ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Virat Kohli: ಗಂಗೂಲಿ ದಾಖಲೆ ಸರಿಗಟ್ಟಲು ಕಿಂಗ್‌ ಕೊಹ್ಲಿ ಸಜ್ಜು

ಟೀಮ್‌ ಇಂಡಿಯಾ ಪರ ಅತಿ ಹೆಚ್ಚು ಏಕದಿನ ಪಂದ್ಯಗಳನ್ನಾಡಿದ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ನಂತರ ಕ್ರಮವಾಗಿ ಎಂಎಸ್ ಧೋನಿ (347), ರಾಹುಲ್ ದ್ರಾವಿಡ್ (340), ಮೊಹಮ್ಮದ್ ಅಜರುದ್ದೀನ್ (334) ಮತ್ತು ಗಂಗೂಲಿ (311) ಪಂದ್ಯಗಳನ್ನಾಡಿದ್ದಾರೆ.

Virat Kohli

ವಿಶಾಖಪಟ್ಟಣಂ, ಡಿ. 6: ತವರಿನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ(India vs South Africa 3rd ODI) ವಿರುದ್ಧದ ಏಕದಿನ ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಶತಕ ಬಾರಿಸಿ ಭರ್ಜರಿ ಫಾರ್ಮ್‌ನಲ್ಲಿರುವ ವಿರಾಟ್‌ ಕೊಹ್ಲಿ(Virat Kohli) ಶನಿವಾರ ವೈಜಾಗ್‌ನಲ್ಲಿ ನಡೆಯಲಿರುವ ಸರಣಿಯ ಅಂತಿಮ ಪಂದ್ಯದಲ್ಲಿ ಸೌರವ್‌ ಗಂಗೂಲಿ(Sourav Ganguly) ದಾಖಲೆ ಸರಿಗಟ್ಟಲಿದ್ದಾರೆ.

ಕೊಹ್ಲಿ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ಭಾರತ ತಂಡದ ಪರ ಅತಿ ಹೆಚ್ಚು ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದ ದಾಖಲೆಯ ಪಟ್ಟಿ ಸೇರಲಿದ್ದಾರೆ. ಸದ್ಯ ಗಂಗೂಲಿ 311 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ವಿರಾಟ್‌ ಕೊಹ್ಲಿ 2008ರ ಆಗಸ್ಟ್‌ನಲ್ಲಿ ಶ್ರೀಲಂಕಾದಲ್ಲಿ ಏಕದಿನ ಸರಣಿಯಲ್ಲಿ ಪದಾರ್ಪಣೆ ಮಾಡಿದ ಬಳಿಕ ಇದುವರೆಗೂ ಭಾರತ ತಂಡದ ಪರ ಈವರೆಗೆ 310 ಏಕದಿನ ಪಂದ್ಯಗಳನ್ನಾಡಿದ್ದಾರೆ. ಇಂದಿನ ಪಂದ್ಯದಲ್ಲಿ ಆಡುವ ಮೂಲಕ ಅವರು ಗಂಗೂಲಿ ದಾಖಲೆ ಸರಿಗಟ್ಟಲಿದ್ದಾರೆ.

ಟೀಮ್‌ ಇಂಡಿಯಾ ಪರ ಅತಿ ಹೆಚ್ಚು ಏಕದಿನ ಪಂದ್ಯಗಳನ್ನಾಡಿದ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ನಂತರ ಕ್ರಮವಾಗಿ ಎಂಎಸ್ ಧೋನಿ (347), ರಾಹುಲ್ ದ್ರಾವಿಡ್ (340), ಮೊಹಮ್ಮದ್ ಅಜರುದ್ದೀನ್ (334) ಮತ್ತು ಗಂಗೂಲಿ (311) ಪಂದ್ಯಗಳನ್ನಾಡಿದ್ದಾರೆ.

