ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಭಾರತ ಪಂದ್ಯದ ಬಹಿಷ್ಕಾರದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ; ಖಚಿತಪಡಿಸಿದ ಪಾಕ್‌ ಪ್ರಧಾನಿ

T20 World Cup: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಈ ಹಿಂದೆ ಒಂದು ಹೇಳಿಕೆಯನ್ನು ಬಿಡುಗಡೆ ಮಾಡಿತ್ತು, ಅದರಲ್ಲಿ ಪಾಕಿಸ್ತಾನವು ಜಾಗತಿಕ ಪಂದ್ಯಾವಳಿಯಲ್ಲಿ ಆಯ್ದವಾಗಿ ಭಾಗವಹಿಸುವ ನಿರ್ಧಾರದ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು ಮತ್ತು ಇದು ನ್ಯಾಯಸಮ್ಮತತೆ, ಸಮಗ್ರತೆ ಮತ್ತು ಸ್ಪರ್ಧಾತ್ಮಕ ಸಮತೋಲನದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಪರಿಗಣಿಸಿತ್ತು.

ಯಾವುದೇ ಕಾರಣಕ್ಕೂ ಭಾರತ ವಿರುದ್ಧ ಪಂದ್ಯ ಆಡಲ್ಲ; ಪಾಕ್‌ ಪ್ರಧಾನಿ

IND vs PAK -

Abhilash BC
Abhilash BC Feb 5, 2026 8:58 AM

ಲಾಹೋರ್‌, ಫೆ.5: ಫೆ.15ರಂದು ಕೊಲಂಬೊದಲ್ಲಿ ನಿಗದಿಯಾಗಿರುವ ಭಾರತ ವಿರುದ್ಧ ಐಸಿಸಿ ಟಿ20 ವಿಶ್ವಕಪ್‌ ಪಂದ್ಯ ಬಹಿಷ್ಕಾರ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮತ್ತೊಮ್ಮೆ ದೃಢಪಡಿಸಿದರು.

ಇಸ್ಲಾಮಾಬಾದ್‌ನಲ್ಲಿ ಫೆಡರಲ್ ಕ್ಯಾಬಿನೆಟ್ ಉದ್ದೇಶಿಸಿ ಮಾತನಾಡಿದ ಅವರು, ಭಾರತ ವಿರುದ್ಧ ಆಡುವ ವಿಚಾರದಲ್ಲಿ ಸ್ಪಷ್ಟವಾದ ನಿಲುವನ್ನು ತೆಗೆದುಕೊಳ್ಳಲು ಬಯಸುತ್ತೇವೆ ಮತ್ತು ಭಾರತದೊಂದಿಗೆ ಆಟವಾಡುವುದಿಲ್ಲ ಎಂದು ಪುನರುಚ್ಚರಿಸಿದರು. "ಟಿ20 ವಿಶ್ವಕಪ್‌ಗೆ ಸಂಬಂಧಿಸಿದಂತೆ ನಾವು ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬ ಸ್ಪಷ್ಟ ನಿಲುವನ್ನು ತೆಗೆದುಕೊಂಡಿದ್ದೇವೆ" ಎಂದು ಪಾಕಿಸ್ತಾನ ಪ್ರಧಾನಿ ಹೇಳಿದರು.

"ಕ್ರೀಡೆಯಲ್ಲಿ ಯಾವುದೇ ರಾಜಕೀಯ ಇರಬಾರದು. ನಾವು ಎಚ್ಚರಿಕೆಯಿಂದ ಚರ್ಚಿಸಿದ ನಂತರ ಈ ನಿಲುವನ್ನು ತೆಗೆದುಕೊಂಡಿದ್ದೇವೆ. ಇದು ಸೂಕ್ತ ನಿರ್ಧಾರ ಎಂದು ಹೇಳಿದರು.

