ಚೆನ್ನೈ: ಪ್ರವಾಸಿ ಬಾಂಗ್ಲಾದೇಶ ವಿರುದ್ಧ(Bangladesh tour of India) ಸೆಪ್ಟೆಂಬರ್ 19ರಿಂದ ಆರಂಭಗೊಳ್ಳಲಿರುವ ಟೆಸ್ಟ್ ಸರಣಿಗಾಗಿ ಭಾರತ ತಂಡದ(Team India) ಆಟಗಾರರು ಇಂದು (ಗುರುವಾರ) ಚೆನ್ನೈಗೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 13ರಿಂದ ನಗರದ ಚೆಪಾಕ್ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಲಿದ್ದಾರೆ. ಆಟಗಾರರು 6 ದಿನಗಳ ಕಾಲ ಅಭ್ಯಾಸ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಸುದೀರ್ಘ ವಿಶ್ರಾಂತಿ ಪಡೆದಿರುವ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್‌ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ, ಮೊಹಮದ್ ಸಿರಾಜ್ ಸೇರಿ ಎಲ್ಲ ಆಟಗಾರರು ಅಭ್ಯಾಸ ನಡೆಸಲಿದ್ದಾರೆ. ಶುಭ್‌ಮನ್ ಗಿಲ್, ಕೆ.ಎಲ್.ರಾಹುಲ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ ದುಲೀಪ್ ಟ್ರೋಫಿಯ ಮೊದಲ ಪಂದ್ಯ ಆಡಿದ್ದರು. ಆದರೆ, ಕೊಹ್ಲಿ, ರೋಹಿತ್ ಲಂಕಾ ವಿರುದ್ಧದ ಏಕದಿನ ಸರಣಿ ಬಳಿಕ ವಿಶಾಂತ್ರಿಯಲ್ಲಿದ್ದರು. ಬಾಂಗ್ಲಾದೇಶ ಆಟಗಾರರು ಭಾನುವಾರ ಚೆನ್ನೈಗೆ ತೆರಳಲಿದ್ದಾರೆ ಎನ್ನಲಾಗಿದೆ. ಸದ್ಯ ಮೊದಲ ಟೆಸ್ಟ್‌ಗೆ ಮಾತ್ರ ಭಾರತ ತಂಡ ಪ್ರಕಟಿಸಲಾಗಿದೆ. 2ನೇ ಪಂದ್ಯ ಕಾನ್ಪುರದಲ್ಲಿ ಸೆ.27ರಿಂದ ಅ.1ರ ವರೆಗೆ ನಡೆಯಲಿದೆ. ಆ ಪಂದ್ಯಕ್ಕೆ ಇನ್ನಷ್ಟೇ ತಂಡ ಪ್ರಕಟಗೊಳ್ಳಬೇಕಿದೆ.
ಇದನ್ನೂ ಓದಿ IPL 2025: ರೋಹಿತ್ ಲಕ್ನೋ ತಂಡ ಸೇರುವ ಬಗ್ಗೆ ಮಾಲಿಕ ಗೋಯೆಂಕಾ ಹೇಳಿದ್ದೇನು?
ಬೌಲಿಂಗ್ ವಿಭಾಗದತ್ತ ಬಂದಾಗ ಸ್ಪಿನ್ನರ್‌ಗಳಿಗೆ ಮೊದಲ ಆದ್ಯತೆ ನೀಡಬೇಕಾಗುತ್ತದೆ. ಏಷ್ಯನ್ ಟ್ರ್ಯಾಕ್ ಆದ ಕಾರಣ ತಿರುವು ಪಡೆಯುವ ಸಾಧ್ಯತೆ ಹೆಚ್ಚು. ಇಲ್ಲಿ ಆರ್.ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ ಇದ್ದಾರೆ. ಎರಡೇ ಆಯ್ಕೆಗಳಿದ್ದರೆ ಅನುಭವಿ ಅಶ್ವಿನ್ ಮತ್ತು ಜಡೇಜಾ ಆಯ್ಕೆ ಸಾಧ್ಯತೆ ಹೆಚ್ಚು.
ಮೊದಲ ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.