Sunday, 8th September 2024

ಟೀಮ್ ಇಂಡಿಯಾ ಬ್ಯಾಟಿಂಗ್ ವೈಫಲ್ಯ: ಆರಂಭಿಕರಿಬ್ಬರ ಪತನ

ಅಡಿಲೇಡ್: ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಇಲ್ಲಿನ ಅಡಿಲೇಡ್ ಓವಲ್‌ನಲ್ಲಿ ಆರಂಭವಾಗಿರುವ ಮೊದಲ ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ.

ಇತ್ತೀಚಿನ ವರದಿ ಪ್ರಕಾರ, 32 ಓವರುಗಳಲ್ಲಿ ಎರಡು ವಿಕೆಟ್‌ ಕಳೆದುಕೊಂಡು 57 ರನ್‌ ಗಳಿಸಿತ್ತು. ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಚೇತೇಶ್ವರ ಪೂಜಾರ ಹಾಗೂ ನಾಯಕ ವಿರಾಟ್‌ ಕೊಹ್ಲಿ ರಕ್ಷಣಾತ್ಮಕ ಆಟದ ಮೊರೆ ಹೋಗಿದ್ದಾರೆ.

ಈ ಹಂತದಲ್ಲಿ ಜೊತೆಗೂಡಿದ ಮಯಂಕ್ ಅಗರವಾಲ್ ಹಾಗೂ ಚೇತೇಶ್ವರ ಪೂಜಾರ ಉತ್ತಮ ಜೊತೆಯಾಟ ಕಟ್ಟುವ ಸೂಚನೆ ನೀಡಿದರು. ಆದರೆ 40 ಎಸೆತಗಳಲ್ಲಿ 17 ರನ್ ಗಳಿಸಿದ ಮಯಂಕ್ ವಿಕೆಟ್ ಉಡಾಯಿಸಿದ ಪ್ಯಾಟ್ ಕಮಿನ್ಸ್ ಭಾರತಕ್ಕೆ ಎರಡನೇ ಆಘಾತ ನೀಡಿದರು.

Leave a Reply

Your email address will not be published. Required fields are marked *

error: Content is protected !!