ಟೀಮ್‌ ಇಂಡಿಯಾಗೆ ಮಾಡು ಇಲ್ಲವೆ ಮಾಡಿ ಪಂದ್ಯ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ 1-1 ರಿಂದ ಸಮಬಲಗೊಂಡಿದೆ. ರಾಂಚಿಯಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆಲುವು ಸಾಧಿಸಿತ್ತು. ಬಳಿಕ ರಾಯ್‌ಪುರದಲ್ಲಿ ಎರಡನೇ ಪಂದ್ಯದಲ್ಲಿ ಪ್ರವಾಸಿ ತಂಡ ಗೆಲುವು ಸಾಧಿಸಿತ್ತು. ಹೀಗಾಗಿ ವಿಶಾಖಪಟ್ಟದಲ್ಲಿ ನಡೆಯಲಿರುವ ಅಂತಿಮ ಪಂದ್ಯ ಉಭಯ ತಂಡಗಳಿಗೆ ನಿರ್ಣಾಯಕ ಪಂದ್ಯವಾಗಿದ್ದು, ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡ ಸರಣಿ ಮುಡಿಗೇರಿಸಿಕೊಳ್ಳಲಿದೆ. ಟೆಸ್ಟ್‌ ಸರಣಿ ಸೋತಿರುವ ಭಾರತ ತಂಡ ಏಕದಿನ ಸರಣಿ ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಇದನ್ನೂ ಓದಿ ಸಚಿನ್‌ ತೆಂಡೂಲ್ಕರ್‌ರ 100 ಶತಕಗಳ ದಾಖಲೆ ಮುರಿಯುತ್ತಾರಾ ವಿರಾಟ್‌ ಕೊಹ್ಲಿ?

ಪಿಚ್‌ ರಿಪೊರ್ಟ್‌

ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ಕ್ರೀಡಾಂಗಣವು ಬ್ಯಾಟಿಂಗ್‌ ಸ್ನೇಹಿ ಪಿಚ್‌ ಆಗಿದೆ. ಭಾರತೀಯ ಬ್ಯಾಟರ್‌ಗಳಾದ ವಿರಾಟ್‌ ಕೊಹ್ಲಿ, ಋತುರಾಜ್‌ ಗಾಯಕ್ವಾಡ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌ ಭರ್ಜರಿ ಫಾರ್ಮ್‌ನಲ್ಲಿರುವುದರಿಂದ ಬಿಗ್‌ ಸ್ಕೋರ್‌ ದಾಖಲಿಸುವ ಸಾಧ್ಯತೆಯಿದೆ. ಆದಾಗ್ಯೂ, ಬೌಲರ್‌ಗಳು ಬೌನ್ಸ್‌ ಮತ್ತು ವೇಗ ಪಡೆಯಬಹುದು. ಇನ್ನು ಈ ಪಿಚ್‌ನಲ್ಲಿ ಇದುವರೆಗೆ 300ಕ್ಕೂ ಹೆಚ್ಚು ಗುರಿ ಬೆನ್ನಟ್ಟಲಾಗಿಲ್ಲ. ಆದ್ದರಿಂದ ಮೊದಲು ಬ್ಯಾಟಿಂಗ್‌ ಮಾಡುವ ತಂಡಕ್ಕೆ ಈ ಪಿಚ್‌ ಹೆಚ್ಚು ಸಹಕಾರಿಯಾಗಲಿದೆ.

ಸಾಂಭವ್ಯ ಆಡುವ ಬಳಗ

ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, (ನಾಯಕ) ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಶ್‌ದೀಪ್‌ ಸಿಂಗ್‌, ನಿತೀಶ್‌ ಕುಮಾರ್‌ ರೆಡ್ಡಿ.

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್(ವಿ.ಕೀ.), ಐಡೆನ್ ಮಾರ್ಕ್ರಾಮ್, ಟೆಂಬಾ ಬವುಮಾ(ನಾಯಕ), ಮ್ಯಾಥ್ಯೂ ಬ್ರೀಟ್ಜ್ಕೆ, ಟೋನಿ ಡಿ ಜೋರ್ಜಿ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್, ಲುಂಗಿ ಎನ್‌ಗಿಡಿ.

ನೇರ ಪ್ರಸಾರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌/ಜಿಯೋ-ಹಾಟ್‌ಸ್ಟಾರ್

ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ.