ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MI vs RCB: ಮೊದಲ ಮಗುವಿನ ನಿರೀಕ್ಷೆ; ಆರ್‌ಸಿಬಿ ಪಂದ್ಯಕ್ಕೆ ಸೂರ್ಯಕುಮಾರ್‌ ಅಲಭ್ಯ

Suryakumar Yadav: ಸೂರ್ಯಕುಮಾರ್ ಈ ಪಂದ್ಯಕ್ಕೆ ಅಲಭ್ಯರಾದರೆ, ಹಾರ್ದಿಕ್ ಪಾಂಡ್ಯ ಇನ್ನೂ ಬೆನ್ನುನೋವಿನಿಂದ ಚೇತರಿಸಿಕೊಳ್ಳುತ್ತಿರುವುದರಿಂದ ಮುಂಬೈ ತಂಡ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ತಮ್ಮ ಮೂರನೇ ನಾಯಕನೊಂದಿಗೆ ಆಡುವ ಸಾಧ್ಯತೆ ಇದೆ. ಹಾರ್ದಿಕ್‌ಗೆ ಬೆನ್ನುನೋವಿನ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಸೂರ್ಯಕುಮಾರ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ತಂಡವನ್ನು ಮುನ್ನಡೆಸಿದ್ದರು.

ಮೊದಲ ಮಗುವಿನ ನಿರೀಕ್ಷೆ; ಆರ್‌ಸಿಬಿ ಪಂದ್ಯಕ್ಕೆ ಸೂರ್ಯಕುಮಾರ್‌ ಅಲಭ್ಯ

Suryakumar and Devisha Project -

Abhilash BC
Abhilash BC May 7, 2026 12:35 PM

ರಾಯ್ಪುರ, ಮೇ 7: ಮೇ 10, ಭಾನುವಾರ ರಾಯ್‌ಪುರದಲ್ಲಿ ನಡೆಯಲಿರುವ ಐಪಿಎಲ್ 2026ರ ರಾಯಲ್ ಚಾಲೆಂಜರ್ಸ್ ಬೆಂಗಳೂರು(MI vs RCB) ವಿರುದ್ಧದ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್(Suryakumar Yadav) ಗೈರುಹಾಜರಾಗಲಿದ್ದಾರೆ ಎನ್ನಲಾಗಿದೆ. ಅವರ ಪತ್ನಿ ದೇವಿಶಾ ಶೆಟ್ಟಿ ತಮ್ಮ ಮೊದಲ ಮಗುವಿನ ಜನನದ ನಿರೀಕ್ಷೆಯಲ್ಲಿದ್ದಾರೆ, ಇದರಿಂದಾಗಿ ಮುಂಬೈ ಉಪನಾಯಕ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಸೂರ್ಯಕುಮಾರ್ ಈ ಪಂದ್ಯಕ್ಕೆ ಅಲಭ್ಯರಾದರೆ, ಹಾರ್ದಿಕ್ ಪಾಂಡ್ಯ ಇನ್ನೂ ಬೆನ್ನುನೋವಿನಿಂದ ಚೇತರಿಸಿಕೊಳ್ಳುತ್ತಿರುವುದರಿಂದ ಮುಂಬೈ ತಂಡ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ತಮ್ಮ ಮೂರನೇ ನಾಯಕನೊಂದಿಗೆ ಆಡುವ ಸಾಧ್ಯತೆ ಇದೆ. ಹಾರ್ದಿಕ್‌ಗೆ ಬೆನ್ನುನೋವಿನ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಸೂರ್ಯಕುಮಾರ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ತಂಡವನ್ನು ಮುನ್ನಡೆಸಿದ್ದರು. ಆರ್‌ಸಿಬಿ ಪಂದ್ಯದಿಂದ ಇಬ್ಬರೂ ಕ್ರಿಕೆಟಿಗರು ಹೊರಗುಳಿಯುವ ನಿರೀಕ್ಷೆಯಿರುವುದರಿಂದ, ವೇಗಿ ಜಸ್ಪ್ರೀತ್ ಬುಮ್ರಾ ತಂಡ ಮುನ್ನಡೆಸುವವರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದಾರೆ.

