Monday, 13th January 2025

Champions Trophyಗೆ ಭಾರತ ತಂಡವನ್ನು ಆರಿಸಿದ ಸುನೀಲ್‌ ಗವಾಸ್ಕರ್‌, ಇರ್ಫಾನ್‌ ಪಠಾಣ್‌!

Sunil Gavaskar And Irfan Pathan Picks India Squad For ICC Champions Trophy 2025

ನವದಹೆಲಿ: ಮುಂಬರುವ 2025ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (Champions Trophy) ಟೂರ್ನಿಗೆ ಇನ್ನು ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಈ ಟೂರ್ನಿಗಾಗಿ ಬಹುತೇಕ ಎಲ್ಲಾ ತಂಡಗಳನ್ನು ಪ್ರಕಟಿಸಲಾಗಿದೆ. ಆದರೆ, ಭಾರತ ತಂಡವನ್ನು ಪ್ರಕಟಿಸುವುದು ಇನ್ನೂ ಬಾಕಿ ಇದೆ. ಇದರ ನಡುವೆ ಭಾರತದ ಮಾಜಿ ಕ್ರಿಕೆಟಿಗರಾದ ಸುನೀಲ್‌ ಗವಾಸ್ಕರ್‌ ಹಾಗೂ ಇರ್ಫಾನ್‌ ಪಠಾಣ್‌ ಅವರು ತಮ್ಮ ನೆಚ್ಚಿನ ಭಾರತ ತಂಡವನ್ನು ಪ್ರಕಟಿಸಿದ್ದಾರೆ.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯು ಜನವರಿ 19 ರಂದು ಟೀಮ್‌ ಇಂಡಿಯಾವನ್ನು ಪ್ರಕಟಿಸಲಾಗಿದೆ. ಇಂಗ್ಲೆಂಡ್‌ ವಿರುದ್ಧದ ಸರಣಿ ಹಾಗೂ ವಿಜಯ್‌ ಹಝಾರೆ ಟ್ರೋಫಿ ಟೂರ್ನಿಯ ಬಳಿಕ ಅಜಿತ್‌ ಅಗರ್ಕರ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯು ಟೀಮ್‌ ಇಂಡಿಯಾವನ್ನು ಆಯ್ಕೆ ಮಾಡಬಹುದು. ಇದಕ್ಕಾಗಿ ಐಸಿಸಿ ಬಳಿಕ ಬಿಸಿಸಿಐ ಮನವಿ ಮಾಡಿಕೊಂಡಿದೆ.

ಸ್ಟಾರ್‌ ಸ್ಪೋರ್ಟ್ಸ್‌ ಚರ್ಚೆಯಲ್ಲಿ ಮಾತನಾಡಿದ ಬ್ಯಾಟಿಂಗ್‌ ದಿಗ್ಗಜ ಸುನೀಲ್‌ ಗವಾಸ್ಕರ್‌, “ನಾನು ಆಯ್ಕೆ ಸಮಿತಿಯ ಭಾಗವಾಗಿದ್ದರೆ, ಇತ್ತೀಚೆಗೆ ಉತ್ತಮ ಪ್ರದರ್ಶನವನ್ನು ತೋರಿರುವವರ ಕಡೆ ಗಮನ ಕೊಡುತ್ತಿದ್ದೆ. ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕೆಎಲ್‌ ರಾಹುಲ್‌ ಉತ್ತಮ ಪ್ರದರ್ಶನವನ್ನು ತೋರಿದ್ದಾರೆ ಹಾಗೂ ಅದೇ ರೀತಿ ಶ್ರೇಯಸ್‌ ಅಯ್ಯರ್‌ ಕೂಡ ವಿಶ್ವಕಪ್‌ನಲ್ಲಿ ಆಡಿದ್ದರು. ಇವರಿಗೂ ಕೂಡ ಬೆಂಬಲ ನೀಡಬೇಕಾದ ಅಗತ್ಯವಿದೆ. ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಈ ಇಬ್ಬರೂ ಆಟಗಾರರನ್ನು ನಾನು ಬೆಂಬಲಿಸುತ್ತೇನೆ,” ಎಂದು ಹೇಳಿಕೊಂಡಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್‌ ಅಯ್ಯರ್‌, ಐದನೇ ಕ್ರಮಾಂಕದಲ್ಲಿ ಕೆಎಲ್‌ ರಾಹುಲ್‌ ಹಾಗೂ 6ನೇ ಕ್ರಮಾಂಕದಲ್ಲಿ ರಿಷಭ್‌ ಪಂತ್‌ ಆಡಬೇಕು. ಸಂಜು ಸ್ಯಾಮ್ಸನ್‌ ಕೂಡ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್‌ ಇರಬೇಕು. ಏಕೆಂದರೆ ಅವರು ಭಾರತದ ಪರ ಹಲವು ಶತಕಗಳನ್ನು ಸಿಡಿಸಿದ್ದಾರೆ. ರಾಷ್ಟ್ರೀಯ ತಂಡದ ಪರ ಶತಕಗಳ ಮೇಲೆ ಶತಕಗಳನ್ನು ಸಿಡಿಸಿರುವವರನ್ನು ಮರೆಯಲು ಹೇಗೆ ಸಾಧ್ಯ?” ಎಂದು ಗವಾಸ್ಕರ್‌ ತಿಳಿಸಿದ್ದಾರೆ.

ರವೀಂದ್ರ ಜಡೇಜಾರನ್ನು ಆರಿಸಿದ ಪಠಾಣ್‌

ಇದೇ ಚರ್ಚೆಯಲ್ಲಿದ್ದ ಇರ್ಫಾನ್‌ ಪಠಾಣ್‌, “ಭಾರತ ತಂಡದ ಇಂಥಾ ಸಂಯೋಜನೆಯಲ್ಲಿ ನೀವು ಎಂಟನೇ ಕ್ರಮಾಂಕಕ್ಕೆ ರವೀಂದ್ರ ಜಡೇಜಾ ಅವರನ್ನು ಉಳಿಸಿಕೊಳ್ಳಬೇಕಾಗುತ್ತದೆ. ಏಕೆಂದರೆ ಅವರು ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ತಂಡಕ್ಕೆ ನೆರವಾಗಲಿದ್ದಾರೆ. ಜಡೇಜಾ ಮೂಲಕ ಭಾರತ ತಂಡದ ಬ್ಯಾಟಿಂಗ್‌ ಉತ್ತಮವಾಗಿ ಕಾಣಲಿದೆ. ಫಾಸ್ಟ್‌ಬೌಲಿಂಗ್‌ ಆಲ್‌ರೌಂಡರ್‌ ತಂಡದಲ್ಲಿದ್ದರೆ, ಉತ್ತಮ ಆಯ್ಕೆಯನ್ನು ತಂದುಕೊಡಲಿದೆ. ನಿತೀಶ್‌ ಕುಮಾರ್‌ ರೆಡ್ಡಿ ಸದ್ಯ ಅಗ್ರ ದರ್ಜೆಯಲ್ಲಿದ್ದಾರೆ. ಆಸ್ಟ್ರೇಲಿಯಾದಲ್ಲಿ ಉತ್ತಮ ಪ್ರದರ್ಶನ ತೋರುವುದು ಅಷ್ಟೊಂದು ಸುಲಭವಲ್ಲ,” ಎಂದು ತಿಳಿಸಿದ್ದಾರೆ.

“ಮೊಹಮ್ಮದ್‌ ಸಿರಾಜ್‌ ಅವರನ್ನು ಮೂರನೇ ವೇಗಿಯಾಗಿ ಆಡಿಸಬೇಕು. ಆದರೆ, ಜಸ್‌ಪ್ರೀತ್‌ ಬುಮ್ರಾ ಮತ್ತು ಮೊಹಮ್ಮದ್‌ ಶಮಿ ಲಭ್ಯರಾದರೆ ಸಿರಾಜ್‌ಗೆ ಪ್ಲೇಯಿಂಗ್‌ XIನಲ್ಲಿ ಅವಕಾಶವಿಲ್ಲ. ಬುಮ್ರಾ ಅವರ ಕಥೆ ಏನಾಗಲಿದೆ ಎಂದು ಕಾದು ನೋಡಬೇಕಾಗಿದೆ. ಅವರ ಗಾಯ ಗಂಭೀರವಾಗಿಲ್ಲ ಎಂದು ನಾವು ಭಾವಿಸುತ್ತೇವೆ,” ಎಂದು ಮಾಜಿ ಆಲ್‌ರೌಂಡರ್‌ ಹೇಳಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿಗೆ ಸುನೀಲ್‌ ಗವಾಸ್ಕರ್‌-ಇರ್ಫಾನ್‌ ಪಠಾಣ್‌ ಆಯ್ಕೆಯ ಭಾರತ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಭ್‌ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬುಮ್ರಾ, ಶುಭಮನ್ ಗಿಲ್, ಸಂಜು ಸ್ಯಾಮ್ಸನ್, ಮೊಹಮ್ಮದ್ ಸಿರಾಜ್, ನಿತೀಶ್ ಕುಮಾರ್ ರೆಡ್ಡಿ

ಈ ಸುದ್ದಿಯನ್ನು ಓದಿ: Champions Trophy: ʻಭಾರತ ತಂಡಕ್ಕಿಂತ ಪಾಕಿಸ್ತಾನ ಬಲಿಷ್ಠವಾಗಿದೆʼ-ಮೊಹಮ್ಮದ್‌ ಆಮಿರ್‌!

Leave a Reply

Your email address will not be published. Required fields are marked *