ಭಾರತವು ಫೆಬ್ರವರಿ 15 ರ ಭಾನುವಾರದಂದು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಪಾಕಿಸ್ತಾನ ವಿರುದ್ಧ ಆಡಬೇಕಿದೆ. ಗುಂಪು ಹಂತದ ಪಂದ್ಯದ ನಂತರ, ಎರಡೂ ತಂಡಗಳು ಫೈನಲ್‌ನಲ್ಲಿಯೂ ಪರಸ್ಪರ ಎದುರಾಗಬಹುದು. ಪ್ರಶಸ್ತಿಗಾಗಿ ಭಾರತ ವಿರುದ್ಧ ಆಡುವ ಸಂದರ್ಭ ಎದುರಾದರೆ ಪಾಕಿಸ್ತಾನದ ನಿಲುವು ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಈ ಹಿಂದೆ ಒಂದು ಹೇಳಿಕೆಯನ್ನು ಬಿಡುಗಡೆ ಮಾಡಿತ್ತು, ಅದರಲ್ಲಿ ಪಾಕಿಸ್ತಾನವು ಜಾಗತಿಕ ಪಂದ್ಯಾವಳಿಯಲ್ಲಿ ಆಯ್ದವಾಗಿ ಭಾಗವಹಿಸುವ ನಿರ್ಧಾರದ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು ಮತ್ತು ಇದು ನ್ಯಾಯಸಮ್ಮತತೆ, ಸಮಗ್ರತೆ ಮತ್ತು ಸ್ಪರ್ಧಾತ್ಮಕ ಸಮತೋಲನದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಪರಿಗಣಿಸಿತ್ತು.

ಟಿ20 ವಿಶ್ವಕಪ್‌ ಹಿನ್ನೋಟ; ಇದುವರೆಗಿನ ದಾಖಲೆ ಪಟ್ಟಿ ಇಲ್ಲಿದೆ

ಐಸಿಸಿಯ ಪ್ರತಿ ಸದಸ್ಯ ರಾಷ್ಟ್ರವು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ದೇಶದ ಕ್ರಿಕೆಟ್‌ ಮಂಡಳಿಯ ಪರವಾಗಿ ಆ ದೇಶದ ಸರ್ಕಾರ ಅಥವಾ ಸಾರ್ವಜನಿಕ ಇಲಾಖೆ ನಿರ್ಧಾರ ಕೈಗೊಳ್ಳುವಂತಿಲ್ಲ. ಒಂದೊಮ್ಮೆ ಕ್ರಿಕೆಟ್‌ ಮಂಡಳಿಯ ಕಾರ್ಯಚಟುವಟಿಕೆಗಳಲ್ಲಿ ಸರ್ಕಾರ ತಲೆಹಾಕಿದರೆ, ಆ ದೇಶವನ್ನು ಅಮಾನತುಗೊಳಿಸಲು ಐಸಿಸಿಗೆ ಹಕ್ಕಿದೆ.

ಈ ಹಿಂದೆ 2019ರಲ್ಲಿ ಜಿಂಬಾಬ್ವೆ, 2023ರಲ್ಲಿ ಶ್ರೀಲಂಕಾ ಕ್ರಿಕೆಟ್‌ ತಂಡಗಳ ಕಾರ್ಯಚಟುವಟಿಕೆಗಳಲ್ಲಿ ಅಲ್ಲಿನ ಸರ್ಕಾರ ತಲೆಹಾಕಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ಐಸಿಸಿ, ಆ ದೇಶಗಳನ್ನು ಅಮಾನತುಗೊಳಿಸಿತ್ತು. ಬಳಿಕ ತಮ್ಮ ನಡೆಗೆ ಕ್ಷಮೆಯಾಚಿಸಿ, ಸರ್ಕಾರಗಳು ಯಾವುದೇ ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ ಎಂದು ಆ ಕ್ರಿಕೆಟ್‌ ಬೋರ್ಡ್‌ಗಳು ಭರವಸೆ ನೀಡಿದ ಬಳಿಕ ಅಮಾನತು ತೆರವುಗೊಳಿಸಲಾಗಿತ್ತು.