Virat Kohli: ಗೆಲುವಿನ ಬಳಿಕ ಶಮಿ ತಾಯಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಕೊಹ್ಲಿ
Champions Trophy Final: ಚಾಂಪಿಯನ್ಸ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆ ವೇಳೆ ವಿರಾಟ್ ಕೊಹ್ಲಿ(Virat Kohli) ಅವರು ಸಹ ಆಟಗಾರ ಮೊಹಮ್ಮದ್ ಶಮಿ(Mohammed Shami) ಅವರ ತಾಯಿ ಅಂಜುಮ್ ಅರಾ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಹೃದಯಸ್ಪರ್ಶಿ ಘಟನೆ ಕೂಡ ಕಂಡು ಬಂತು.


ದುಬೈ: ಚಾಂಪಿಯನ್ಸ್ ಟ್ರೋಫಿ ಫೈನಲ್(Champions Trophy Final) ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು 4 ವಿಕೆಟ್‌ಗಳಿಂದ ಮಣಿಸಿದ ಬಳಿಕ ಟೀಮ್ ಇಂಡಿಯಾ ಆಟಗಾರರು ಗೆಲುವಿನ ಸಂಭ್ರಮಾಚರಣೆ ನಡೆಸಿದರು. ಮತ್ತೊಂದೆಡೆ ವಿರಾಟ್ ಕೊಹ್ಲಿ(Virat Kohli) ಅವರು ಸಹ ಆಟಗಾರ ಮೊಹಮ್ಮದ್ ಶಮಿ(Mohammed Shami) ಅವರ ತಾಯಿ ಅಂಜುಮ್ ಅರಾ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಹೃದಯಸ್ಪರ್ಶಿ ಘಟನೆ ಕೂಡ ಕಂಡು ಬಂತು. ಕೊಹ್ಲಿಯ ಈ ನಡೆಗೆ ನೆಟ್ಟಿಗರು ಭಾರೀ ಮೆಚ್ಚುಗೆ ಸೂಚಿಸಿದ್ದಾರೆ. ಪಂದ್ಯ ವೀಕ್ಷಣೆಗೆ ಮೊಹಮ್ಮದ್ ಶಮಿ ತಾಯಿ, ಸಹೋದರಿ ಕೂಡ ಸಾಕ್ಷಿಯಾಗಿದ್ದರು. ಪಂದ್ಯದ ಬಳಿಕ ಕೊಹ್ಲಿ ಇವರನ್ನು ಭೇಟಿ ಮಾಡಿ ಗ್ರೂಫ್ ಫೋಟೊ ತೆಗೆಸಿಕೊಂಡರು.
ಭಾನುವಾರ ರಾತ್ರಿ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ಬ್ಯಾಟಿಂಗ್ ಡೆರಿಲ್ ಮಿಚೆಲ್ (63 ರನ್, 101 ಎಸೆತ, 3 ಬೌಂಡರಿ) ಹಾಗೂ ಮಿಚೆಲ್ ಬ್ರೇಸ್‌ವೆಲ್ (53* ರನ್, 40 ಎಸೆತ, 3 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 251 ರನ್‌ಗಳ ಮೊತ್ತ ಕಲೆಹಾಕಿತು.
virat touching mohammed shami's mother feet ❤️❤️ pic.twitter.com/FxvGDZGP4R
— Bewda babloo 🧉 (@babloobhaiya3) March 9, 2025
ಚೇಸಿಂಗ್ ವೇಳೆ ರೋಹಿತ್ ಶರ್ಮ ಹಾಗೂ ಶುಭಮಾನ್ ಗಿಲ್ (31) ಒದಗಿಸಿದ ಬಿರುಸಿನ ಆರಂಭ ಪಡೆಯಿತು. ಕೊಹ್ಲಿ(1) ವಿಫಲರಾದರು. ಶ್ರೇಯಸ್ ಅಯ್ಯರ್ (48 ರನ್, 62 ಎಸೆತ, 2 ಬೌಂಡರಿ, 2 ಸಿಕ್ಸರ್) ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ (29) ಸಣ್ಣ ಬ್ಯಾಟಿಂಗ್ ಹೋರಾಟ ನಡೆಸಿದರು. ಕೊನೆಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ (34* ರನ್, 33 ಎಸೆತ, 1 ಬೌಂಡರಿ, 1 ಸಿಕ್ಸರ್) ಉಪಯುಕ್ತ ಆಟದ ನೆರವಿನಿಂದ 49 ಓವರ್‌ಗಳಲ್ಲಿ 6 ವಿಕೆಟ್‌ಗೆ 254 ಭಾರತಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ ಮೂರನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯಿತು.
ಸೇಡು ತೀರಿಸಿಕೊಂಡ ಭಾರತ
ಐಸಿಸಿ ಟೂರ್ನಿಯ ಪ್ರಶಸ್ತಿ ಸುತ್ತಿನಲ್ಲಿ ಭಾರತ ಇದುವರೆಗೂ ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿರಲಿಲ್ಲ. 2000ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2019 ಏಕದಿನ ವಿಶ್ವಕಪ್ ಸೆಮಿನಲ್ ಹಾಗೂ 2021ರ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಪ್ರಶಸ್ತಿ ಸುತ್ತಿನಲ್ಲಿ ಭಾರತ ಕಿವೀಸ್ ವಿರುದ್ಧ ಸೋಲು ಕಂಡಿತ್ತು. ಇದೀಗ ಈ ಎಲ್ಲ ಸೋಲಿಗೆ ಭಾರತ ಈ ಬಾರಿ ತೀರಿಸಿಕೊಂಡಿದೆ.