Vaibhav Suryavanshi: ಟೆಸ್ಟ್ ಕ್ರಿಕೆಟ್‌ನಲ್ಲೂ ಸ್ಫೋಟಕ ಶತಕ ಸಿಡಿಸಿದ ಸೂರ್ಯವಂಶಿ
ಐಪಿಎಲ್‌ನಲ್ಲಿ ಚೊಚ್ಚಲ ಪ್ರವೇಶ ಪಡೆದಿದ್ದ ಅತ್ಯಂತ ಕಿರಿಯ ಆಟಗಾರ ಸೂರ್ಯವಂಶಿ ಅವರು, ಏಪ್ರಿಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ 38 ಎಸೆತಗಳಲ್ಲಿ 101 ರನ್ ಗಳಿಸಿ ಹೊಸ ದಾಖಲೆ ನಿರ್ಮಿಸಿದ್ದರು. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಅತಿ ಕಿರಿಯ ಬ್ಯಾಟರ್ ಎನಿಸಿದ್ದರು.

-

ಸಿಡ್ನಿ: ಟಿ20 ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿ ಮಿಂಚಿರುವ 14 ವರ್ಷದ ವೈಭವ್ ಸೂರ್ಯವಂಶಿ ಇದೀಗ, ಟೆಸ್ಟ್‌ನಲ್ಲಿಯೂ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿದ್ದಾರೆ. ಬ್ರಿಸ್ಬೇನ್‌ನಲ್ಲಿ ನಡೆದ ಆಸ್ಟ್ರೇಲಿಯಾದ U-19 ವಿರುದ್ಧದ ಯೂತ್ ಟೆಸ್ಟ್‌ನ 2 ನೇ ದಿನದಂದು ಸೂರ್ಯವಂಶಿ ಶತಕ ಬಾರಿಸಿದರು.
ಬ್ರಿಸ್ಬೇನ್‌ನ ಇಯಾನ್ ಹೀಲಿ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಬಿರುಸಿನ ಬ್ಯಾಟಂಗ್ ನಡೆಸಿದ ಸೂರ್ಯವಂಶಿ, 86 ಎಸೆತಗಳಲ್ಲಿ 113 ರನ್ ಬಾರಿಸಿದರು. ಈ ಮೂಲಕ ಮೂರು ಮಾದರಿಯಲ್ಲಿಯೂ ಶತಕ ಸಿಡಿಸಿದ ಸಾಧನೆಗೈದರು.
Century on his first red ball game in Australia.
— Priyansh (JPP SZN) (@bhhupendrajogi) October 1, 2025
Vaibhav Suryavanshi - Coming to snatch everyone’s chain sooner than you expect. pic.twitter.com/gPkOIBhfPr
ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ್ದ ವೈಭವ್, 52 ಎಸೆಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದ್ದರು. ಇದರೊಂದಿಗೆ ಯೂತ್ ಏಕದಿನ ಕ್ರಿಕೆಟ್‌ನಲ್ಲಿ ವೇಗದ ಶತಕ ಸಿಡಿಸಿದ ನಂ.1 ಆಟಗಾರ ಎಂದೆನಿಸಿದ್ದರು.