ಶಾರ್ಜಾ: ಐಪಿಎಲ್ 2020ಯ 9ನೇ ಪಂದ್ಯ ಶಾರ್ಜಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು ರಾಜಸ್ಥಾನ್ ರಾಯಲ್ಸ್ ಹಾಗೂ ಕಿಂಗ್ಸ್ ಇಲವೆನ್ ಪಂಜಾಬ್ ತಂಡಗಳು ಸಜ್ಜಾಗಿದೆ.
ರಾಜಸ್ಥಾನ್ ಬ್ಯಾಟಿಂಗ್ ಲೈನ್‌ಅಪ್‌ಗೆ ಜೋಸ್ ಬಟ್ಲರ್ ಸೇರ್ಪಡೆಗೊಂಡಿರುವುದು ತಂಡದ ಬಲ ಹೆಚ್ಚಿಸಿದೆ. ಹೀಗಾಗಿ ಹೈ ಸ್ಕೋರಿಂಗ್ ಪಂದ್ಯ ನಡೆಯುವ ನಿರೀಕ್ಷೆಯಿದೆ.
ರಾಜಸ್ಥಾನ್ ರಾಯಲ್ಸ್ ತಂಡ ತನ್ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದನವನ್ನು ಭರ್ಜರಿಯಾಗಿ ಮಣಿಸಿ ಟೂರ್ನಿಯ ಶುಭಾರಂಭ ಮಾಡಿದೆ. ಮತ್ತೊಂದೆಡೆ ಕಿಂಗ್‌ಸ್ ಇಲವೆನ್ ಪಂಜಾಬ್ ತಂಡ ಮೊದಲ ಪಂದ್ಯದಲ್ಲಿ ಸೂಪರ್ ಓವರ್ ಸೋಲಿನ ಬಳಿಕ ಭರ್ಜರಿ ಕಮ್‌ಬ್ಯಾಕ್ ಮತ್ತು ಆರ್‌ಸಿಬಿ ವಿರುದ್ಧ 97 ರನ್‌ಗಳ ಭರ್ಜರಿ ಗೆಲುವನ್ನು ಸಾಧಿಸಿದ ಉತ್ಸಾಹದಲ್ಲಿದೆ.
ಎರಡೂ ತಂಡಗಳಲ್ಲಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಸಂಜು ಸ್ಯಾಮ್ಸನ್ ಹಾಗೂ ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಆಟದ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆಯಿಟ್ಟಿದ್ದಾರೆ. ಸಿಎಸ್‌ಕೆ ವಿರುದ್ಧ ಸಂಜು ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರೆ ಕೆಎಲ್ ರಾಹುಲ್ ಆರ್‌ಸಿಬಿ ವಿರುದ್ಧ ಮಿಂಚಿನ ಶತಕ ಸಿಡಿಸಿದ್ದರು.
ಸಂಭಾವ್ಯ ತಂಡಗಳು:
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಸ್ಟೀವನ್ ಸ್ಮಿತ್ (ನಾಯಕ), ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ಟಾಮ್ ಕರ್ರನ್, ರಾಹುಲ್ ತೇವಟಿಯಾ, ಶ್ರೇಯಸ್ ಗೋಪಾಲ್, ಜೋಫ್ರಾ ಆರ್ಚರ್, ಜಯದೇವ್ ಉನಾದ್ಕಟ್
ಕಿಂಗ್‌ಸ್ ಎಲೆವೆನ್ ಪಂಜಾಬ್
ಕೆ.ಎಲ್. ರಾಹುಲ್ (ನಾಯಕ/ವಿಕೆಟ್ ಕೀಪರ್), ಕ್ರಿಸ್ ಗೇಲ್ / ನಿಕೋಲಸ್ ಪೂರನ್, ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್, ಗ್ಲೆನ್ ಮ್ಯಾಕ್ಸ್ ವೆಲ್, ಸರ್ಫರಾಜ್ ಖಾನ್, ಜಿಮ್ಮಿ ನೀಶಮ್, ಶೆಲ್ಡನ್ ಕಾಟ್ರೆಲ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಮುರುಗನ್ ಅಶ್ವಿನ್.