ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

IPL 2026 Points Table: ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ; ಅಗ್ರಸ್ಥಾನ ಕಳೆದುಕೊಂಡ ಪಂಜಾಬ್‌

SRH vs PBKS: ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 33 ರನ್‌ಗಳಿಂದ ಸೋಲು ಕಂಡಿತು. ಮೊದಲು ಬ್ಯಾಟಿಂಗ್‌ ನಡೆಸಿದ ಹೈದರಾಬಾದ್‌ 4 ವಿಕೆಟ್‌ಗೆ 235 ರನ್‌ ಬಾರಿಸಿತು. ತಂಡದ ಪರ ಹೆನ್ರಿಕ್ ಕ್ಲಾಸೆನ್ 43 ಎಸೆತಗಳಲ್ಲಿ 69 ರನ್ ಗಳಿಸಿದರೆ, ಇಶಾನ್ ಕಿಶನ್ 32 ಎಸೆತಗಳಲ್ಲಿ 55 ರನ್ ಗಳಿಸಿದರು.

ಸಹ ಆಟಗಾರನನ್ನು ಹಿಂದಿಕ್ಕಿ ಆರೆಂಜ್‌ ಕ್ಯಾಪ್‌ ತನ್ನದಾಗಿಸಿಕೊಂಡ ಕ್ಲಾಸೆನ್‌

Arshdeep Singh -

Abhilash BC
Abhilash BC May 7, 2026 7:15 AM

ಹೈದರಾಬಾದ್‌, ಮೇ 7: ಇಂಡಿಯನ್ ಪ್ರೀಮಿಯರ್ ಲೀಗ್ 2026(IPL 2026)ರ 49 ನೇ ಪಂದ್ಯದಲ್ಲಿ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್(SRH vs PBKS) ತಂಡ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್‌ ತಂಡವನ್ನು ಸೋಲಿಸುವ ಮೂಲಕ ಅಂಕ(IPL 2026 Points Table)ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಪಂದ್ಯದಲ್ಲಿ ಬರೋಬ್ಬರಿ 9 ಕ್ಯಾಚ್‌ಗಳನ್ನು ಕೈಚೆಲ್ಲಿದ್ದು ತಂಡದ ಸೋಲಿಗೆ ಕಾರಣವಾಯಿತು.

11 ಪಂದ್ಯಗಳಲ್ಲಿ ಹೈದರಾಬಾದ್‌ ತಂಡಕ್ಕೆ ಇದು ಏಳನೇ ಗೆಲುವು ಆಗಿದ್ದು, IPL 2026 ಅಂಕಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಂಜಾಬ್ ತಂಡವು ಈಗ ಸತತ ಮೂರು ಸೋಲುಗಳನ್ನು ಅನುಭವಿಸಿದೆ ಮತ್ತು 10 ಪಂದ್ಯಗಳಿಂದ 13 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ.‌ ಆರ್‌ಸಿಬಿ(12) ಮೂರನೇ ಸ್ಥಾನದಲ್ಲಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ ಅಗ್ರಸ್ಥಾನಕ್ಕೇರಲಿದೆ.

ಸನ್‌ರೈಸರ್ಸ್ ಹೈದರಾಬಾದ್‌ನ ಮೂವರು ಬ್ಯಾಟ್ಸ್‌ಮನ್‌ಗಳು ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಟಾಪ್ 5 ರಲ್ಲಿ ಸ್ಥಾನ ಪಡೆದಿದ್ದಾರೆ. ಹೆನ್ರಿಕ್ ಕ್ಲಾಸೆನ್ (11 ಇನ್ನಿಂಗ್ಸ್‌ಗಳಿಂದ 494 ರನ್‌ಗಳೊಂದಿಗೆ) ಸಹ ಆಟಗಾರ ಅಭಿಷೇಕ್ ಶರ್ಮಾ (11 ಇನ್ನಿಂಗ್ಸ್‌ಗಳಿಂದ 475 ರನ್‌ಗಳೊಂದಿಗೆ) ಗಿಂತ ಮುಂದಿದ್ದು ಅಗ್ರಸ್ಥಾನಿಯಾಗಿದ್ದಾರೆ. 11 ಇನ್ನಿಂಗ್ಸ್‌ಗಳಿಂದ 409 ರನ್‌ಗಳೊಂದಿಗೆ ಇಶಾನ್ ಕಿಶನ್ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್ ಲೀಡರ್‌ಬೋರ್ಡ್‌ನಲ್ಲಿ ಅಗ್ರ 5 ರಲ್ಲಿ ಎಶಾನ್ ಮಾಲಿಂಗ ಐದನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೆ ಏರಿರುವುದು ಮಾತ್ರ ಗಮನಾರ್ಹ ಬದಲಾವಣೆಯಾಗಿದೆ. ಭುವನೇಶ್ವರ್ ಕುಮಾರ್ ಅಗ್ರ 5 ರಲ್ಲಿ ಇತರರಿಗಿಂತ ಕಡಿಮೆ ಪಂದ್ಯ ಆಡಿದ್ದರೂ ಮೊದಲ ಸ್ಥಾನದಲ್ಲಿದ್ದಾರೆ.

ಕನೋಲಿ ಶತಕ ವ್ಯರ್ಥ, ಪಂಜಾಬ್‌ ವಿರುದ್ಧ ಗೆದ್ದು ಅಗ್ರ ಸ್ಥಾನಕ್ಕೇರಿದ ಸನ್‌ರೈಸರ್ಸ್‌ ಹೈದರಾಬಾದ್‌!

ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 33 ರನ್‌ಗಳಿಂದ ಸೋಲು ಕಂಡಿತು. ಮೊದಲು ಬ್ಯಾಟಿಂಗ್‌ ನಡೆಸಿದ ಹೈದರಾಬಾದ್‌ 4 ವಿಕೆಟ್‌ಗೆ 235 ರನ್‌ ಬಾರಿಸಿತು. ತಂಡದ ಪರ ಹೆನ್ರಿಕ್ ಕ್ಲಾಸೆನ್ 43 ಎಸೆತಗಳಲ್ಲಿ 69 ರನ್ ಗಳಿಸಿದರೆ, ಇಶಾನ್ ಕಿಶನ್ 32 ಎಸೆತಗಳಲ್ಲಿ 55 ರನ್ ಗಳಿಸಿದರು.

ಗುರಿ ಬೆನ್ನಟ್ಟಿದ ಪಂಜಾಬ್‌ ಪರ ಕೂಪರ್‌ ಕೊನೋಲಿ ಶತಕದ ಹೊರತಾಗಿಯೂ ನಿಗದಿತ 20 ಒವರ್‌ಗಳಲ್ಲಿ 7 ವಿಕೆಟ್‌ಗೆ 202 ರನ್‌ ಗಳಿಸಲಷ್ಟೇ ಶಕ್ತವಾಗಿ ಸೋಲು ಕಂಡಿತು.