Sunday, 15th December 2024

ನ್ಯೂಜಿಲೆಂಡ್‌ನ ಟಿಮ್‌ ಸೌಥಿ ದಾಖಲೆ ಮುರಿದ ಶಕೀಬ್

ಢಾಕಾ: ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಚಟ್ಟೋ ಗ್ರಾಮ್‌ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ 5 ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ನ್ಯೂಜಿಲೆಂಡ್‌ನ ಟಿಮ್‌ ಸೌಥಿ ಅವರನ್ನು ಹಿಂದಿಕ್ಕುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.

ನ್ಯೂಜಿಲೆಂಡ್‌ನ ಟಿಮ್‌ ಸೌಥಿ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ 134 ವಿಕೆಟ್ ಪಡೆಯುವ ಮೂಲಕ ಅಗ್ರಸ್ಥಾನದಲ್ಲಿದ್ದರು. ಆದರೆ ಶಕೀಬ್ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್ ಪಡೆಯುವ ಮೂಲಕ ಟಿಮ್‌ಸೌಥಿ ದಾಖಲೆಯನ್ನು ಹಿಂದಿಕ್ಕಿ ದರು. ಶಕೀಬ್ ಸದ್ಯ 114 ಪಂದ್ಯ ಗಳಲ್ಲಿ 136 ವಿಕೆಟ್ ಪಡೆದುಕೊಂಡಿದ್ದಾರೆ. ಅವರ ಎಕಾನಮಿ ಕೂಡ ಏಳಕ್ಕಿಂತ ಕಡಿಮೆ ಇರುವುದು ವಿಶೇಷವಾಗಿದೆ.

ಶಕೀಬ್ ಅಲ್ ಹಸನ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಐಸಿಸಿ ರ್‍ಯಾಂಕಿಂಗ್‌ನಲ್ಲಿ ಮೊದಲನೇ ಸ್ಥಾನ ಸ್ಥಾನದಲ್ಲಿದ್ದಾರೆ. ಇನಿಂಗ್ಸ್‌ನ ಆರನೇ ಓವರ್‌ನಲ್ಲಿ ಗೆರೊಗ್ರೆ ಡಾಕ್ರೆಲ್ ಅವರ ವಿಕೆಟ್ ಪಡೆಯುವ ಮೂಲಕ ಟಿಮ್ ಸೌಥಿ ದಾಖಲೆಯನ್ನು ಮುರಿದರು.

ಶಕೀಬ್ ಅಲ್ ಹಸನ್ ಮಾರಕ ಬೌಲಿಂಗ್ ನೆರವಿನಿಂದ ಬಾಂಗ್ಲಾದೇಶ ಐರ್ಲೆಂಡ್ ವಿರುದ್ಧದ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ 77 ರನ್‌ಗಳ ಭರ್ಜರಿ ಜಯ ಸಾಧಿಸಿದೆ.