ಮುಂಬೈ: ಏಕದಿನ ವಿಶ್ವಕಪ್ ಕ್ರಿಕೆಟ್(2023ರ) ನ ಪ್ರಮುಖ ಘಟ್ಟದಲ್ಲಿ ಗುರುವಾರ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಲಂಕಾ ನಾಯಕ ಕುಸಾಲ್ ಮೆಂಡಿಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇತ್ತೀಚಿನ ವರದಿ ಪ್ರಕಾರ, ಭಾರತದ ನಾಯಕ ರೋಹಿತ್ ಶರ್ಮಾ ನಾಲ್ಕು ರನ್ ಗಳಿಸಿ ಔಟಾದರು. ರೋಹಿತ್ ಶರ್ಮಾ ತಮ್ಮ ತವರು ಪಿಚ್ನಲ್ಲಿ ನಾಲ್ಕು ರನ್ ಗಳಿಸಿ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.
ಭಾರತ ಏಕದಿನ ವಿಶ್ವಕಪ್ 2023 ರಲ್ಲಿ (Cricket World Cup) ಇದುವರೆಗೆ ಆಡಿದ ಎಲ್ಲ ಆರು ಪಂದ್ಯಗಳನ್ನು ಗೆದ್ದಿದೆ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 87 ರನ್ ಗಳಿಸಿದ್ದರು. ದೊಡ್ಡ ಹೊಡೆತ ಹೊಡೆಯಲು ಹೋಗಿ ಔಟಾಗುವ ಮೂಲಕ ಶತಕ ವಂಚಿತರಾದರು.
ರೋಹಿತ್ ಶರ್ಮಾರ ಅವರ ಅದ್ಭುತ ಆಟದ ಪ್ರದರ್ಶನಕ್ಕಾಗಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದರು. ಈ ವಿಶ್ವಕಪ್ ಪಂದ್ಯಾವಳಿಯಲ್ಲಿ ರೋಹಿತ್ಗೆ ಇದು ಎರಡನೇ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯಾಗಿದೆ. ಏಕದಿನ ವಿಶ್ವಕಪ್‌ಗಳ ಇತಿಹಾಸದಲ್ಲಿ ಒಂಬತ್ತು ಪಂದ್ಯಶ್ರೇಷ್ಠ ಪ್ರಶಸ್ತಿಗಳೊಂದಿಗೆ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಸಚಿನ್ ಅವರ ದಾಖಲೆಯನ್ನು ಸರಿಗಟ್ಟಲು ರೋಹಿತ್ ಶರ್ಮಾಗೆ ಇನ್ನೂ ಎರಡು ಹೆಜ್ಜೆ ಬೇಕಾಗಿದೆ.
ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.