Wednesday, 11th December 2024

ಉಜ್ಜಯಿನಿಯ ದೇವಸ್ಥಾನಕ್ಕೆ ವಿರಾಟ್ ಕೊಹ್ಲಿ-ನಟಿ ಅನುಷ್ಕಾ ಭೇಟಿ

ಮುಂಬೈ: ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ – ನಟಿ ಅನುಷ್ಕಾ ಶರ್ಮಾ ದಂಪತಿ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆರ್ಶೀವಾದ ಪಡೆದರು.

ದೇವಸ್ಥಾನಕ್ಕೆ ಭೇಟಿ ನೀಡಿರುವ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅನುಷ್ಕಾ ತಿಳಿ ಗುಲಾಬಿ ಬಣ್ಣದ ಸೀರೆ ಹಾಗೂ ವಿರಾಟ್ ಬಿಳಿ ಬಣ್ಣದ ಉಡುಪಿನಲ್ಲಿ ಕಾಣಿಸಿಕೊಂಡಿದ್ದಾರೆ. ದಂಪತಿ ಪೂಜಾ ಕಾರ್ಯದಲ್ಲಿ ತೊಡಗಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

2017ರಲ್ಲಿ ಅನುಷ್ಕಾ ಮತ್ತು ವಿರಾಟ್ ವಿವಾಹವಾಗಿದ್ದಾರೆ. ದಂಪತಿಗೆ ವಾಮಿಕಾ ಹೆಸರಿನ ಹೆಣ್ಣು ಮಗುವಿದೆ.

ಭಾರತದ ಹಿರಿಯ ಕ್ರಿಕೆಟ್‌ ಆಟಗಾರ್ತಿ ಜೂಲನ್ ಗೋಸ್ವಾಮಿ ಅವರ ಜೀವನಾಧಾರಿತ ‘ಚಕ್ಡಾ ಎಕ್ಸ್‌ಪ್ರೆಸ್’ ಸಿನಿಮಾದಲ್ಲಿ ಅನುಷ್ಕಾ ನಟಿಸಲಿದ್ದಾರೆ.