Wednesday, 11th December 2024

ಶ್ರೀಲಂಕಾದ ಆಫ್’ಸ್ಪಿನ್ನರ್‌ ಮುತ್ತಯ್ಯ ಮುರಳೀಧರನ್ ಇಂದು ಡಿಸ್ಚಾರ್ಜ್‌

ಚೆನ್ನೈ: ಹೃದಯ ನೋವು ಕಾಣಿಸಿಕೊಂಡು ಆಯಂಜಿಯೊಪ್ಲಾಸ್ಟಿಗೆ ಒಳಗಾಗಿರುವ ಶ್ರೀಲಂಕಾದ ಆಫ್ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಬಳಿಕ ಮುರಳೀಧರನ್ ಸಹಜ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬೌಲಿಂಗ್ ಕೋಚ್ ಆಗಿರುವ ಮುರಳೀಧರನ್ ಅವರಿಗೆ ಸ್ಟಂಟ್ ಅಳವಡಿಸಲಾಗಿದೆ. ಚೆನ್ನೈನ ಗ್ರೀಮ್ಸ್ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ಮುರಳೀಧರನ್‌ ಅವರನ್ನು ದಾಖಲಿಸಲಾಗಿತ್ತು.

ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಮುತ್ತಯ್ಯ ಮುರಳೀಧರನ್ ಹೆಸರಲ್ಲಿದೆ. 133 ಟೆಸ್ಟ್ ಪಂದ್ಯಗಳಲ್ಲಿ ದಾಖಲೆಯ 800 ವಿಕೆಟ್‌ಗಳನ್ನು ಪಡೆದಿದ್ದಾರೆ. ಹಾಗೆಯೇ 350 ಏಕದಿನ ಪಂದ್ಯಗಳಲ್ಲಿ 524 ವಿಕೆಟ್ ಪಡೆದಿದ್ದಾರೆ.

2015ರಿಂದ ಅವರು ಸನ್‌ರೈಸರ್ಸ್‌ ಹೈದರಾಬಾದ್ ತಂಡಕ್ಕೆ ಬೌಲಿಂಗ್‌ ಕೋಚ್ ಹಾಗೂ ಮೆಂಟರ್ ಆಗಿದ್ದಾರೆ.