriti Mandhana) ಮತ್ತೆ ಮತ್ತೆ ನಂ.1 ಸ್ಥಾನ ಪಡೆದಿದ್ದಾರೆ. ಸೆಪ್ಟೆಂಬರ್ 14 ರ ಭಾನುವಾರದಂದು ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬಾರಿಸಿದ ಅರ್ಧಶತಕದ ಕಾರಣದಿಂದ ಅವರು ಈ ಸಾಧನೆಗೈದರು. ಅಗ್ರಸ್ಥಾನದಲ್ಲಿದ್ದ ಇಂಗ್ಲೆಂಡ್‌ ನಾಯಕಿ ನ್ಯಾಟ್ ಸ್ಕಿವರ್-ಬ್ರಂಟ್(Nat Sciver-Brunt) ಒಂದು ಸ್ಥಾನ ಕುಸಿತದೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮಂಧಾನ 735 ರೇಟಿಂಗ್‌ ಅಂಕ ಹೊಂದಿದ್ದಾರೆ.

ಜೂನ್‌ನಲ್ಲಿ ಮಂಧಾನ ಮೊದಲ ಸ್ಥಾನಕ್ಕೇರಿದ್ದರು. ಇದಾದ ಬಳಿಕ ಜುಲೈನಲ್ಲಿ ನ್ಯಾಟ್ ಸಿವರ್-ಬ್ರಂಟ್ ಈ ಸ್ಥಾನವನ್ನು ವಶಪಡಿಸಿಕೊಂಡಿದ್ದರು. ಇದೀಗ ಮಹಿಳಾ ವಿಶ್ವಕಪ್‌ಗೆ ಮುಂಚಿತವಾಗಿ ಮಂಧನಾ ಅಗ್ರ ಸ್ಥಾನವನ್ನು ಮರಳಿ ಪಡೆದಿರುವುದು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಂತೆ ಮಾಡಿದೆ. ಆಸೀಸ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮಂಧಾನ 63 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳೊಂದಿಗೆ 58 ರನ್ ಗಳಿಸಿದರು.

ಮಂಧಾನ ಮಾತ್ರವಲ್ಲದೆ ಪ್ರತೀಕಾ ರಾವಲ್ ಮತ್ತು ಹರ್ಲೀನ್ ಡಿಯೋಲ್ ಕೂಡ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಗಮನಾರ್ಹ ಏರಿಕೆ ಕಂಡಿದ್ದಾರೆ. ಕ್ರಮವಾಗಿ ನಾಲ್ಕು ಮತ್ತು ಐದು ಸ್ಥಾನಗಳ ಜಿಗಿತ ಕಾಣುವ ಮೂಲಕ 42 ಮತ್ತು 43 ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತ ವಿರುದ್ಧ ಅಜೇಯ 77 ರನ್ ಗಳಿಸಿದ್ದ ಆಸ್ಟ್ರೇಲಿಯಾದ ಬೆತ್ ಮೂನಿ ಮೂರು ಸ್ಥಾನ ಬಡ್ತಿ ಪಡೆದು ಒಟ್ಟಾರೆ ಐದನೇ ಸ್ಥಾನಕ್ಕೆ ತಲುಪಿದ್ದಾರೆ.

ಇದನ್ನೂ ಓದಿ Asia Cup 2025: ಭಾರತ ಸೂಪರ್‌-4ಗೆ ಎಂಟ್ರಿ; ಪಾಕ್‌ ಲೆಕ್ಕಾಚಾರ ಹೇಗಿದೆ?

ಬೌಲಿಂಗ್ ಶ್ರೇಯಾಂಕದಲ್ಲಿ, ಭಾರತದ ಸ್ನೇಹ್ ರಾಣಾ ಐದು ಸ್ಥಾನಗಳ ಜಿಗಿತವನ್ನು ಕಂಡಿದ್ದು, ಒಟ್ಟಾರೆಯಾಗಿ 13 ನೇ ಸ್ಥಾನಕ್ಕೆ ತಲುಪಿದ್ದಾರೆ. ಕಳೆದ ವಾರ ಯಾವುದೇ ಪಂದ್ಯಗಳನ್ನು ಆಡದಿದ್ದರೂ ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್ ತನ್ನ ನಂ.1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆಲ್‌ರೌಂಡರ್ ಶ್ರೇಯಾಂಕದಲ್ಲಿ, ಆಸ್ಟ್ರೇಲಿಯಾದ ಆಶ್ ಗಾರ್ಡ್ನರ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ.

ಸೆಪ್ಟೆಂಬರ್ 17 ರಂದು ಮುಲ್ಲನ್‌ಪುರದಲ್ಲಿ ನಡೆಯುವ ಎರಡನೇ ಏಕದಿನ ಪಂದ್ಯದಲ್ಲಿ ಭಾರತವು ಮತ್ತೆ ಪುಟಿದೇಳುವ ಮತ್ತು ಸರಣಿಯನ್ನು ಸಮಬಲಗೊಳಿಸುವ ಗುರಿಯನ್ನು ಹೊಂದಿದೆ.