Friday, 18th October 2024

ಸೆ.20ರಿಂದ ಭಾರತ -ಆಸ್ಟ್ರೇಲಿಯಾ T20 ಸರಣಿ ಆರಂಭ

ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು T20 ಪಂದ್ಯಗಳ ಸರಣಿ ಸೆ.20ರಿಂದ ಆರಂಭವಾಗಲಿದೆ.
ಟಿ20 ಸರಣಿಯ ಮೊದಲ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಟಿ20 ವಿಶ್ವಕಪ್ ತಯಾ ರಿಯ ಭಾಗವಾಗಿ ಭಾರತ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಆಡಲಿದೆ. ಈ ತಿಂಗಳ 20 ಮತ್ತು 25 ರ ನಡುವೆ ಭಾರತ ಮತ್ತು ಆಸ್ಟ್ರೇಲಿಯಾ ಮೂರು T20I ಪಂದ್ಯಗಳನ್ನು ಆಡಲಿವೆ.
ಏಷ್ಯಾಕಪ್ ನಲ್ಲಿ ಅನಿರೀಕ್ಷಿತವಾಗಿ ನಿರಾಸೆ ಅನುಭವಿಸಿರುವ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಅವಕಾಶ ಭಾರತ ತಂಡಕ್ಕಿದೆ.
ವೇಳಾಪಟ್ಟಿ:
ಮೊದಲ T20- 20 ಸೆಪ್ಟೆಂಬರ್, ಮೊಹಾಲಿ
ಎರಡನೇ T20- 23 ಸೆಪ್ಟೆಂಬರ್, ನಾಗ್ಪುರ
ಮೂರನೇ T20- 25 ಸೆಪ್ಟೆಂಬರ್, ಹೈದರಾಬಾದ್

ಪಂದ್ಯದ ನೇರಪ್ರಸಾರ ಎಲ್ಲಿ?: ಇನ್ನು, ಭಾರತ ಮತ್ತು ಆಸ್ಟ್ರೇಲಿಯಾ ಪಂದ್ಯವು ಭಾರತದಲ್ಲಿಯೇ ನಡೆಲಿರುವ ಕಾರಣ ಅದರಲ್ಲಿಯೂ ಟಿ20 ಪಂದ್ಯಗಳಾಗಿರುವುದರಿಂದ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ನಡೆಯುತ್ತದೆ.

IND vs AUS ತಂಡಗಳು: ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (WK), ದಿನೇಶ್ ಕಾರ್ತಿಕ್ (WK), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

ಆಸ್ಟ್ರೇಲಿಯಾ ತಂಡ: ಆರನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಡೇನಿಯಲ್ ಸ್ಯಾಮ್ಸ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ.