ಮುಂಬಯಿ: ಮೂತ್ರನಾಳದ ಸೋಂಕು ಮತ್ತು ಸ್ನಾಯುಸೆಳೆತದ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿನೋದ್ ಕಾಂಬ್ಳಿ(Vinod Kambli) ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಸಂತಸದಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆ ನೃತ್ಯ ಮಾಡಿದ ವಿಡಿಯೊ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್(viral video) ಆಗಿದೆ.
ಡಿಸೆಂಬರ್ 21ರಂದು ಭಿವಂಡಿಯ ಆಕೃತಿ ಆಸ್ಪತ್ರೆಗೆ ಕಾಂಬ್ಳಿ ದಾಖಲಾಗಿದ್ದರು. ಎಲ್ಲ ವೈದ್ಯಕೀಯ ತಪಾಸಣೆಗಳನ್ನು ನಡೆಸಿದ ನಂತರ ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂದಿತ್ತು. ಇದೀಗ ಚೇತರಿಕೆ ಕಾಣುತ್ತಿದ್ದಾರೆ.
‘ಚೆಕ್ ದೇ ಇಂಡಿಯಾ’ ಬಾಲಿವುಡ್ ಸಿನಿಮಾ ಹಾಡಿಗೆ ಕಾಂಬ್ಳಿ ನರ್ತಿಸುವಾಗ ಇವರ ಜತೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಇತರ ರೋಗಿಗಳೂ ಹೆಜ್ಜೆ ಹಾಕಿದರು. ಸದ್ಯ ಈ ವಿಡಿಯೊ ಎಲ್ಲಡೆ ವೈರಲ್ ಆಗಿದೆ. ‘ನಾನು ತಮ್ಮೆಲ್ಲರ ಪ್ರೀತಿ ವಿಶ್ವಾಸದಿಂದಾಗಿ ಇಷ್ಟು ದೂರ ಬಂದಿದ್ದೇನೆ’ ಎಂದು ಆಸ್ಪತ್ರೆಯ ನಿರ್ದೇಶಕ ಶೈಲೇಶ್ ಠಾಕೂರ್ ಅವರಿಗೆ ಕಾಂಬ್ಳಿ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ Vinod Kambli: ಚೇತರಿಕೆ ಕಂಡ ತಕ್ಷಣ ವಿನೋದ್ ಕಾಂಬ್ಳಿ ಹೇಳಿದ್ದೇನು?
Vinod Kambli danced in the hospital😀 #VinodKambli pic.twitter.com/uYxnZMbY1u
— Cricket Skyblogs.in (@SkyblogsI) December 31, 2024
ಕಾಂಬ್ಳಿ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬಾಲ್ಯದ ಕೋಚ್ ಆಚ್ರೇಕರ್ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಆತ್ಮೀಯ ಸ್ನೇಹಿತ ಸಚಿನ್ ತೆಂಡೂಲ್ಕರ್ ಅವರನ್ನ ಭೇಟಿಯಾಗಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ಸಮಯದಲ್ಲೂ ಕಾಂಬ್ಳಿ ಆರೋಗ್ಯ ಚೆನ್ನಾಗಿರಲಿಲ್ಲ. ಮಾತನಾಡಲು ಕೂಡ ಕಷ್ಟಪಡುತ್ತಿದ್ದರು. ಕುಡಿತದ ಚಟದಿಂದಾಗಿ ಕಾಂಬ್ಳಿ ಕಳೆದ ಕೆಲ ಸಮಯದಿಂದ ತೀವ್ರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ.
ವಿನೋದ್ ಕಾಂಬ್ಳಿ ಕ್ರಿಕೆಟ್ ವೃತ್ತಿ ಜೀವನದಲ್ಲಿ 17 ಟೆಸ್ಟ್ , 104 ಏಕದಿನ ಪಂದ್ಯಗಳನ್ನು 1991 ರಿಂದ2000ದವರೆಗೆ ಭಾರತ ಕ್ರಿಕೆಟ್ ತಂಡದಲ್ಲಿ ಸಕ್ರಿಯರಾಗಿ ಆಟವಾಡಿದ್ದರು. ಕಾಂಬ್ಳಿ 1996ರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ವೇಳೆ ಭಾರತ ತಂಡದ ಸದಸ್ಯರಾಗಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಸತತ ಎರಡು ದ್ವಿಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆ ಕೂಡ ವಿನೋದ್ ಕಾಂಬ್ಳಿ ಅವರ ಹೆಸರಿನಲ್ಲಿದೆ. ಎರಡು ದ್ವಿಶತಕ ಸೇರಿದಂತೆ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟು ನಾಲ್ಕು ಶತಕಗಳನ್ನು ಅವರು ಸಿಡಿಸಿದ್ದಾರೆ.