ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Vaibhav Sooryavanshi: 15 ಎಸೆತದಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸೂರ್ಯವಂಶಿ

IPL 2026: ಐಪಿಎಲ್‌ನಲ್ಲಿ ಅತ್ಯಂತ ವೇಗದ 50 ರನ್ ಗಳಿಸಿದ ದಾಖಲೆ ಯಶಸ್ವಿ ಜೈಸ್ವಾಲ್ ಹೆಸರಿನಲ್ಲಿದೆ. ಮೇ 11, 2023 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧದ ಐಪಿಎಲ್‌ ಪಂದ್ಯದಲ್ಲಿ ಜೈಸ್ವಾಲ್ 13 ಎಸೆತಗಳಲ್ಲಿ 50 ರನ್ ಗಳಿಸಿದ್ದರು. ಕೆ.ಎಲ್‌ ರಾಹುಲ್‌, ಪ್ಯಾಟ್‌ ಕಮಿನ್ಸ್‌ ಮತ್ತು ಶೆಫರ್ಡ್‌ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಜಂಟಿ ಎರಡನೇ ಸ್ಥಾನದಲ್ಲಿದ್ದಾರೆ.

Vaibhav Sooryavanshi

ಗುವಾಹಟಿ, ಎ.11: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(RR vs RCB) ವಿರುದ್ಧದ ಐಪಿಎಲ್ 2026(IPL 2026) ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ವಿಸ್ಫೋಟಕ ಬ್ಯಾಟಿಂಗ ನಡೆಸಿದ ವೈಭವ್‌ ಸೂರ್ಯವಂಶಿ(Vaibhav Sooryavanshi) 15 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ದಾಖಲೆಯೊಂದನ್ನು ಬರೆದಿದ್ದಾರೆ.

ಗುವಾಹಟಿಯ ಬರ್ಸಪಾರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ, ಬಿಹಾರದ ಎಡಗೈ ಬ್ಯಾಟ್ಸ್‌ಮನ್ ಸೂರ್ಯವಂಶಿ, 15 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಎರಡು ಐಪಿಎಲ್ ಅರ್ಧಶತಕಗಳನ್ನು ಗಳಿಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಎನಿಸಿದರು. 2024 ರ ಐಪಿಎಲ್ ಆವೃತ್ತಿಯಲ್ಲಿ, ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಡೆಲ್ಲಿ ಕ್ಯಾಪಿಟಲ್ಸ್ ಪರ 15 ಎಸೆತಗಳಲ್ಲಿ ಎರಡು ಅರ್ಧಶತಕಗಳನ್ನು ಗಳಿಸಿದ್ದು ಸಾಧನೆ.

ವೈಭವ್ ಅವರು 15 ಎಸೆತಗಳಲ್ಲಿ 50 ರನ್ ಗಳಿಸಿದ್ದು, ಈ ವರ್ಷದ ಐಪಿಎಲ್‌ನಲ್ಲಿ ಎರಡನೇ ಅರ್ಧಶತಕವಾಗಿದೆ. ಆರ್‌ಆರ್‌ನ ಮೊದಲ ಪಂದ್ಯದಲ್ಲಿ, ಸೂರ್ಯವಂಶಿ ಮಾರ್ಚ್ 30 ರಂದು ಗುವಾಹಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 15 ಎಸೆತಗಳಲ್ಲಿ 50 ರನ್ ಗಳಿಸಿದ್ದರು.

ಐಪಿಎಲ್‌ನಲ್ಲಿ ಅತ್ಯಂತ ವೇಗದ 50 ರನ್ ಗಳಿಸಿದ ದಾಖಲೆ ಯಶಸ್ವಿ ಜೈಸ್ವಾಲ್ ಹೆಸರಿನಲ್ಲಿದೆ. ಮೇ 11, 2023 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಕೆಕೆಆರ್ ವಿರುದ್ಧದ ಐಪಿಎಲ್‌ ಪಂದ್ಯದಲ್ಲಿ ಜೈಸ್ವಾಲ್ 13 ಎಸೆತಗಳಲ್ಲಿ 50 ರನ್ ಗಳಿಸಿದ್ದರು. ಕೆ.ಎಲ್‌ ರಾಹುಲ್‌, ಪ್ಯಾಟ್‌ ಕಮಿನ್ಸ್‌ ಮತ್ತು ಶೆಫರ್ಡ್‌ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಜಂಟಿ ಎರಡನೇ ಸ್ಥಾನದಲ್ಲಿದ್ದಾರೆ.

