ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RCB vs GT: ನಾಳೆ ಬೆಂಗಳೂರಿನಲ್ಲಿ ಆರ್‌ಸಿಬಿ ಪಂದ್ಯ; ಈ ಮಾರ್ಗದ ಸಂಚಾರ ನಿಷೇಧ

Bangalore Traffic Advisory: ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುವ ಜನರು, ತಮ್ಮ ವಾಹನಗಳನ್ನು ಸೇಂಟ್ ಜೋಸೆಫ್ ಇಂಡಿಯಾ ಸ್ಕೂಲ್ ಮೈದಾನ, ಯು.ಬಿ ಸಿಟಿ, ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣದ ಪಾರ್ಕಿಂಗ್ ಜಾಗ ಹಾಗೂ ಕಿಂಗ್ಸ್ ರಸ್ತೆಯಲ್ಲಿ ನಿಲ್ಲಿಸಬಹುದು. ಜನರು, ಮೆಟ್ರೊ ಹಾಗೂ ಬಸ್‌ ಬಳಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ನಾಳೆ ಬೆಂಗಳೂರಿನಲ್ಲಿ ಆರ್‌ಸಿಬಿ ಪಂದ್ಯ; ಈ ಮಾರ್ಗದ ಸಂಚಾರ ನಿಷೇಧ

Profile Abhilash BC Apr 1, 2025 1:03 PM

ಬೆಂಗಳೂರು: ಬುಧವಾರ ಆರ್‌ಸಿಬಿ(RCB) ತಂಡ ತನ್ನ ತವರಾದ ಚಿನ್ನಸ್ವಾಮಿ ಕ್ರೀಡಾಂಣದಲ್ಲಿ ಗುಜರಾತ್‌ ಟೈಟಾನ್ಸ್‌(RCB vs GT) ವಿರುದ್ಧ ಪಂದ್ಯವನ್ನಾಡಲಿದೆ. ಈ ಆವೃತ್ತಿಯಲ್ಲಿ ಆರ್‌ಸಿಬಿಗೆ ಇದು ಮೊದಲ ತವರು ಪಂದ್ಯವಾದ ಕಾರಣ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಪಂದ್ಯಕ್ಕೆ ಹಾಜಾರಾಗುವ ನಿರೀಕ್ಷೆ ಇದೆ. ಕ್ರೀಡಾಂಗಣ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಸಂಚಾರ ಪೊಲೀಸರು ಹಲವು ಮುಂಜಾಗ್ರತಾ ಕ್ರಮಗಳನ್ನು(Bengaluru Traffic Advisory) ಕೈಗೊಂಡಿದ್ದಾರೆ. ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದ್ದಾರೆ.

ಕ್ರೀಡಾಂಗಣಕ್ಕೆ ಹೊಂದಿಕೊಂಡಿರುವ ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ IPL 2025 Points Table: ಕೊನೆಯ ಸ್ಥಾನಕ್ಕೆ ಕುಸಿದ ಹಾಲಿ ಚಾಂಪಿಯನ್‌ ಕೆಕೆಆರ್‌

ಸ್ಥಳ ಕೊರತೆ ಇರುವುದರಿಂದ ಬಿಎಂಟಿಸಿ,‌ ಮೆಟ್ರೋ ಬಳಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ಸ್ಥಳ ನಿಗದಿಪಡಿಸಲಾಗಿದೆ.



ಎಲ್ಲೆಲ್ಲಿ ಪಾರ್ಕಿಂಗ್​ಗೆ ಅವಕಾಶ?

ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುವ ಜನರು, ತಮ್ಮ ವಾಹನಗಳನ್ನು ಸೇಂಟ್ ಜೋಸೆಫ್ ಇಂಡಿಯಾ ಸ್ಕೂಲ್ ಮೈದಾನ, ಯು.ಬಿ ಸಿಟಿ, ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣದ ಪಾರ್ಕಿಂಗ್ ಜಾಗ ಹಾಗೂ ಕಿಂಗ್ಸ್ ರಸ್ತೆಯಲ್ಲಿ ನಿಲ್ಲಿಸಬಹುದು. ಜನರು, ಮೆಟ್ರೊ ಹಾಗೂ ಬಸ್‌ ಬಳಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.