ಮೇಲ್ಬರ್ನ್: ಆಸ್ಟ್ರೇಲಿಯಾ ತಂಡದ ಸ್ಟೀವ್ ಸ್ಮಿತ್ ಭಾರತದ ವಿರುದ್ಧದ ಎರಡನೇ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿದರು. ಭಾರತದ ವಿರುದ್ಧ ಬ್ಯಾಟಿಂಗ್ ದಾಖಲೆ ಹೊಂದಿರುವ ಸ್ಮಿತ್ ಮೊದಲ ಬಾರಿಗೆ ಟೀಮ್ ಇಂಡಿಯಾ ವಿರುದ್ಧ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.
ಬಾಕ್ಸಿಂಗ್ ಡೇ ಟೆಸ್ಟ್‌ನ ಮೊದಲ ಸೆಶನ್‌ನಲ್ಲಿ ಭಾರತ ಉತ್ತಮ ಬೌಲಿಂಗ್ ದಾಳಿಯನ್ನು ಸಂಘಟಿಸಿತು. ಸ್ಟೀವ್ ಸ್ಮಿತ್ ವಿಕೆಟ್‌ಅನ್ನು ಶೀಘ್ರವಾಗಿ ಪಡೆಯುವ ಮೂಲಕ ಆರ್ ಅಶ್ವಿನ್ ತಂಡಕ್ಕೆ ಮೇಲುಗೈ ಒದಗಿಸಿದರು.
ಎಂಸಿಜಿಯಲ್ಲಿ ಸ್ಮಿತ್ ಶ್ರೇಷ್ಠ ಬ್ಯಾಟಿಂಗ್ ದಾಖಲೆ ಹೊಂದಿದ್ದು 113.5 ಸರಾಸರಿ ಹೊಂದಿದ್ದಾರೆ. ಇಲ್ಲಿ ಸ್ಮಿತ್ ನಾಲ್ಕು ಶತಕ ಹಾಗೂ ನೂರು ಅರ್ಧ ಶತಕವನ್ನು ಬಾರಿಸಿದ್ದಾರೆ. ಆರಂಭಿಕ ಆಟಗಾರ ಜೋ ಬರ್ನ್ಸ್ ಅವರನ್ನು ಕೂಡ ಶೂನ್ಯಕ್ಕೆ ಔಟ್ ಮಾಡಿದ್ದರು.