State-level junior athletics meet: ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ಸ್ ಕೂಟಕ್ಕೆ ಚಾಲನೆ: ವಿಜೇತರಿಗೆ ಪದಕ ಪ್ರದಾನ ಮಾಡಿದ ಮಂಚನಬಲೆ ಶ್ರೀನಿವಾಸ್
ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆ ಹಾಗೂ ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತುಮಕೂರು ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಅ.5ರಿಂದ 7ರವರೆಗೆ ನಡೆದ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಿತು.
-
ತುಮಕೂರು: ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆ ಹಾಗೂ ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತುಮಕೂರು ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಅ.5ರಿಂದ 7ರವರೆಗೆ ನಡೆದ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಿತು.
ರಾಜ್ಯದ 31 ಜಿಲ್ಲೆಗಳಿಂದ 14, 16, 18 ಮತ್ತು 20 ವರ್ಷದೊಳಗಿನ ವಿಭಾಗಗಳ ಸಾವಿರಕ್ಕೂ ಅಧಿಕ ಬಾಲಕ–ಬಾಲಕಿಯರು ಕೂಟದಲ್ಲಿ ಭಾಗವಹಿಸಿದ್ದರು. ಕ್ರೀಡಾಕೂಟವನ್ನು ಉಪ ಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ.ಜಿ.ಪರಮೇಶ್ವರ್(Dr G Parameshwar) ಉದ್ಘಾಟಿಸಿದರು.
ಇದನ್ನೂ ಓದಿ: Cricket Betting: ಕ್ರಿಕೆಟ್ ಬೆಟ್ಟಿಂಗ್ ದಂಧೆ ಬೇಧಿಸಿದ ಗ್ರಾಮಾಂತರ ಠಾಣೆಯ ಪೊಲೀಸರು
ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾದ ಅಶೋಕ ಸಿದ್ರೆ, ಯಳಗಣ್ಣನವರು, ಪ್ರಧಾನ ಕಾರ್ಯದರ್ಶಿ ರಾಜವೇಲು ಹಾಗೂ ತುಮಕೂರು ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮಂಚನ ಬಲೆ ಶ್ರೀನಿವಾಸ್ ಅವರು 18 ವರ್ಷದೊಳಗಿನ ಬಾಲಕರ 5000 ಮೀಟರ್ ಓಟ ಹಾಗೂ 16 ವರ್ಷ ದೊಳಗಿನ ಬಾಲಕಿಯರ ಎತ್ತರ ಜಿಗಿತದಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಪದಕ ಪ್ರದಾನ ಮಾಡಿದರು.
ರಾಜ್ಯದ ವಿವಿಧ ಜಿಲ್ಲೆಗಳ ಯುವ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಅನಾವರಣಗೊಳಿಸಲು ರಾಜ್ಯಮಟ್ಟದ ಕೂಟ ವೇದಿಕೆಯಾಯಿತು.