Thursday, 12th December 2024

ಬಾಂಗ್ಲಾದೇಶ ಟೆಸ್ಟ್ ಸರಣಿ: ಶಮಿ ಬದಲಿಗೆ ಉನಾದ್ಕಟ್’ಗೆ ಸ್ಥಾನ

ಮುಂಬೈ: ಭಾರತ ಬಾಂಗ್ಲಾದೇಶ ಮೂರು ಪಂದ್ಯಗಳ ಏಕದಿನ ಸರಣಿ ಅಂತ್ಯವಾಗುತ್ತಿದ್ದು ಡಿ.14ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ದೃಷ್ಟಿಯಿಂದಲೂ ಭಾರತಕ್ಕೆ ಈ ಸರಣಿ ಬಹಳ ಮಹತ್ವದ್ದಾಗಿದೆ.

ಬೌಲಿಂಗ್‌ನಲ್ಲಿ ಅನುಭವಿ ಆಟಗಾರ ಮೊಹಮ್ಮದ್ ಶಮಿ ಗಾಯದ ಬೆನ್ನು ನೋವಿನ ಕಾರಣ ಏಕದಿನ ಸರಣಿಯಿಂದಲೂ ಹೊರಗುಳಿದಿದ್ದರು. ಶಮಿ ಬದಲಿ ಆಟಗಾರನಾಗಿ ಘೋಷಿಸಿಲ್ಲ. ಈ ಬಗ್ಗೆ ಮಾಹಿತಿ ಹೊರಬಿದ್ದಿದ್ದು ದೇಶೀಯ ಕ್ರಿಕೆಟ್‌ನಲ್ಲಿ ಪ್ರದರ್ಶನ ನೀಡಿ ಗಮನ ಸೆಳೆಯುತ್ತಿರುವ ಅನುಭವಿ ಆಟಗಾರ ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಲಿ ದ್ದಾರೆ.

ಮೊಹಮ್ಮದ್ ಶಮಿ ಬದಲಿಗೆ ಟೆಸ್ಟ್ ಸರಣಿಯಲ್ಲಿ ಅನುಭವಿ ವೇಗಿ ಜಯ್‌ದೇವ್ ಉನಾದ್ಕಟ್ ಸ್ಥಾನವನ್ನು ಪಡೆದುಕೊಳ್ಳಲಿದ್ದಾರೆ. ಉನಾದ್ಕಟ್ ಶೀಘ್ರದಲ್ಲಿಯೇ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಜಯ್‌ದೇವ್ ಉನಾದ್ಕಟ್ ತಮ್ಮ ಏಕೈಕ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು 2010ರಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸೆಂಚೂರಿಯನ್‌ನಲ್ಲಿ ಆಡಿದ್ದರು. ಅದಾದ ಬಳಿಕ 7 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಅವಕಾಶ ಪಡೆದುಕೊಂಡ ಇವರು 10 ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿಯೂ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದುಕೊಂಡಿದ್ದರು.