ಡರ್ಬನ್: ಡಿಸೆಂಬರ್ 10ರಿಂದ ಪ್ರವಾಸಿ ಭಾರತ ತಂಡದ ವಿರುದ್ಧ ಆರಂಭವಾಗಲಿರುವ ಸರಣಿಗೆ ಆತಿಥೇಯ ದಕ್ಷಿಣ ಆಫ್ರಿಕಾ ತನ್ನ ತಂಡಗಳನ್ನು ಸೋಮವಾರ ಪ್ರಕಟಿಸಿದೆ.
ಏಕದಿನ ವಿಶ್ವಕಪ್ ಪಂದ್ಯಾವಳಿಯ ನಂತರ, ದಕ್ಷಿಣ ಆಫ್ರಿಕಾ ತಂಡಕ್ಕೆ ಮೊದಲ ನಿಯೋಜನೆಯಾಗಿದ್ದು, ಭಾರತ ತಂಡದ ವಿರುದ್ಧ ತವರಿನಲ್ಲಿ ಮೂರು ಟಿ20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ.
ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ನಾಯಕ ತೆಂಬಾ ಬವುಮಾ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದೆ. ಬದಲಿಗೆ ಏಡೆನ್ ಮಾರ್ಕ್ರಾಮ್ ಅವರು ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ.
ಏಡೆನ್ ಮಾರ್ಕ್ರಾಮ್ ಅವರು ಟಿ20 ತಂಡವನ್ನು ಸಹ ಮುನ್ನಡೆಸುತ್ತಾರೆ ಮತ್ತು ತೆಂಬಾ ಬವುಮಾ ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕರಾಗಿರುತ್ತಾರೆ. ಟಿ20 ಸರಣಿಯು ಡಿ.10ರಂದು ಪ್ರಾರಂಭವಾಗುತ್ತದೆ. ಕಗಿಸೊ ರಬಾಡ ಅವರು ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಮಾತ್ರ ಗಮನಹರಿಸಿದ್ದರಿಂದ ಏಕದಿನ ತಂಡದಿಂದ ಕೈಬಿಡಲಾಗಿದೆ. ಆದಾಗ್ಯೂ, 2024ರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಕೇವಲ ಆರು ತಿಂಗಳುಗಳಿರುವಾಗ, ದಕ್ಷಿಣ ಆಫ್ರಿಕಾ ಟಿ20 ತಂಡ ದಲ್ಲಿ ಡೆವಾಲ್ಡ್ ಬ್ರೆವಿಸ್ ಅವರನ್ನು ಆಯ್ಕೆ ಮಾಡಲಾಗಿಲ್ಲ.
ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮನ್, ಮ್ಯಾಥ್ಯೂ ಬ್ರೀಟ್ಜ್ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ (1ನೇ ಮತ್ತು 2ನೇ ಟಿ20), ಡೊನೊವನ್ ಫೆರೇರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್ (1ನೇ ಮತ್ತು 2ನೇ ಟಿ20), ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾ ರಾಜ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ (1ನೇ ಮತ್ತು 2ನೇ ಟಿ20), ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಲಿಜಾಡ್ ವಿಲಿಯಮ್ಸ್.
ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡ
ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮನ್, ನಾಂಡ್ರೆ ಬರ್ಗರ್, ಟೋನಿ ಡಿ ಜೊರ್ಜಿ, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಮ್ಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ ಮತ್ತು ಲಿಜಾಡ್ ವಿಲಿಯಮ್ಸ್.
ಟೆಸ್ಟ್ ಸರಣಿಗೆ ದಕ್ಷಿಣ ಆಫ್ರಿಕಾ ತಂಡ
ತೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ನಾಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಟೋನಿ ಡಿ ಜೊರ್ಜಿ, ಡೀನ್ ಎಲ್ಗರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಕೈಲ್ ವೆರ್ರೆನ್ನೆ.