ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Virat Kohli: ಬೌಂಡರಿಗಳ ಮೂಲಕ ವಿಶ್ವ ದಾಖಲೆ ಬರೆದ ವಿರಾಟ್‌ ಕೊಹ್ಲಿ

ವಿರಾಟ್‌ ಕೊಹ್ಲಿ ಈ ಪಂದ್ಯದಲ್ಲಿ 67 ರನ್‌ ಬಾರಿಸಿದ್ದರೆ ಟಿ20 ಇತಿಹಾಸದಲ್ಲಿ ಒಂದೇ ತಂಡದ ಪರ 9,000 ರನ್ ಗಳಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಳ್ಳುತ್ತಿದ್ದರು. ಆರ್‌ಸಿಬಿ ಹೈದರಾಬಾದ್‌ ಗೆಲುವು ಸಾಧಿಸುತ್ತಿದ್ದರೆ ಅಗ್ರಸ್ಥಾನಕ್ಕೇರುವುದರ ಜೊತೆಗೆ, ಲೀಗ್ ಹಂತದ ಕೊನೆಗೆ ಅಗ್ರ-2ರಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಅವಕಾಶವಿತ್ತು.

ಬೌಂಡರಿಗಳ ಮೂಲಕ ವಿಶ್ವ ದಾಖಲೆ ಬರೆದ ವಿರಾಟ್‌ ಕೊಹ್ಲಿ

Profile Abhilash BC May 24, 2025 9:37 AM

ಲಕ್ನೋ: ಸನ್‌ರೈಸರ್ಸ್‌ ಹೈದರಾಬಾದ್‌(SRH vs RCB) ವಿರುದ್ಧ ಆರ್‌ಸಿಬಿ(RCB) ಸೋಲು ಕಂಡರೂ ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ(Virat Kohli) ನೂತನ ದಾಖಲೆಯೊಂದನ್ನು ಬರೆದಿದ್ದಾರೆ. 25 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸರ್‌ನೊಂದಿಗೆ 43 ರನ್ ಸಿಡಿಸಿದ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಒಂದೇ ತಂಡದ(ಆರ್‌ಸಿಬಿ) ಪರ 800 ಬೌಂಡರಿ ಬಾರಿಸಿದ ವಿಶ್ವದ ಮೊದಲ ಬ್ಯಾಟರ್‌ ಎನಿಸಿಕೊಂಡರು. ಜೇಮ್ಸ್ ವಿನ್ಸ್ (694) ದ್ವಿತೀಯ ಸ್ಥಾನದಲ್ಲಿದ್ದಾರೆ. ಕೊಹ್ಲಿ ಈ ಪಂದ್ಯದಲ್ಲಿ 67 ರನ್‌ ಬಾರಿಸಿದ್ದರೆ ಟಿ20 ಇತಿಹಾಸದಲ್ಲಿ ಒಂದೇ ತಂಡದ ಪರ 9,000 ರನ್ ಗಳಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಳ್ಳುತ್ತಿದ್ದರು.

ಏಕಾನ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ ಸ್ಫೋಟಕ ಆಟವಾಡಿ 6 ವಿಕೆಟ್‌ಗೆ 231 ರನ್ ಕಲೆಹಾಕಿತು. ಬೃಹತ್‌ ಮೊತ್ತ ಬೆನ್ನತ್ತಿದ್ದ ಆರ್‌ಸಿಬಿಗೆ ಉತ್ತಮ ಆರಂಭದ ಹೊರತಾಗಿಯೂ ಮಧ್ಯಮ ಕ್ರಮಾಂಕದ ವೈಫಲ್ಯದಿಂದಾಗಿ 19.5 ಓವರ್‌ಗಳಲ್ಲಿ 189ಕ್ಕೆ ಆಲೌಟಾಯಿತು. ಸೋಲುಂಡ ಆರ್‌ಸಿಬಿ ಅಂಕಪಟ್ಟಿ ಯಲ್ಲಿ 2ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಜಾರಿದೆ. ಈ ಪಂದ್ಯ ಗೆದ್ದಿದ್ದರೆ ಅಗ್ರಸ್ಥಾನಕ್ಕೇರುವುದರ ಜೊತೆಗೆ, ಲೀಗ್ ಹಂತದ ಕೊನೆಗೆ ಅಗ್ರ-2ರಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಅವಕಾಶವಿತ್ತು.

ಒಂದೇ ತಂಡದ ಅತ್ಯಧಿಕ ಬೌಂಡರಿ

ವಿರಾಟ್‌ ಕೊಹ್ಲಿ(ಆರ್‌ಸಿಬಿ); 800 ಬೌಂಡರಿ

ಜೇಮ್ಸ್ ವಿನ್ಸ್(ಹ್ಯಾಂಪ್‌ಶೈರ್‌): 694 ಬೌಂಡರಿ

ಅಲೆಕ್ಸ್ ಹೇಲ್ಸ್(ನಾಟಿಂಗ್‌ಹ್ಯಾಮ್‌ಶೈರ್‌): 563 ಬೌಂಡರಿ

ರೋಹಿತ್‌ ಶರ್ಮ(ಮುಂಬೈ ಇಂಡಿಯನ್ಸ್‌): 550 ಬೌಂಡರಿ

ಲ್ಯೂಕ್ ರೈಟ್ (ಸಸೆಕ್ಸ್‌): 529 ಬೌಂಡರಿ

ಇದನ್ನೂ ಓದಿ IPL 2025: ಒಂದು ಪಂದ್ಯ ಬಾಕಿ; ಆರ್‌ಸಿಬಿಗೆ ಟಾಪ್‌-2ನಲ್ಲಿ ಸ್ಥಾನ ಪಡೆಯುವ ಅವಕಾಶ ಇದೆಯೇ?

ಆರ್‌ಸಿಬಿ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಇದೇ ಮೈದಾನದಲ್ಲಿ ಆಡಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ 19 ಅಂಕ ಆಗಲಿದೆ. ಮತ್ತೆ ಅಗ್ರ-2ರಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಬೇಕಾದರೆ ಇತರ ತಂಡಗಳ ಫಲಿತಾಂಶ ತನ್ನ ಪರವಾಗಿ ಬರಬೇಕಿದೆ. ಪಂಜಾಬ್‌ ಎರಡು ಪಂದ್ಯ ಗೆದ್ದರೆ ಆರ್‌ಸಿಬಿ ಕೊನೆಯ ಪಂದ್ಯದಲ್ಲಿ ಗೆದ್ದರೂ ಮೂರನೇ ಸ್ಥಾನದಲ್ಲಿಯೇ ಉಳಿಯಲಿದೆ.