Saturday, 14th December 2024

ಲಂಕಾ ಸರಣಿಗೆ ಟೀಮ್ ಇಂಡಿಯಾ ಪ್ರಕಟ

ಮುಂಬೈ: ಭಾರತ-ಶ್ರೀಲಂಕಾ ನಡುವಣ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆ ಭಾರತ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಆದರೆ ಈ ಸರಣಿ ಮೂಲಕ ಜಸ್​ಪ್ರೀತ್ ಬುಮ್ರಾ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಗಾಯಗೊಂಡಿರುವ ತಂಡದ ಉಪನಾಯಕ ಕೆಎಲ್ ರಾಹುಲ್ ಸರಣಿಯಿಂದ ಹೊರಗುಳಿದಿದ್ದು, ಜಸ್​ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಲಾಗಿದೆ. ತಂಡಕ್ಕೆ ಸಂಜು ಸ್ಯಾಮ್ಸನ್ ಹಾಗೂ ರವೀಂದ್ರ ಜಡೇಜಾ ಕಂಬ್ಯಾಕ್ ಮಾಡಿದ್ದಾರೆ. ವಿಶ್ರಾಂತಿಯ ಕಾರಣ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಈ ಸರಣಿಯಿಂದ ಹೊರಗುಳಿದಿದ್ದಾರೆ.

ಭಾರತ-ಶ್ರೀಲಂಕಾ ನಡುವಣ ಸರಣಿ ಫೆ.24 ರಿಂದ ಶುರುವಾಗಲಿದೆ. ಸರಣಿಯ ಪ್ರಮುಖ ವಿಷಯ ವೆಂದರೆ ಡೇ-ನೈಟ್ ಟೆಸ್ಟ್ . ಒಂದು ವರ್ಷದ ನಂತರ ಮತ್ತೆ ಡೇ-ನೈಟ್ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಪಂದ್ಯ ಮಾರ್ಚ್ 12 ರಿಂದ ಬೆಂಗಳೂರಿನಲ್ಲಿ ನಡೆಯಲಿದೆ.

ಟಿ20 ಸರಣಿಯ ಮೊದಲ ಪಂದ್ಯ ಫೆ.24 ರಂದು ಲಕ್ನೋದಲ್ಲಿ ನಡೆಯಲಿದೆ. ಫೆ.26 ಮತ್ತು 27 ರಂದು ಧರ್ಮಶಾಲಾದಲ್ಲಿ ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳು ಜರುಗಲಿವೆ. ಟೆಸ್ಟ್‌ನ ಪಂದ್ಯಗಳು ಮೊಹಾಲಿ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ. ಮೊದಲ ಟೆಸ್ಟ್ ಮಾರ್ಚ್ 4 ರಿಂದ 8 ರವರೆಗೆ ಮೊಹಾಲಿಯಲ್ಲಿ ನಡೆಯಲಿದೆ. ಎರಡನೇ ಡೇ ನೈಟ್ ಟೆಸ್ಟ್ ಮಾರ್ಚ್ 12 ರಿಂದ 16 ರವರೆಗೆ ಬೆಂಗಳೂರಿನಲ್ಲಿ ಆಡಲಾಗುತ್ತದೆ.

ಭಾರತ ತಂಡ ಹೀಗಿದೆ:

ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಜಸ್​​ಪ್ರೀತ್ ಬುಮ್ರಾ (ಉಪನಾಯಕ), ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ರವಿ ಬಿಷ್ಣೋಯ್, ಅವೇಶ್ ಖಾನ್

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್, ಶುಭ್​ಮನ್ ಗಿಲ್, ಕೆಎಸ್ ಭರತ್, ಆರ್​ ಅಶ್ವಿನ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಉಮೇಶ್ ಯಾದವ್, ಸೌರಭ್ ಕುಮಾರ್.

ಸರಣಿಯ ವೇಳಾಪಟ್ಟಿ ಹೀಗಿದೆ:

1ನೇ ಟಿ20: ಫೆಬ್ರವರಿ 24 (ಲಕ್ನೋ)

ಎರಡನೇ ಟಿ20: ಫೆಬ್ರವರಿ 26 (ಧರ್ಮಶಾಲಾ)

ಮೂರನೇ ಟಿ20: ಫೆಬ್ರವರಿ 27 (ಧರ್ಮಶಾಲಾ)

1ನೇ ಟೆಸ್ಟ್: 4 ರಿಂದ 8 ಮಾರ್ಚ್ (ಮೊಹಾಲಿ)

2ನೇ ಟೆಸ್ಟ್ (ಹಗಲು-ರಾತ್ರಿ): ಮಾರ್ಚ್ 12-16 (ಬೆಂಗಳೂರು)