Thursday, 12th December 2024

2021ರಲ್ಲಿ ಟಿ20 ವಿಶ್ವಕಪ್ ಭಾರತದಲ್ಲೇ ನಡೆಯಲಿದೆ: ಐಸಿಸಿ

ನವದೆಹಲಿ: ಮುಂಬರುವ 2021ರಲ್ಲಿ ನಿರ್ಧಾರವಾಗಿರುವ ಟಿ20 ವಿಶ್ವಕಪ್, ಪೂರ್ವ ಯೋಜನೆಯಂತೆಯೇ ಭಾರತದಲ್ಲಿ ನಡೆಯಲಿದೆ ಎಂಬುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.

ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ಐರ್ಲೆಂಡ್, ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ಜೊತೆಗೆ ಹೊಸ ಅರ್ಹ ತಂಡಗಳಾಗಿ ಪಪುವಾ ನ್ಯೂಗಿನಿ ನಮೀಬಿಯಾ, ನೆದರ್ಲ್ಯಾಂಡ್ಸ್, ಓಮನ್ ಮತ್ತು ಸ್ಕಾಟ್ಲೆಂಡ್ ತಂಡಗಳು ಸೇರುವ 16 ದೇಶಗಳು ಪಾಲ್ಗೊಳ್ಳುವ ಟೂರ್ನಿ ಮುಂದಿನ ವರ್ಷ ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ನಿಗದಿಯಾಗಿದೆ.

“ಈ ವರೆಗಿನ ತೀರ್ಮಾನದಂತೆ ಪೂರ್ವನಿಗದಿಯಂತೆಯೇ ವಿಶ್ವಕಪ್ ಪಂದ್ಯಾವಳಿ ಭಾರತದಲ್ಲೇ ಉಳಿದುಕೊಳ್ಳಲಿದೆ” ಎಂಬು ದನ್ನು ಸ್ಪಷ್ಟಪಡಿಸಿದ್ದಾರೆ.

ಈ ವರ್ಷದ ನವೆಂಬರ್ ತಿಂಗಳಿನಲ್ಲಿ ನಡೆಯಬೇಕಿದ್ದ ವಿಶ್ವಕಪ್‌ಅನ್ನು ಕಳೆದ ಆಗಸ್ಟ್‌ನಲ್ಲಿ ಮುಂದೂಡುವ ತೀರ್ಮಾನ ಕೈಗೊಳ್ಳ ಲಾಗಿತ್ತು. 2022ರಲ್ಲಿ ಆಸ್ಟ್ರೇಲಿಯಾ ವಿಶ್ವಕಪ್ ಆಯೋಜನೆ ಮಾಡುವ ಬಗ್ಗೆ ನಿರ್ಧರಿಸಲಾಗಿತ್ತು. ಭಾರತ ಇದಕ್ಕೂ ಮುನ್ನ 2016 ರಲ್ಲಿ ಟಿ20 ವಿಶ್ವಕಪ್ ಆಯೋಜಿಸಿತ್ತು. ಆಗ ವೆಸ್ಟ್ ಇಂಡೀಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತ್ತು