Saturday, 14th December 2024

ಹಾರ್ದಿಕ್ ಪಡೆಗೆ ಮೊದಲ ಸೋಲು

#KaneWilliamson

ಮುಂಬೈ: ಸನ್ ರೈಸರ್ಸ್ ಹೈದರಾಬಾದ್ ತಂಡ, ನಾಯಕ ಕೇನ್ ವಿಲಿಯಮ್ಸನ್ ಅರ್ಧಶತಕ ಹಾಗೂ ಅಭಿಷೇಕ್ ಶರ್ಮ ಸಮಯೋ ಚಿತ ಪ್ರದರ್ಶನದಿಂದ 8 ವಿಕೆಟ್ ಗಳಿಂದ ಗುಜರಾತ್ ಟೈಟಾನ್ಸ್ ವಿರುದ್ಧ ಸುಲಭ ಜಯ ದಾಖಲಿಸಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡ 5 ಎಸೆತಗಳು ಬಾಕಿ ಇರುವಾಗಲೇ 2 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಹೈದರಾಬಾದ್ ತಂಡಕ್ಕೆ ನಾಯಕ ಕೇನ್ ವಿಲಿಯಮ್ಸನ್ ಮತ್ತು ಅಭಿಷೇಕ್ ಶರ್ಮ ಮೊದಲ ವಿಕೆಟ್ ಗೆ 64 ರನ್ ಜೊತೆಯಾಟ ನಿಭಾ ಯಿಸಿದರು. ಅಭಿಷೇಕ್ 32 ಎಸೆತಗಳಲ್ಲಿ 6 ಬೌಂಡರಿ ಸಹಾಯದಿಂದ 42 ರನ್ ಗಳಿಸಿ ಔಟಾದರೆ, ವಿಲಿಯಮ್ಸನ್ 46 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 57 ರನ್ ಗಳಿಸಿದರು.

ಮಧ್ಯಮ ಕ್ರಮಾಂಕದಲ್ಲಿ ನಿಕೊಲಸ್ ಪೂರನ್ 18 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ ಅಜೇಯ 34 ರನ್ ಬಾರಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

ಈ ಮೂಲಕ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್‌ ಟೈಟಾನ್ಸ್ ತಂಡ, ಐಪಿಎಲ್‌ನಲ್ಲಿ ಮೊದಲ ಸೋಲು ಕಂಡಿದೆ.