ಕುಟುಂಬ ಸಮೇತರಾಗಿ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ ಕೊಹ್ಲಿ
Virat-Anushka visit Ram Mandir: ಐಪಿಎಲ್ ಪಂದ್ಯದ ನಿಮಿತ್ತ ಉತ್ತರ ಪ್ರದೇದ ಲಕ್ನೋದಲ್ಲಿರುವ ವಿರಾಟ್ ಕೊಹ್ಲಿ ಭಾನುವಾರ ತಮ್ಮ ಪತ್ನಿ ಅನುಷ್ಕಾ ಜತೆಗೂಡಿ ರಾಮಮಂದಿರಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ವತಿಯಿಂದ ವಿರಾಟ್ ದಂಪತಿಗೆ ದೇವರ ಫೋಟೊ ಮತ್ತು ಹನುಮನ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಲಾಯಿತು.


ಅಯೋಧ್ಯೆ: ಅಯೋಧ್ಯೆ ರಾಮ ಮಂದಿರ ಉದ್ಘಾಟನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರೂ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿಲ್ಲ ಎಂದು ಅವರು ವಿರುದ್ಧ ಕೆಲವರು ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಅಯೋಧ್ಯೆಯ ರಾಮಮಂದಿರ ಮತ್ತು ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿದ್ದಾರೆ.
ಐಪಿಎಲ್ ಪಂದ್ಯದ ನಿಮಿತ್ತ ಉತ್ತರ ಪ್ರದೇದ ಲಕ್ನೋದಲ್ಲಿರುವ ವಿರಾಟ್ ಕೊಹ್ಲಿ ಭಾನುವಾರ ತಮ್ಮ ಪತ್ನಿ ಅನುಷ್ಕಾ ಜತೆಗೂಡಿ ರಾಮಮಂದಿರಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ವತಿಯಿಂದ ವಿರಾಟ್ ದಂಪತಿಗೆ ದೇವರ ಫೋಟೊ ಮತ್ತು ಹನುಮನ ವಿಗ್ರಹವನ್ನು ಸ್ಮರಣಿಕೆಯಾಗಿ ನೀಡಲಾಯಿತು. ಆರ್‌ಸಿಬಿ ತನ್ನ ಕೊನೆಯ ಲೀಗ್ ಪಂದ್ಯವನ್ನು ಮೇ 27ಕ್ಕೆ ಲಕ್ನೋ ವಿರುದ್ಧ ಆಡಲಿದೆ. ಈಗಾಗಲೇ ಪ್ಲೇ ಆಫ್ ಪ್ರವೇಶಿಸಿರುವ ಆರ್‌ಸಿಬಿಗೆ ಕೊನೆಯ ಪಂದ್ಯ ಗೆದ್ದರೆ ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆಯುವ ಅವಕಾಶವಿದೆ.
Virat Kohli & Anushka Sharma offered prayers at Hanuman Garhi Mandir🔥 pic.twitter.com/6umB8wCwEY
— The Jaipur Dialogues (@JaipurDialogues) May 25, 2025
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಶುಕ್ರವಾರ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಒಂದೇ ತಂಡದ(ಆರ್‌ಸಿಬಿ) ಪರ 800 ಬೌಂಡರಿ ಬಾರಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದಿದ್ದರು.
ಇದನ್ನೂ ಓದಿ IPL 2025: ಪ್ಲೇ ಆಫ್‌ಗೂ ಮುನ್ನ ಆರ್‌ಸಿಬಿಗೆ ಜೋಶ್ ತುಂಬಿದ ಜೋಶ್ ಹ್ಯಾಜಲ್‌ವುಡ್
ಕೆಲವು ದಿನಗಳ ಹಿಂದೆ ಕೊಹ್ಲಿ ದಿಢೀರ್ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. 2011ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಕೊಹ್ಲಿ, ಭಾರತ ಪರ 123 ಪಂದ್ಯಗಳಲ್ಲಿ 46.85ರ ಸರಾಸರಿಯಲ್ಲಿ 9230 ರನ್ ಕಲೆಹಾಕಿದ್ದಾರೆ. ಇದರಲ್ಲಿ 30 ಶತಕ, 31 ಅರ್ಧಶತಕಗಳೂ ಒಳಗೊಂಡಿವೆ. ಕಳೆದ ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಶತಕ ಬಾರಿಸಿದ್ದ ಕೊಹ್ಲಿ, ಅದೇ ಸರಣಿಯಲ್ಲಿ ತಮ್ಮ ಕೊನೆ ಪಂದ್ಯವಾಡಿದ್ದರು.