Thursday, 19th September 2024

ವಿಂಡೀಸ್‌ ಕಿವಿ ಹಿಂಡಿದ ಕಿವೀಸ್‌: ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ

ವೆಲ್ಲಿಂಗ್ಟನ್‌: ಪ್ರವಾಸಿ ವೆಸ್ಟ್ ಇಂಡೀಸ್‌ ತಂಡವನ್ನು ವೈಟ್‌ ವಾಶ್‌ ಸೋಲನುಭವಿಸುವಂತೆ ಮಾಡಿದ ನ್ಯೂಜಿಲೆಂಡ್‌ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಕೀವಿಸ್ ಪಡೆ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಟೆಸ್ಟ್ ಶ್ರೇಯಾಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ಜೊತೆಗೆ ಅಗ್ರಸ್ಥಾನದಲ್ಲಿ ಸ್ಥಾನ ಪಡೆದುಕೊಂಡಿದೆ.

ನ್ಯೂಜಿಲೆಂಡ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 329 ರನ್‌ಗಳಿಗೆ ಪ್ರತಿಯಾಗಿ ವೆಸ್ಟ್ ಇಂಡೀಸ್ 131 ರನ್‌ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ಫಾಲೋಆನ್‌ಗೆ ಗುರಿಯಾದ ವಿಂಡೀಸ್ ನಾಲ್ಕನೇ ದಿನದಂತ್ಯಕ್ಕೆ ವೆಸ್ಟ್ ಇಂಡೀಸ್ ತಂಡ 244 ರನ್‌ಗಳಿಗೆ ಆರು ವಿಕೆಟ್ ಕಳೆದುಕೊಂಡಿತ್ತು. ನ್ಯೂಜಿಲೆಂಡ್ ತಂಡವನ್ನು ಮತ್ತೊಮ್ಮೆ ಬ್ಯಾಟಿಂಗ್‌ಗೆ ಇಳಿಸಬೇಕಿದ್ದರೂ ವೆಸ್ಟ್ ಇಂಡೀಸ್ ಅಂತಿಮ ದಿನ 86ಕ್ಕೂ ಅಧಿಕ ರನ್ ಗಳಿಸಬೇಕಿತ್ತು.

ಅಂತಿಮ ದಿನ ವೆಸ್ಟ್ ಇಂಡೀಸ್ ಕೇವಲ 73 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ತಂಡ 317 ರನ್ ಗಳಿಸಿ ಆಲೌಟ್ ಆಗಿತ್ತು.

ಈ ಸರಣಿಯನ್ನು 2-1 ಅಂತರದಿಂದ ಗೆದ್ದ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್ ತಂಡ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಗಣನೀಯ ಸಾಧನೆ ಮಾಡಿತು. 116 ಅಂಕಗಳನ್ನು ಖಾತೆಯಲ್ಲಿ ಹೊಂದಿರುವ ನ್ಯೂಜಿಎಲಂಡ್ ಆಸ್ಟ್ರೇಲಿಯಾ ತಂಡದ ಜೊತೆಗೆ ಅಗ್ರಸ್ಥಾನ ಅಲಂಕರಿಸಿದೆ. ಇದು ನ್ಯೂಜಿಲೆಂಡ್ ತಂಡ ಟೆಸ್ಟ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಈ ಸಾಧನೆಯನ್ನು ಮಾಡಿದಂತಾ ಗಿದೆ.