ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vaibhav Suryavanshi: ಟೆಸ್ಟ್‌ ಕ್ರಿಕೆಟ್‌ನಲ್ಲೂ ಸ್ಫೋಟಕ ಶತಕ ಸಿಡಿಸಿದ ಸೂರ್ಯವಂಶಿ

ಐಪಿಎಲ್‌ನಲ್ಲಿ ಚೊಚ್ಚಲ ಪ್ರವೇಶ ಪಡೆದಿದ್ದ ಅತ್ಯಂತ ಕಿರಿಯ ಆಟಗಾರ ಸೂರ್ಯವಂಶಿ ಅವರು, ಏಪ್ರಿಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ 38 ಎಸೆತಗಳಲ್ಲಿ 101 ರನ್‌ ಗಳಿಸಿ ಹೊಸ ದಾಖಲೆ ನಿರ್ಮಿಸಿದ್ದರು. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಅತಿ ಕಿರಿಯ ಬ್ಯಾಟರ್ ಎನಿಸಿದ್ದರು.

ಸಿಡ್ನಿ: ಟಿ20 ಮತ್ತು ಏಕದಿನ ಕ್ರಿಕೆಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್‌ ಮೂಲಕ ಶತಕ ಸಿಡಿಸಿ ಮಿಂಚಿರುವ 14 ವರ್ಷದ ವೈಭವ್ ಸೂರ್ಯವಂಶಿ ಇದೀಗ, ಟೆಸ್ಟ್‌ನಲ್ಲಿಯೂ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿದ್ದಾರೆ. ಬ್ರಿಸ್ಬೇನ್‌ನಲ್ಲಿ ನಡೆದ ಆಸ್ಟ್ರೇಲಿಯಾದ U-19 ವಿರುದ್ಧದ ಯೂತ್ ಟೆಸ್ಟ್‌ನ 2 ನೇ ದಿನದಂದು ಸೂರ್ಯವಂಶಿ ಶತಕ ಬಾರಿಸಿದರು.

ಬ್ರಿಸ್ಬೇನ್‌ನ ಇಯಾನ್ ಹೀಲಿ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಬಿರುಸಿನ ಬ್ಯಾಟಂಗ್‌ ನಡೆಸಿದ ಸೂರ್ಯವಂಶಿ, 86 ಎಸೆತಗಳಲ್ಲಿ 113 ರನ್‌ ಬಾರಿಸಿದರು. ಈ ಮೂಲಕ ಮೂರು ಮಾದರಿಯಲ್ಲಿಯೂ ಶತಕ ಸಿಡಿಸಿದ ಸಾಧನೆಗೈದರು.

ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್‌ ನಡೆಸಿದ್ದ ವೈಭವ್‌, 52 ಎಸೆಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದ್ದರು. ಇದರೊಂದಿಗೆ ಯೂತ್‌ ಏಕದಿನ ಕ್ರಿಕೆಟ್‌ನಲ್ಲಿ ವೇಗದ ಶತಕ ಸಿಡಿಸಿದ ನಂ.1 ಆಟಗಾರ ಎಂದೆನಿಸಿದ್ದರು.