Vinesh Phogat: ಸರ್ಕಾರದ 4 ಕೋಟಿ ಪುರಸ್ಕಾರ ಆಯ್ಕೆ ಮಾಡಿಕೊಂಡ ವಿನೇಶ್ ಫೋಗಟ್
2016ರ ರಿಯೋ ಒಲಿಂಪಿಕ್ಸ್‌ನಲ್ಲಿ 48 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕಣಕ್ಕಿಳಿದ ವಿನೇಶ್, ಕ್ವಾರ್ಟರ್ಫೈನಲ್ನಲ್ಲಿ ಗಾಯಕ್ಕೆ ತುತ್ತಾಗಿ ಪಂದ್ಯವನ್ನು ಅರ್ಧಕ್ಕೆ ತ್ಯಜಿಸಿದ್ದರು. 2021ರ ಟೋಕಿಯೊ ಗೇಮ್ಸ್ನಲ್ಲಿ 53 ಕೆಜಿ ವಿಭಾಗದಲ್ಲಿ ಆಡಿದಾಗಲೂ ಎಂಟರ ಘಟ್ಟದಲ್ಲಿ ವಿನೇಶ್ ಪದಕದ ಕಸನು ಭಗ್ನಗೊಂಡಿತ್ತು.


ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ(paris olympics 2024 ) ಪದಕ ವಂಚಿತರಾದ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಅವರು ಹರಿಯಾಣ ಸರ್ಕಾರವು(Haryana Government) ಬೆಳ್ಳಿ ಪದಕಕ್ಕೆ ಸರಿಸಮಾನವಾಗಿ ನೀಡಲು ಮುಂದಾದ ಪುರಸ್ಕಾರಗಳಲ್ಲಿ 4 ಕೋಟಿ ನಗದು ಬಹುಮಾನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. 'ಇಲ್ಲಿ ಹಣ ಮುಖ್ಯವಲ್ಲ. ಬದಲಿಗೆ ಗೌರವ ಮುಖ್ಯ. ರಾಜ್ಯದ ಬಹಳಷ್ಟು ಜನರು ನಾನು ನಗದು ಪುರಸ್ಕಾರ ಸ್ವೀಕರಿಸುವಂತೆ ಸಲಹೆ ನೀಡಿದ್ದಾರೆ’ ಎಂದು ಫೋಗಟ್ ಹೇಳಿದ್ದಾರೆ. ಒಲಿಂಪಿಕ್ಸ್‌ನಲ್ಲಿ 50 ಕೆ.ಜಿ. ತೂಕದ ಮಹಿಳೆಯರ ವಿಭಾಗದಲ್ಲಿ ಫೈನಲ್‌ಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇರುವಾಗ ನಿಗದಿತ ತೂಕಕ್ಕಿಂತ 150 ಗ್ರಾಂ ತೂಕ ಹೆಚ್ಚಿರುವುದು ಕಂಡುಬಂದ ಕಾರಣದಿಂದ ಒಲಿಂಪಿಕ್ಸ್ನಿಂದ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು.
ಒಲಿಂಪಿಕ್ಸ್ ಪದಕ ಗೆಲ್ಲದ ಆಘಾತದಲ್ಲಿ ವಿನೇಶ್ ಕುಸ್ತಿಗೆ ವಿದಾಯ ಹೇಳಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಚೊಚ್ಚಲ ಪ್ರಯತ್ನದಲ್ಲೇ ಶಾಸಕರಾದರು.
ಒಲಿಂಪಿಕ್ಸ್ ಪದಕ ವಂಚಿತರಾದರೂ ಫೋಗಟ್ ಅವರಿಗೆ ಬೆಳ್ಳಿ ಪದಕದ ಸರಿಸಮಾನವಾಗಿ ಉಡುಗೊರೆ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಮೂರರಲ್ಲಿ ಒಂದನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಫೋಗಟ್‌ಗೆ ನೀಡಿತ್ತು. ಇದರಲ್ಲಿ 4 ಕೋಟಿ ನಗದು, ಅತ್ಯುತ್ತಮ ಕ್ರೀಡಾಪಟುಗೆ ನೀಡುವ ‘ಎ‘ ಶ್ರೇಣಿಯ ನೌಕರಿ ಹಾಗೂ ಹರಿಯಾಣ ವಿಕಾಸ ಪ್ರಾಧಿಕಾರದ ನಿವೇಶನದಲ್ಲಿ ಒಂದನ್ನು ಆಯ್ಕೆ ಮಾಡುವಂತೆ ಸರ್ಕಾರ ಹೇಳಿತ್ತು. ಇದೀಗ ಫೋಗಟ್ 4 ಕೋಟಿ ನಗದು ಆಯ್ಕೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ IPL 2025: ಐಪಿಎಲ್ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಆರ್‌ಸಿಬಿ
2016ರ ರಿಯೋ ಒಲಿಂಪಿಕ್ಸ್‌ನಲ್ಲಿ 48 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಕಣಕ್ಕಿಳಿದ ವಿನೇಶ್, ಕ್ವಾರ್ಟರ್ಫೈನಲ್ನಲ್ಲಿ ಗಾಯಕ್ಕೆ ತುತ್ತಾಗಿ ಪಂದ್ಯವನ್ನು ಅರ್ಧಕ್ಕೆ ತ್ಯಜಿಸಿದ್ದರು. 2021ರ ಟೋಕಿಯೊ ಗೇಮ್ಸ್ನಲ್ಲಿ 53 ಕೆಜಿ ವಿಭಾಗದಲ್ಲಿ ಆಡಿದಾಗಲೂ ಎಂಟರ ಘಟ್ಟದಲ್ಲಿ ವಿನೇಶ್ ಪದಕದ ಕಸನು ಭಗ್ನಗೊಂಡಿತ್ತು.