ಮುಂಬೈ: ಆಸ್ಟ್ರೇಲಿಯಾ ಪ್ರವಾಸದಿಂದ ಭಾರತಕ್ಕೆ ಮರಳಿರುವ ಟೀಂ ಇಂಡಿಯಾದ ಐವರು ಸದಸ್ಯರಿಗೆ 7 ದಿನಗಳ ಕಡ್ಡಾಯ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ವರದಿಯಾಗಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಕ್ರಿಕೆಟ್ ತಂಡದ ಸದಸ್ಯರು ಕಡ್ಡಾಯ ಆರ್ಟಿ – ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು ಎಂದು ಬಿಎಂಸಿ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಹೇಳಿದ್ದಾರೆ. ಮುಂದಿನ 7 ದಿನಗಳವರೆಗೂ ಆಟಗಾರರಿಗೆ ಹೋಂ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ ಎಂದು ಹೇಳಿದರು.
ಬಿಎಂಸಿ ಸೂಚನೆಯಂತೆ, ಟೀಂ ಇಂಡಿಯಾ ಹಂಗಾಮಿ ನಾಯಕ ಅಜಿಂಕ್ಯ ರಹಾನೆ, ಆಟಗಾರರಾದ ರೋಹಿತ್ ಶರ್ಮಾ, ಶಾರ್ದೂಲ್ ಠಾಕೂರ್ ಹಾಗೂ ಪ್ರಥ್ವಿ ಶಾ ಹೋಂ ಮತ್ತು ಕೋಚ್ ರವಿ ಶಾಸ್ತ್ರಿ ಕೂಡ ಮುಂಬೈಗೆ ಬಂದಿಳಿದಿದ್ದು ಕ್ವಾರಂಟೈನ್ಗೆ ಒಳಗಾಗಿದ್ದಾರೆ.