Virat Kohli: ಕ್ಯಾಚ್ ಮೂಲಕ ದಾಖಲೆ ಬರೆದ ವಿರಾಟ್ ಕೊಹ್ಲಿ
ಮೊಹಮದ್ ಶಮಿ ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿ ಎರಡೂ ಐಸಿಸಿ ಟೂರ್ನಿಗಳಲ್ಲಿ ಐದು ವಿಕೆಟ್ ಸಾಧನೆ ಮಾಡಿದ ಮೊದಲ ಭಾರತೀಯ ವೇಗಿ ಎನಿಸಿಕೊಂಡರು. ಇದು ಮಾತ್ರವಲ್ಲದೆ, ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 200 ವಿಕೆಟ್ ಪಡೆದ ಭಾರತೀಯ ವೇಗಿ ಎಂಬ ದಾಖಲೆಯ ಜತೆಗೆ ಕಡಿಮೆ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎನಿಸಿದರು.


ದುಬೈ: ಬಾಂಗ್ಲಾದೇಶ ವಿರುದ್ಧ ಗುರುವಾರ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ(Virat Kohli) ಬ್ಯಾಟಿಂಗ್ ವೈಫಲ್ಯ ಕಂಡರೂ ಫೀಲ್ಡಿಂಗ್‌ನಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ದಾಖಲೆಯೊಂದನ್ನು ಬರೆದಿದ್ದಾರೆ.
ಪಂದ್ಯದಲ್ಲಿ ವಿರಾಟ್ ಕೊಹ್ಲಿ 2 ಕ್ಯಾಚ್‌ಗಳನ್ನು ಹಿಡಿಯುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ಕ್ಯಾಚ್ ಪಡೆದ (ವಿಕೆಟ್ ಕೀಪರ್ ಹೊರತುಪಡಿಸಿ) ಆಟಗಾರರ ಪಟ್ಟಿಯಲ್ಲಿ ಮೊ.ಅಜರುದ್ದೀನ್ ದಾಖಲೆ ಸರಿಗಟ್ಟಿದರು. ಉಭಯ ಆಟಗಾರರು 156 ಕ್ಯಾಚ್ ಪಡೆದಿದ್ದಾರೆ. ಕೊಹ್ಲಿ ಪಾಕಿಸ್ತಾನ ವಿರುದ್ಧ ಭಾನುವಾರ ನಡೆಯುವ ಪಂದ್ಯದಲ್ಲಿ ಒಂದು ಕ್ಯಾಚ್ ಪಡೆದರೆ ಅಜರುದ್ದೀನ್ ಅವರನ್ನು ಹಿಂದಿಕ್ಕಲಿದ್ದಾರೆ. ಅತ್ಯಧಿಕ ಕ್ಯಾಚ್ ಪಡೆದ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ (218) ಹೆಸರಿನಲ್ಲಿದೆ. ದ್ವಿತೀಯ ಸ್ಥಾನದಲ್ಲಿ ರಿಕಿ ಪಾಂಟಿಂಗ್ (160) ಕಾಣಿಸಿಕೊಂಡಿದ್ದಾರೆ.
ಹಲವು ದಾಖಲೆ ಬರೆದ ಶಮಿ
ಮೊಹಮದ್ ಶಮಿ ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿ ಎರಡೂ ಐಸಿಸಿ ಟೂರ್ನಿಗಳಲ್ಲಿ ಐದು ವಿಕೆಟ್ ಸಾಧನೆ ಮಾಡಿದ ಮೊದಲ ಭಾರತೀಯ ವೇಗಿ ಎನಿಸಿಕೊಂಡರು. ಇದು ಮಾತ್ರವಲ್ಲದೆ, ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 200 ವಿಕೆಟ್ ಪಡೆದ ಭಾರತೀಯ ವೇಗಿ ಎಂಬ ದಾಖಲೆಯ ಜತೆಗೆ ಕಡಿಮೆ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎನಿಸಿದರು. ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ 102 ಪಂದ್ಯಗಳಲ್ಲಿ ಈ ಸಾಧನೆ ಮಾಡಿದರೆ, ಶಮಿ 103ನೇ ಪಂದ್ಯದಲ್ಲಿ ಈ ಮೈಲಿಗಲ್ಲು ತಲುಪಿದರು.
ಇದನ್ನೂ ಓದಿ Champions Trophy: ಮ್ಯಾಚ್ ವಿನ್ನಿಂಗ್ ಶತಕದ ಮೂಲಕ ವಿಶೇಷ ದಾಖಲೆ ಬರೆದ ಶುಭಮನ್ ಗಿಲ್!
11 ಸಾವಿರ ರನ್ ಪೂರೈಸಿದ ರೋಹಿತ್
ನಾಯಕ ರೋಹಿತ್ ಶರ್ಮ ಅವರು ಈ ಪಂದ್ಯದಲ್ಲಿ 12 ರನ್ ಗಳಿಸುತ್ತಿದ್ದಂತೆ ಏಕದಿನ ಕ್ರಿಕೆಟ್‌ನಲ್ಲಿ 11 ಸಾವಿರ ರನ್ ಪೂರೈಸಿದ 4ನೇ ಭಾರತೀಯ ಬ್ಯಾಟರ್ ಎನಿಸಿಕೊಂಡರು. ತೆಂಡುಲ್ಕರ್ (18,426), ಕೊಹ್ಲಿ (13.963*), ಗಂಗೂಲಿ (11,221) ಮೊದಲ ಮೂರು ಸ್ಥಾನದಲ್ಲಿದ್ದಾರೆ. ಅತಿ ವೇಗವಾಗಿ 11 ಸಾವಿರ ರನ್ ಪೂರೈಸಿದ 2ನೇ ಭಾರತೀಯ ಎಂಬ ಕೀತ್ರಿಗೂ ರೋಹಿತ್ ಪಾತ್ರರಾದರು. ಕೊಹ್ಲಿ (222 ಇನಿಂಗ್ಸ್) ಮೊದಲ ಸಾಧಕ.