Friday, 12th July 2024

ವಿಂಡೀಸ್‌ ಸರಣಿಗೆ ಟೀಂ ಇಂಡಿಯಾ ಪ್ರಕಟ

ನವದೆಹಲಿ: ವೆಸ್ಟ್​ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ತಂಡವನ್ನು ಪ್ರಕಟ ಮಾಡಿದೆ. ಪ್ರಮುಖ ಬೌಲರ್​ಗಳಿಗೆ ವಿಶ್ರಾಂತಿ ನೀಡಲಾಗಿದೆ.

ನಾಯಕನಾಗಿ ರೋಹಿತ್ ಶರ್ಮಾ ಕಮ್​ಬ್ಯಾಕ್ ಮಾಡಿದ್ದಾರೆ. ರಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ ಕೂಡ ಏಕದಿನ ಮತ್ತು ಟಿ20 ತಂಡಕ್ಕೆ ಪುನರಾಗಮನ ಕಂಡಿದ್ದರೆ, ಯುವ ಬೌಲರ್‌ಗಳಾದ ಲೆಗ್-ಸ್ಪಿನ್ನರ್ ರವಿ ಬಿಷ್ಣೋಯಿ ಹಾಗೂ ವೇಗಿ ಆವೇಶ್ ಖಾನ್ ತಂಡದಲ್ಲಿ ಸ್ಥಾನ ಪಡೆದಿರುವ ಹೊಸ ಮುಖವಾಗಿದ್ದಾರೆ.

ದೀಪಕ್ ಹೂಡಾ ಅವರಿಗೆ ಏಕದಿನ ತಂಡದಲ್ಲಿ ಸ್ಥಾನ ನೀಡಲಾಗಿದೆ. ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿಗೆ ಎರಡು ಸರಣಿಯಲ್ಲೂ ವಿಶ್ರಾಂತಿ ನೀಡ ಲಾಗಿದೆ. ಕೆಎಲ್ ರಾಹುಲ್ ಮೊದಲ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವನ್ನ ಸೇರಲಿದ್ದಾರೆ.

ಏಕದಿನ ತಂಡ: ರೋಹಿತ್ ಶರ್ಮ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೀ), ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್.

ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಸರ್ ಪಟೇಲ್, ಯುಜ ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್, ಅವೇಶ್ ಖಾನ್, ಹರ್ಷಲ್ ಪಟೇಲ್.

error: Content is protected !!