ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ನ್ಯೂಜಿಲ್ಯಾಂಡ್‌ ಸರಣಿಯಲ್ಲೂ ಕೊಹ್ಲಿ 2 ಶತಕ ಬಾರಿಸಲಿದ್ದಾರೆ; ಗವಾಸ್ಕರ್‌ ವಿಶ್ವಾಸ

Sunil Gavaskar: ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 302 ರನ್‌ ಬಾರಿಸಿ ಉತ್ತಮ ಲಯದಲ್ಲಿರುವ ವಿರಾಟ್‌ ಕೊಹ್ಲಿ 2026ರ ಜನವರಿಯಲ್ಲಿ ನ್ಯೂಜಿಲೆಂಡ್‌ ವಿರುದ್ಧದ ಏಕದಿನ ವಿರುದ್ಧದ ಸರಣಿಯ ಮೂಲಕ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲಿದ್ದಾರೆ.

ಕೊಹ್ಲಿ 100 ಶತಕ ಬಾರಿಸಿಯೇ ನಿವೃತ್ತಿ; ಭವಿಷ್ಯ ನುಡಿದ ಗವಾಸ್ಕರ್‌

Virat Kohli -

Abhilash BC
Abhilash BC Dec 8, 2025 9:13 AM

ಮುಂಬಯಿ, ಡಿ.8: ದಕ್ಷಿಣ ಆಫ್ರಿಕಾ ವಿರುದ್ಧದ (IND vs SA) ಮೂರು ಪಂದ್ಯಗಳ ತವರಿನ ಏಕದಿನ ಸರಣಿಯಲ್ಲಿ ವಿರಾಟ್‌ ಕೊಹ್ಲಿಯವರು (Virat Kohli) ಭರ್ಜರಿ ಪ್ರದರ್ಶನ ನೀಡಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ಆರಂಭಿಕ ಎರಡು ಪಂದ್ಯಗಳಲ್ಲಿ ಸತತ ಎರಡು ಶತಕಗಳು ಮತ್ತು ವಿಶಾಖಪಟ್ಟಣಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಬೆನ್ನಲ್ಲೇ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 84 ಶತಕ ಸಿಡಿಸಿರುವ ವಿರಾಟ್‌ ಕೊಹ್ಲಿಯವರು ನೂರು ಶತಕಗಳನ್ನು ಬಾರಿಸುತ್ತಾರೆ ಎಂದು ಸುನೀಲ್‌ ಗವಾಸ್ಕರ್‌ (Sunil Gavaskar) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸ್ಟಾರ್‌ ಸ್ಪೋರ್ಟ್ಸ್‌ ಜತೆ ಮಾತನಾಡಿರುವ ಮಾಜಿ ಕ್ರಿಕೆಟಿಗ ಸುನೀಲ್‌ ಗವಾಸ್ಕರ್‌, "ಏಕೆ ಬೇಡ? ಅವರು ಇನ್ನೂ ಮೂರು ವರ್ಷ ಆಡಿದರೂ, ಅವರಿಗೆ ಇಲ್ಲಿಂದ 16 ಶತಕಗಳು ಬೇಕಾಗುತ್ತವೆ. ಅವರು ಬ್ಯಾಟಿಂಗ್ ಮಾಡುತ್ತಿರುವ ರೀತಿಯನ್ನು ನೋಡಿದರೆ ಇದು ಸಾಧ್ಯ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ ಎರಡು ಶತಕಗಳನ್ನು ಗಳಿಸುವ ವಿಶ್ವಾಸವಿದೆ" ಎಂದು ಗವಾಸ್ಕರ್ ಹೇಳಿದ್ದಾರೆ.

ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡೂಲ್ಕರ್‌ 51 ಟೆಸ್ಟ್‌ ಶತಕಗಳು ಹಾಗ 49 ಏಕದಿನ ಶತಕಗಳನ್ನು ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನೂರು ಶತಕಗಳನ್ನು ಬಾರಿಸಿದ ವಿಶ್ವ ದಾಖಲೆ ಹೊಂದಿದ್ದಾರೆ. ಸಚಿನ್‌ ತೆಂಡೂಲ್ಕರ್‌ ಅವರು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿ ಬದುಕಿನಲ್ಲಿ 200 ಟೆಸ್ಟ್‌ ಹಾಗೂ 463 ಏಕದಿನ ಪಂದ್ಯಗಳು ಸೇರಿದಂತೆ ಒಟ್ಟು 663 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಕಳೆದ ಮೇ ತಿಂಗಳಲ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ ವಿರಾಟ್‌ ಕೊಹ್ಲಿಯವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 123 ಪಂದ್ಯಗಳು ಮತ್ತು ಪಂದ್ಯಗಳನ್ನಾಡಿದ್ದು, 30 ಶತಕಗಳು ಹಾಗೂ ಏಕದಿನ ಮಾದರಿಯಲ್ಲಿ 54 ಶತಕಗಳನ್ನು ಬಾರಿಸಿದ್ದಾರೆ.

ಇದನ್ನೂ ಓದಿ Virat Kohli: ವಿರಾಟ್ ಕೊಹ್ಲಿ-ನಟಿ ಜೆನಿಲಿಯಾ ಅಭಿನಯದ ಆ ಜಾಹೀರಾತು ಪ್ರಸಾರವಾದ ತಕ್ಷಣಕ್ಕೆ ಬ್ಯಾನ್ ಆಯ್ತು; ಕಾರಣ ಏನು?

ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 302 ರನ್‌ ಬಾರಿಸಿ ಉತ್ತಮ ಲಯದಲ್ಲಿರುವ ವಿರಾಟ್‌ ಕೊಹ್ಲಿ 2026ರ ಜನವರಿಯಲ್ಲಿ ನ್ಯೂಜಿಲೆಂಡ್‌ ವಿರುದ್ಧದ ಏಕದಿನ ವಿರುದ್ಧದ ಸರಣಿಯ ಮೂಲಕ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲಿದ್ದಾರೆ. ನ್ಯೂಜಿಲೆಂಡ್‌ ವಿರುದ್ಧ ಭಾರತ 3 ಏಕದಿನ ಪಂದ್ಯಗಳು ಮತ್ತು 5 ಪಂದ್ಯಗಳ ಟಿ20ಐ ಸರಣಿ ಆಡಲಿದೆ. ಇದಕ್ಕೂ ಮುನ್ನ ಕೊಹ್ಲಿ ವಿಜಯ್‌ ಹಜಾರೆ ಟ್ರೋಫಿ ಆಡಲಿದ್ದಾರೆ.

ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿ ವೇಳಾಪಟ್ಟಿ

ಮೊದಲ ಏಕದಿನ ಪಂದ್ಯ; ಜನವರಿ 11, ವಡೋದರ

ದ್ವಿತೀಯ ಏಕದಿನ ಪಂದ್ಯ; ಜನವರಿ 18, ಇಂದೋರ್‌

ಮೂರನೇ ಏಕದಿನ ಪಂದ್ಯ; ಜನವರಿ 23, ರಾಯ್ಪುರ