RR vs RCB: ಗೋಲ್ಡನ್‌ ಡಕ್‌ ಆಗಿ ಅನಗತ್ಯ ದಾಖಲೆ ಬರೆದ ಫಿಲ್‌ ಸಾಲ್ಟ್‌

ಐಪಿಎಲ್‌ನಲ್ಲಿ 15 ಅಥವಾ ಕೆಲವು ಎಸೆತಗಳಲ್ಲಿ ಅತಿ ಹೆಚ್ಚು ಅರ್ಧಶತಕ

ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ (ದೆಹಲಿ ಕ್ಯಾಪಿಟಲ್ಸ್) - 2

ವೈಭವ್ ಸೂರ್ಯವಂಶಿ (ರಾಜಸ್ಥಾನ್ ರಾಯಲ್ಸ್) – 2

ಯಶಸ್ವಿ ಜೈಸ್ವಾಲ್ (ರಾಜಸ್ಥಾನ್ ರಾಯಲ್ಸ್) - 1

ಕೆಎಲ್ ರಾಹುಲ್ (ಪಂಜಾಬ್ ಕಿಂಗ್ಸ್) - 1

ಪ್ಯಾಟ್ ಕಮ್ಮಿನ್ಸ್ (ಕೋಲ್ಕತ್ತಾ ನೈಟ್ ರೈಡರ್ಸ್) - 1

ರೊಮಾರಿಯೊ ಶೆಫರ್ಡ್ (ರಾಯಲ್ ಚಾಲೆಂಜರ್ಸ್ ಬೆಂಗಳೂರು) - 1

ಯೂಸುಫ್ ಪಠಾಣ್ (ಕೋಲ್ಕತ್ತಾ ನೈಟ್ ರೈಡರ್ಸ್) - 1

ಸುನಿಲ್ ನರೈನ್ (ಕೋಲ್ಕತ್ತಾ ನೈಟ್ ರೈಡರ್ಸ್) - 1

ನಿಕೋಲಸ್ ಪೂರನ್ (ಲಕ್ನೋ ಸೂಪರ್ ಜೈಂಟ್ಸ್) - 1

ಆರ್‌ಸಿಬಿಗೆ ಮೊದಲ ಸೋಲು

ಪಂದ್ಯದಲ್ಲಿ ಟಾಸ್‌ ಗೆದ್ದ ರಾಜಸ್ಥಾನ ತಂಡವು ಫೀಲ್ಡಿಂಗ್‌ ಆಯ್ದುಕೊಂಡಿತು. ನಾಯಕ ರಜತ್‌ ಪಾಟೀದಾರ್ ಅವರ ಅರ್ಧಶತಕದ ನೆರವಿನಿಂದ ಆರ್‌ಸಿಬಿ ತಂಡವು 8 ವಿಕೆಟ್‌ಗೆ 201 ರನ್‌ಗಳ ಸವಾಲಿನ ಮೊತ್ತ ಗಳಿಸಿತು. ಗುರಿ ಬೆನ್ನಟ್ಟಿದ ರಾಜಸ್ಥಾನ ತಂಡವು ಸೂರ್ಯವಂಶಿ(78) ಮತ್ತು ಧ್ರುವ ಜುರೇಲ್‌ (ಔಟಾಗದೇ 81) ಅವರ ಅಮೋಘ ಬ್ಯಾಟಿಂಗ್‌ ನೆರವಿನಿಂದ ರಾಜಸ್ಥಾನ ರಾಯಲ್ಸ್‌ ತಂಡವು 4 ವಿಕೆಟ್‌ಗೆ 202 ರನ್‌ ಬಾರಿಸಿ ಸತತ ನಾಲ್ಕನೇ ಜಯ ದಾಖಲಿಸಿತು. ಆರ್‌ಸಿಬಿ ಮೊದಲ ಸೋಲು ಕಂಡಿತು.