ಸಿಡ್ನಿ: ಭಾರತದ ಯುವ ಬ್ಯಾಟಿಂಗ್ ಸೆನ್ಸೇಶನ್ ವೈಭವ್ ಸೂರ್ಯವಂಶಿ(Vaibhav Suryavanshi) ತಮ್ಮ ವೃತ್ತಿಪರ ವೃತ್ತಿಜೀವನದಲ್ಲಿ ತ್ವರಿತ ಏರಿಕೆಯನ್ನು ಮುಂದುವರೆಸಿದ್ದಾರೆ. ಭಾರತ ಅಂಡರ್-19 ಮತ್ತು ಆಸ್ಟ್ರೇಲಿಯಾ ಅಂಡರ್-19 ನಡುವಿನ(India Under-19) ಎರಡನೇ ಯುವ ಏಕದಿನ ಪಂದ್ಯದಲ್ಲಿ ಉನ್ಮುಕ್ತ್ ಚಂದ್(Unmukt Chand) ಅವರ ದಾಖಲೆಯನ್ನು ಮುರಿದರು. ಆಸ್ಟ್ರೇಲಿಯಾ ಪ್ರವಾಸದಲ್ಲಿ ಸೂರ್ಯವಂಶಿ ತಮ್ಮ ಮೊದಲ ಪ್ರದರ್ಶನದೊಂದಿಗೆ ಮೊದಲ ಅರ್ಧಶತಕವನ್ನು ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ.
14 ವರ್ಷದ ಸೂರ್ಯವಂಶಿ 70 (68) ರನ್ ಗಳಿಸುವ ಮೂಲಕ ಆಕ್ರಮಣಕಾರಿಯಾಗಿ ಅತ್ಯುತ್ತಮ ಪ್ರದರ್ಶನ ನೀಡಿದರು. ಅವರ ಈ ಬ್ಯಾಟಿಂಗ್ ಇನಿಂಗ್ಸ್‌ನಲ್ಲಿ ಐದು ಬೌಂಡರಿ ಮತ್ತು ಆರು ಸಿಕ್ಸರ್‌ಗಳು ಒಳಗೊಂಡಿತ್ತು. ಈ ಮೂಲಕ, ಅವರು ಯೂತ್ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ ಭಾರತದ ಮಾಜಿ ಕ್ರಿಕೆಟಿಗ ಉನ್ಮುಕ್ತ್ ಚಂದ್ ಅವರ ದಾಖಲೆಯನ್ನು ಮುರಿದರು. ಸೂರ್ಯವಂಶಿ ಈಗ ಯೂತ್ ಏಕದಿನಗಳಲ್ಲಿ 41 ಸಿಕ್ಸರ್‌ಗಳನ್ನು ಗಳಿಸಿದ್ದಾರೆ. ಚಂದ್ 38 ಸಿಕ್ಸರ್‌ಗಳನ್ನು ಬಾರಿಸಿದ್ದರು.
ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ್ದ ವೈಭವ್, 52 ಎಸೆಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದ್ದರು. ಇದರೊಂದಿಗೆ ಯೂತ್ ಏಕದಿನ ಕ್ರಿಕೆಟ್‌ನಲ್ಲಿ ವೇಗದ ಶತಕ ಸಿಡಿಸಿದ ನಂ.1 ಆಟಗಾರ ಎಂದೆನಿಸಿದ್ದರು. ಜತೆಗೆ ಯೂತ್ ಏಕದಿನ ಟೂರ್ನಿಯಲ್ಲಿ ವೇಗದ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. 10 ಬೌಂಡರಿ, 7 ಸಿಕ್ಸರ್ ಸಹಾಯದಿಂದ 100 ರನ್‌ಗಳ ಗಡಿ ಮುಟ್ಟಿದ್ದರು.
ಇದನ್ನೂ ಓದಿ ಇಂಗ್ಲೆಂಡ್ ವಿರುದ್ದ ಯೂಥ್ ಟೆಸ್ಟ್‌ನಲ್ಲಿ ವಿಶೇಷ ದಾಖಲೆ ಬರೆದ ವೈಭವ್ ಸೂರ್ಯವಂಶಿ!
ಐಪಿಎಲ್‌ನಲ್ಲಿ ಚೊಚ್ಚಲ ಪ್ರವೇಶ ಪಡೆದಿದ್ದ ಅತ್ಯಂತ ಕಿರಿಯ ಆಟಗಾರ ಸೂರ್ಯವಂಶಿ ಅವರು, ಏಪ್ರಿಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ 38 ಎಸೆತಗಳಲ್ಲಿ 101 ರನ್ ಗಳಿಸಿ ಹೊಸ ದಾಖಲೆ ನಿರ್ಮಿಸಿದ್ದರು. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಅತಿ ಕಿರಿಯ ಬ್ಯಾಟರ್ ಎನಿಸಿದ್ದರು.