Friday, 13th December 2024

ತಂಡದ ಗೆಲುವಿಗೆ ಕುಣಿದು ಕುಪ್ಪಳಿಸಿದ ಕಾವ್ಯಾ ಮಾರನ್​

ಹೈದರಾಬಾದ್​: ಗುರುವಾರ ರಾತ್ರಿ ನಡೆದ ಐಪಿಎಲ್​ನ 50ನೇ ಪಂದ್ಯದಲ್ಲಿ ಭುವನೇಶ್ವರ್​ ಕುಮಾರ್ ಅವರು ಅಂತಿಮ ಎಸೆತದ ಮ್ಯಾಜಿಕ್​ನಿಂದ ಸನ್​ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್​ ರಾಯಲ್ಸ್ ವಿರುದ್ಧ ರೋಚಕ 1 ರನ್​ ಅಂತರದ ಗೆಲುವನ್ನು ಹೆಚ್ಚು ಸಂಭ್ರಮಿಸಿದ್ದು ತಂಡದ ಮಾಲಕಿ ಕಾವ್ಯಾ ಮಾರನ್​.

ಗ್ಯಾಲರಿಯಲ್ಲಿದ್ದ ಕಾವ್ಯ ತಂಡ ಗೆಲ್ಲುತ್ತಿದ್ದಂತೆ ಫೂಲ್​ ಜೋಶ್​ನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.

ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ.

ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.