Sunday, 15th December 2024

ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ: ಕೆ.ಎಲ್.ರಾಹುಲ್‌, ಕೊಹ್ಲಿ ವಾಪಸ್‌

ಮುಂಬೈ: ರನ್ ಬರ ಎದುರಿಸುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ, ಗಾಯದಿಂದ ಚೇತರಿಸಿಕೊಂಡ ಕೆ.ಎಲ್. ರಾಹುಲ್  ಏಷ್ಯಾಕಪ್ ಗೆ ಪ್ರಕಟಿಸಿದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಯುಎಇನಲ್ಲಿ ಆ.27ರಿಂದ ನಡೆಯಲಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಬಿಸಿಸಿಐ ಆಯ್ಕೆ ಸಮಿತಿ ಸೋಮವಾರ ಭಾರತ ತಂಡವನ್ನು ಪ್ರಕಟಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಈ ಸರಣಿ ಮೂಲಕ ತಂಡಕ್ಕೆ ಮರಳಿದ್ದಾರೆ. ರೋಹಿತ್ ಶರ್ಮ ತಂಡವನ್ನು ಮುನ್ನಡೆಸಲಿದ್ದಾರೆ.

ರಿಷಭ್ ಪಂತ್ ಮತ್ತು ದಿನೇಶ್ ಕಾರ್ತಿಕ್ ಇಬ್ಬರೂ ವಿಕೆಟ್ ಕೀಪರ್ ಗಳು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ದೀಪಕ್ ಹೂಡಾ ಮತ್ತು ಸೂರ್ಯಕುಮಾರ್ ಕೂಡ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಜಸ್ ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಗಾಯದ ಕಾರಣ ತಂಡದ ಸೇವೆಗೆ ಅಲಭ್ಯರಾಗಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯ ಕುಮಾರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಯಜುರ್ವೆಂದ್ರ ಚಾಹಲ್, ರವಿ ಬಿಶ್ನೋಯಿ, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಆವೇಶ್ ಖಾನ್.