Friday, 25th October 2024

ಏಕದಿನ ಸರಣಿಗೆ ಲ್ಯಾಥಮ್ ನಾಯಕತ್ವದ ನ್ಯೂಜಿಲೆಂಡ್ ತಂಡ ಪ್ರಕಟ

ಯುಎಇ: ಸೆಪ್ಟೆಂಬರ್ 8ರಿಂದ 15ರವರೆಗೆ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಏಕದಿನ ಸರಣಿಗೆ ಟಾಮ್ ಲ್ಯಾಥಮ್ ನಾಯಕತ್ವದ ನ್ಯೂಜಿಲೆಂಡ್ ತನ್ನ ತಂಡವನ್ನು ಪ್ರಕಟಿಸಿದೆ.

ಇದೇ ವೇಳೆ, ಒಂದು ವರ್ಷದ ಬಳಿಕ ವೇಗಿ ಟ್ರೆಂಟ್ ಬೌಲ್ಟ್ ತಮ್ಮ ಮೊದಲ ಏಕದಿನ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಕಳೆದ ವರ್ಷ ಬೌಲ್ಟ್ ಅವರು ವಿದೇಶಿ ಟಿ20 ಲೀಗ್‌ಗಳಲ್ಲಿ ಆಡುವುದಕ್ಕಾಗಿ ನ್ಯೂಜಿಲೆಂಡ್‌ನ ಕೇಂದ್ರ ಒಪ್ಪಂದದಿಂದ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ರಾಷ್ಟ್ರೀಯ ತಂಡದ ಅಂತಾರಾಷ್ಟ್ರೀಯ ಪಂದ್ಯಕ್ಕೆ ಮರಳಲಿದ್ದಾರೆ.

“ಮಾರ್ಕ್ ಚಾಪ್‌ಮನ್ ಮತ್ತು ಜಿಮ್ಮಿ ನೀಶಾಮ್ ಅವರು ತಮ್ಮ ಮೊದಲ ಮಕ್ಕಳ ಜನನಕ್ಕಾಗಿ ಕಾಯುತ್ತಿರುವ ಕಾರಣ, ಏಕದಿನ ಸರಣಿಯನ್ನು ಕಳೆದುಕೊಳ್ಳು ತ್ತಾರೆ. ಇಶ್ ಸೋಧಿ ಕೂಡ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ನಂತರ ತಮ್ಮ ಕುಟುಂಬದೊಂದಿಗೆ ಕ್ರಿಕೆಟ್‌ನ ಬಿಡುವಿಲ್ಲದ ಅವಧಿಗೆ ಮುನ್ನ ಸಮಯ ಕಳೆಯಲು ತವರಿಗೆ ಮರಳುತ್ತಿದ್ದಾರೆ,” ಎಂದು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ತಿಳಿಸಿದೆ.

ಆಲ್‌ರೌಂಡರ್ ಮೈಕೆಲ್ ಬ್ರೇಸ್‌ವೆಲ್ ಅವರು ಜೂನ್‌ನಲ್ಲಿ ಆಗಿದ್ದ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಯಾವುದೇ ಸರಣಿಯ ಆಯ್ಕೆಗೆ ಲಭ್ಯರಿರಲಿಲ್ಲ. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯು ಆಗಸ್ಟ್ 30ರಿಂದ ಸೆಪ್ಟೆಂಬರ್ 5ರವರೆಗೆ ನಡೆಯಲಿದೆ.

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ನ್ಯೂಜಿಲೆಂಡ್ ತಂಡ

ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಆಡಮ್ ಮಿಲ್ನೆ, ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ವಿಲ್ ಯಂಗ್.

ಟಿ20 ಸರಣಿಗೆ ನ್ಯೂಜಿಲೆಂಡ್ ತಂಡ

ಟಿಮ್ ಸೌಥಿ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಆಡಮ್ ಮಿಲ್ನೆ, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್, ಇಶ್ ಸೋಧಿ.

ಯುಎಇ ವಿರುದ್ಧದ ಟಿ20 ಸರಣಿಗೆ ನ್ಯೂಜಿಲೆಂಡ್ ತಂಡ

ಟಿಮ್ ಸೌಥಿ (ನಾಯಕ), ಆದಿ ಅಶೋಕ್, ಚಾಡ್ ಬೋವ್ಸ್, ಮಾರ್ಕ್ ಚಾಪ್ಮನ್, ಡೇನ್ ಕ್ಲೀವರ್, ಡೀನ್ ಫಾಕ್ಸ್‌ಕ್ರಾಫ್ಟ್, ಬೆನ್ ಲಿಸ್ಟರ್, ಕೈಲ್ ಜೇಮಿಸನ್, ಕೋಲ್ ಮೆಕಾಂಚಿ, ಬ್ಲೇರ್ ಟಿಕ್ನರ್, ವಿಲ್ ಯಂಗ್.