Saturday, 14th December 2024

ಸೆ.16 ರಂದು ಟಿ20 ವಿಶ್ವಕಪ್‌ಗಾಗಿ ತಂಡದ ಘೋಷಣೆ

ಮುಂಬೈ: ಷ್ಯಾಕಪ್ 2022 ಟೂರ್ನಿಯಲ್ಲಿ ಟೀಂ ಇಂಡಿಯಾ ತನ್ನ ಪ್ರಯಾಣ ಅಂತ್ಯಗೊಳಿಸಿದೆ. ಅಫ್ಘಾನಿಸ್ತಾನದ ವಿರುದ್ಧದ ಗೆಲವು ಟೀಂ ಇಂಡಿಯಾಗೆ ಆತ್ಮವಿಶ್ವಾಸ ತುಂಬಿದೆ.

ಈಗ ಸೆ.16 ರಂದು ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಘೋಷಣೆ ಮಾಡಲಾಗುತ್ತದೆ.

ನಮಗೆ ಜಸ್ಪ್ರಿತ್ ಮತ್ತು ಹರ್ಷಲ್ ಅವರ ಫಿಟ್ನೆಸ್ ಅಪ್‌ಡೇಟ್‌ ಅಗತ್ಯವಿದೆ. ಎಲ್ಲವೂ ಮುಗಿದ ಬಳಿಕ ತಂಡವನ್ನು ಪ್ರಕಟಿಸುತ್ತೇವೆ ಎಂದು ಆಯ್ಕೆ ಸಮಿತಿಯ ಸದಸ್ಯರೊಬ್ಬರು ಹೇಳಿದ್ದಾರೆ.

ಬೆನ್ನುನೋವಿನ ಕಾರಣ ಜುಲೈನಲ್ಲಿ ಇಂಗ್ಲೆಂಡ್ ಪ್ರವಾಸದ ನಂತರ ಬುಮ್ರಾ ಆಟದಿಂದ ಹೊರಗುಳಿದಿದ್ದರು. ಹರ್ಷಲ್ ಪಟೇಲ್ ಕೂಡ ಪಕ್ಕೆಲುಬಿನ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ.

ಹರ್ಷಲ್ ಪಟೇಲ್ ಮತ್ತು ಜಸ್ಪ್ರಿತ್ ಬುಮ್ರಾ ಫಿಟ್‌ನೆಸ್‌ ಪರೀಕ್ಷೆಗಾಗಿ ಎನ್‌ಸಿಎ ತಲುಪಿ ದ್ದಾರೆ. ಎನ್‌ಸಿಎ ಮೂಲಗಳ ಪ್ರಕಾರ ಹರ್ಷಲ್ ಪಟೇಲ್ ತಂಡಕ್ಕೆ ವಾಪಸ್ ಬರುವುದು ಬಹುತೇಕ ಖಚಿತವಾಗಿದೆ.ಹರ್ಷಕ್ ಪಟೇಲ್ ನೆಟ್ಸ್‌ನಲ್ಲಿ ಬೌಲಿಂಗ್ ಮಾಡಲು ಪ್ರಾರಂಭಿಸಿದ್ದಾರೆ. ವಿಶ್ವಕಪ್‌ಗೆ ಇನ್ನೂ ಒಂದು ತಿಂಗಳು ಬಾಕಿ ಇದೆ. ಆಯ್ಕೆದಾರರು, ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಬುಮ್ರಾ ಅವರ ಅಂತಿಮ ಫಿಟ್‌ನೆಸ್ ವರದಿಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ.

ಟಿ20 ವಿಶ್ವಕಪ್‌ ತಂಡ ಸಲ್ಲಿಸಲು ಸೆಪ್ಟೆಂಬರ್ 16ರಂದು ಕೊನೆ ದಿನವಾಗಿದ್ದು, ಅದೇ ದಿನ ಆಯ್ಕೆ ಸಭೆ ನಡೆಯಲಿದೆ. ಸಭೆ ಮುಕ್ತಾಯವಾದ ನಂತರ ಭಾರತ ತಂಡವನ್ನು ಪ್ರಕಟಿಸಲಿದೆ.

ವಿಶ್ವಕಪ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಆಡಲಿದೆ.

ಹರ್ಷಲ್ ಪಟೇಲ್ ಎನ್‌ಸಿಎಯಲ್ಲಿದ್ದಾರೆ ಮತ್ತು ಅವರು ಹೇಗೆ ಪ್ರಗತಿ ಹೊಂದುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಮುಂದಿನ ವಾರ ಫಿಟ್‌ನೆಸ್ ಪರೀಕ್ಷೆ ನಡೆಸಲಿದ್ದಾರೆ. ಆಸ್ಟ್ರೇಲಿಯಾ ಸರಣಿಗೆ ಲಭ್ಯವಾಗುತ್ತಾರೆ ಎಂದು ನಾವು ಭಾವಿಸುತ್ತೇವೆ,” ಎಂದು ಆಯ್ಕೆ ಸಮಿತಿಯ ಸದಸ್ಯರು ತಿಳಿಸಿದ್ದಾರೆ.

ಒಂದು ವೇಳೆ ಬುಮ್ರಾ ಸಂಪೂರ್ಣವಾಗಿ ಗುಣಮುಖರಾಗದಿದ್ದರೆ ಅವರ ಬದಲಿಗೆ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಾಗಿದೆ.