Friday, 2nd June 2023

ಟಿ20 ವಿಶ್ವಕಪ್ ಆಯ್ಕೆಗೆ ತಮೀಮ್ ಇಕ್ಬಾಲ್ ಅಲಭ್ಯ

ಢಾಕಾ: ಬಾಂಗ್ಲಾದೇಶದ ಬ್ಯಾಟ್ಸ್ ಮನ್ ತಮೀಮ್ ಇಕ್ಬಾಲ್, ಯುಎಇಯಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್ ಗೆ ಆಯ್ಕೆಗೆ ಅಲಭ್ಯರಾಗಿದ್ದಾರೆ ಎಂದು ಘೋಷಿಸಿದ್ದಾರೆ.

ಏಪ್ರಿಲ್ ನಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ವೇಳೆ ತಮೀಮ್ ಮೊಣಕಾಲಿನ ಗಾಯದಿಂದ ಬಳಲುತ್ತಿದ್ದರು. ನಂತರ, ಜಿಂಬಾಬ್ವೆ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಬಳಿಕ, ಯುಎಇನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಿಂದಲೂ ದೂರ ಉಳಿಯಲು ನಿರ್ಧರಿಸಿ ದ್ದಾರೆ.

ಮಂಡಳಿಯ ಅಧ್ಯಕ್ಷ ನಜ್ಮುಲ್ ಹಸನ್ ಮತ್ತು ಮುಖ್ಯ ಆಯ್ಕೆಗಾರ ಮಿನ್ಹಾಜುಲ್ ಅಬೆದಿನ್ ಅವರನ್ನು ಕರೆ ಮಾಡಿದ್ದೆನು. ಟಿ20 ವಿಶ್ವಕಪ್ ನಲ್ಲಿ ಆಡಬಾರದು ಎಂದು ನಾನು ಭಾವಿಸುವುದಿಲ್ಲ. ನಾನು ಅದಕ್ಕೆ ಲಭ್ಯವಿರುವುದಿಲ್ಲ ಎಂದು ಅವರಿಗೆ ಹೇಳಿದೆ. ನಾನು ನಿವೃತ್ತಿ ಹೊಂದುತ್ತಿಲ್ಲ. ನಾನು ಈ ವಿಶ್ವಕಪ್ ಗೆ ಲಭ್ಯವಿಲ್ಲ’ ಎಂದು ತಿಳಿಸಿದ್ದಾರೆ.

error: Content is protected !!