Wednesday, 11th December 2024

ಭೋಪಾಲ್‌ನಲ್ಲಿ ಅಂಧ ಕ್ರಿಕೆಟ್ ಆಟಗಾರರಿಗೆ ತರಬೇತಿ ಶಿಬಿರ

ಬೆಂಗಳೂರು: ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆ (ಸಿಎಬಿಐ) ಹಾಗೂ ಸಮರ್ಥನಂ ಟ್ರಸ್ಟ್ ವತಿಯಿಂದ 29 ಆಟಗಾರರಿಗೆ 12 ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮಧ್ಯ ಪ್ರದೇಶದ ಭೋಪಾಲ್ನಲ್ಲಿರುವ ಫೇಯ್ತ್ ಕ್ರಿಕೆಟ್ ಕ್ಲಬ್ನಲ್ಲಿ ಈ ಶಿಬಿರ ನಡೆಯಲಿದೆ.

ಮುಂಬರುವ 3ನೇ ಟಿ20 ವಿಶ್ವಕಪ್ ಟೂರ್ನಿಗೆ 17 ಸದಸ್ಯರ ತಂಡವನ್ನು ಸಿಎಐಬಿ ಆಯ್ಕೆ ಮಾಡಲಿದೆ. ಡಿಸೆಂಬರ್ 5 ರಿಂದ 9 ಟಿ20 ವಿಶ್ವಕಪ್ ಟೂರ್ನಿ ನಡೆಯಲಿದ್ದು, 9 ದೇಶಗಳ ತಂಡಗಳು ಭಾಗವಹಿಸಲಿವೆ.

ಟೂರ್ನಿಯಲ್ಲಿ 39 ಪಂದ್ಯಗಳು ನಡೆಯಲಿದ್ದು, ಭಾರತದ ವಿವಿಧ ನಗರಗಳಲ್ಲಿ ನಡೆಯ ಲಿವೆ. ಭಾರತದಲ್ಲಿ ಅಂಧರ ಕ್ರಿಕೆಟ್ಗೆ ಉತ್ತೇಜನ ನೀಡುವ ದೃಷ್ಟಿಯಿಂದ ಹೆಚ್ಚು ನಗರಗಳಲ್ಲಿ ಆಯೋಜಿಸಲಾಗುತ್ತಿದೆ.

3ನೇ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಗೆ ಸಿದ್ಧತೆಗಳು ಆರಂಭಗೊಂಡಿವೆ’ ಎಂದು ಸಿಎಬಿಐ ಅಧ್ಯಕ್ಷ ಜಿ.ಕೆ.ಮಹಾಂತೇಶ್ ತಿಳಿಸಿದ್ದಾರೆ. ತರಬೇತಿ ಶಿಬಿರ ಆಯೋಜಿಸುವ ಮೂಲಕ ಪ್ರತಿಭಾನ್ವಿತ ಆಟಗಾರರಿಗೆ ಪ್ರೋತ್ಸಾಹಿಸಿದಂತಾಗುತ್ತದೆ. ಈ ವೇಳೆ ಆಟಗಾರರು ತಾಂತ್ರಿಕವಾಗಿ, ಉತ್ತಮ ಮನಸ್ಥಿತಿಯಲ್ಲಿ ಮುಂಬರುವ ವಿಶ್ವಕಪ್ ಸನ್ನದ್ಧ ವಾಗಬಹುದು’ ಎಂದು ತಿಳಿಸಿದ್ದಾರೆ.