ಸೂರ್ಯಕುಮಾರ್ ಯಾದವ್ ಅವರು ಜುಲೈ 7, 2016 ರಂದು ದಕ್ಷಿಣ ಭಾರತದ ಸಂಪ್ರದಾಯದಂತೆ ದೇವಿಶಾ ಶೆಟ್ಟಿ ಅವರನ್ನು ವಿವಾಹವಾದರು. ಇವರು ಮುಂಬೈನ ಆರ್.ಎ. ಪೋಡರ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಿಚಿತರಾಗಿದ್ದರು. ದೇವಿಶಾ ಶೆಟ್ಟಿ ಭರತನಾಟ್ಯ ಕಲಾವಿದೆ ಮತ್ತು ಸೂರ್ಯಕುಮಾರ್ ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ಬೆಂಬಲವಾಗಿ ನಿಂತಿದ್ದಾರೆ.

ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಅವರು ಮೂಲತಃ ಉಡುಪಿ ಜಿಲ್ಲೆಯ ಕಾಪು ತಾಲೂಕಿನವರು. ಈ ಕಾರಣದಿಂದಲೇ ಸೂರ್ಯಕುಮಾರ್ ಅವರಿಗೆ ಕರಾವಳಿಯ ದೈವ-ದೇವಸ್ಥಾನಗಳ ಮೇಲೆ ಅಪಾರ ಗೌರವ ಇದೆ.

ಜಿಂಬಾಬ್ವೆ ವಿರುದ್ಧದ ಟಿ20, ಏಕದಿನ ಸರಣಿಗೆ ಭಾರತ ಮಹಿಳಾ ತಂಡ ಆತಿಥ್ಯ

2019 ರಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ಫಿಟ್‌ನೆಸ್ ಹಾಗೂ ಆಟದ ಮೇಲಿನ ಗಮನವನ್ನು ಕಳೆದುಕೊಳ್ಳುತ್ತಿದ್ದಾಗ, ಅವರಿಗೆ ಬೆನ್ನೆಲುಬಾಗಿ ನಿಂತಿದ್ದೇ ದೇವಿಶಾ. ಅವರ ಆಹಾರ, ವ್ಯಾಯಾಮದಿಂದ ಹಿಡಿದು ಪ್ರತಿಯೊಂದು ವಿಚಾರದಲ್ಲೂ ಕಾಳಜಿ ವಹಿಸಿ, ಸೂರ್ಯ ಮತ್ತೆ ಫಾರ್ಮ್‌ಗೆ ಮರಳುವಂತೆ ಮಾಡಿದ್ದರು.

ಈ ಬಾರಿ ಕಳಪೆ ಫಾರ್ಮ್‌

ಈ ಬಾರಿಯ ಐಪಿಎಲ್‌ನಲ್ಲಿ ಸೂರ್ಯಕುಮಾರ್‌ ಅತ್ಯಂತ ಕಳಪೆ ಮಟ್ಟದ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದಾರೆ. ಆಡಿದ ಆಡಿದ 10 ಇನಿಂಗ್ಸ್‌ಗಳಲ್ಲಿ ಗಳಿಸಿದ್ದು ಕೇವಲ 195 ರನ್‌ ಮಾತ್ರ. ಇದುವರೆಗೆ ಅವರು ಆಡಿದ ಐಪಿಎಲ್‌ ಸೀನನ್‌ನಲ್ಲಿಯೇ ಅತ್ಯಂತ ಕಳಪೆ ಪ್ರದರ್ಶನ ಇದಾಗಿದೆ. ಮುಂಬೈ ತಂಡ ಪ್ರದರ್ಶನವೂ ಕೂಡ ಇದೇ ರೀತಿಯಲ್ಲಿದೆ. ಆಡಿದ 10 ಪಂದ್ಯಗಳಲ್ಲಿ ಕೇವಲ 3 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಆರ್‌ಸಿಬಿ ವಿರುದ್ಧ ಸೋತರೆ ಪ್ಲೇ ಆಫ್‌ನಿಂದ ಅಧಿಕೃತವಾಗಿ ಹೊರಬೀಳಲಿದೆ.