ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಶೀಘ್ರದಲ್ಲೇ ಟಿ20 ಸರಣಿಗೆ ಭಾರತ ತಂಡ ಪ್ರಕಟ; ಗಿಲ್ ಬದಲು ಜೈಸ್ವಾಲ್ ಆಯ್ಕೆ ಸಾಧ್ಯತೆ

T20I Squad Announcement: 2025 ರ ಏಷ್ಯಾಕಪ್ ಫೈನಲ್ ಮತ್ತು ಆಸ್ಟ್ರೇಲಿಯಾದಲ್ಲಿ ನಡೆದ ಐದು ಪಂದ್ಯಗಳ ಸರಣಿಯನ್ನು ತಪ್ಪಿಸಿಕೊಂಡಿದ್ದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಮಂಗಳವಾರ ಹೈದರಾಬಾದ್‌ನಲ್ಲಿ ಪಂಜಾಬ್ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದಲ್ಲಿ ತಮ್ಮ ಫಿಟ್ನೆಸ್ ಸಾಬೀತುಪಡಿಸಿದ ನಂತರ ಭಾರತದ ಟಿ20ಐ ತಂಡಕ್ಕೆ ಮರಳಲಿದ್ದಾರೆ.

Hardik, Jaiswal and Gill

ಮುಂಬಯಿ, ಡಿ.3: ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಭಾರತ ಪುರುಷರ ಕ್ರಿಕೆಟ್ ತಂಡವು ಐದು ಪಂದ್ಯಗಳ ಟಿ20ಐ(India Vs South Africa T20I) ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಸರಣಿಯ ಪಂದ್ಯಗಳು ಕ್ರಮವಾಗಿ ಡಿಸೆಂಬರ್ 9, 11, 14, 17 ಮತ್ತು 19 ರಂದು ಕಟಕ್, ಮುಲ್ಲನ್‌ಪುರ, ಧರ್ಮಶಾಲಾ, ಲಕ್ನೋ ಮತ್ತು ಅಹಮದಾಬಾದ್‌ನಲ್ಲಿ ನಡೆಯಲಿವೆ.

ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಹಿರಿಯ ಪುರುಷರ ಆಯ್ಕೆ ಸಮಿತಿಯು ಶೀಘ್ರದಲ್ಲೇ ತವರಿನ ಸರಣಿಗೆ(T20I Squad Announcement) ಭಾರತದ ತಂಡವನ್ನು ಘೋಷಿಸಲು ಸಜ್ಜಾಗಿದೆ. ಕುತ್ತಿಗೆ ನೋವಿನಿಂದಾಗಿ ತಂಡದಿಂದ ಹೊರಗುಳಿದಿರುವ ಶುಭಮನ್ ಗಿಲ್ ಅವರನ್ನು ಈ ಸರಣಿಗೆ ಆಯ್ಕೆ ಮಾಡಲಾಗುತ್ತದೆಯೇ ಎಂದು ಕಾದು ನೋಡಬೇಕಿದೆ. ಗಿಲ್ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಸರಣಗೆ ಪರಿಗಣಿಸದಿದ್ದರೆ, ಭಾರತೀಯ ಆಯ್ಕೆದಾರರು ಯಶಸ್ವಿ ಜೈಸ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ.

2025 ರ ಏಷ್ಯಾಕಪ್ ಫೈನಲ್ ಮತ್ತು ಆಸ್ಟ್ರೇಲಿಯಾದಲ್ಲಿ ನಡೆದ ಐದು ಪಂದ್ಯಗಳ ಸರಣಿಯನ್ನು ತಪ್ಪಿಸಿಕೊಂಡಿದ್ದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಮಂಗಳವಾರ ಹೈದರಾಬಾದ್‌ನಲ್ಲಿ ಪಂಜಾಬ್ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದಲ್ಲಿ ತಮ್ಮ ಫಿಟ್ನೆಸ್ ಸಾಬೀತುಪಡಿಸಿದ ನಂತರ ಭಾರತದ ಟಿ20ಐ ತಂಡಕ್ಕೆ ಮರಳಲಿದ್ದಾರೆ.

ಇದನ್ನೂ ಓದಿ IND vs SA: ಈ ಇಬ್ಬರಿಂದ ಡ್ರೆಸ್ಸಿಂಗ್‌ ರೂಂ ವಾತಾವರಣ ಚೆನ್ನಾಗಿದೆ'-ಹರ್ಷಿತ್‌ ರಾಣಾ!

ಭಾರತ ಸಂಭಾವ್ಯ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿ.ಕೀ.), ಜಿತೇಶ್ ಶರ್ಮಾ (ವಿ.ಕೀ.), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ.

ದಕ್ಷಿಣ ಆಫ್ರಿಕಾ ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನೀಲ್ ಬಾರ್ಟ್‌ಮ್ಯಾನ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜೊರ್ಜಿ, ಡೊನೊವನ್ ಫೆರೆರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಜಾರ್ಜ್ ಲಿಂಡೆ, ಕ್ವೆನಾ ಟ್ರಿಚ್ ನೊಯಿಲ್‌ಸ್ಟಾನ್, ಡೇವಿಡ್ ನೊಜಿಲ್‌ಸ್ಟಾನ್, ಲ್ಯುಂಗ್ರಿ ಎಮ್‌ಗಿಲ್, ಸ್ಟಬ್ಸ್.