'Give Up' ಭಾರೀ ಸಂಚಲನ ಮೂಡಿಸಿದ ವಿರಾಟ್ ಕೊಹ್ಲಿ ಪೋಸ್ಟ್; ಇದು ನಿವೃತ್ತಿಯ ಸುಳಿವೇ?
Virat Kohli's X post: ಆಸೀಸ್ ಸರಣಿಯೇ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಗೆ ವಿದಾಯದ ಸರಣಿಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಆಸೀಸ್ ಸರಣಿ ಬಳಿಕ ಏಕದಿನದಲ್ಲಿ ಮುಂದುವರಿಯಲು ನಿರ್ಧರಿಸಿದರೂ, ಬಿಸಿಸಿಐ ಅವರನ್ನು 2027ರ ಏಕದಿನ ವಿಶ್ವಕಪ್‌ವರೆಗೂ ಮುಂದುವರಿಸುವ ಸಾಧ್ಯತೆ ಕಡಿಮೆ ಎನ್ನಲಾಗಿತ್ತು.

-

ಪರ್ತ್: ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಏಕದಿನ(india vs australia) ಸರಣಿಗೆ ಕೇವಲ ಒಂದು ದಿನ ಮಾತ್ರ ಬಾಕಿ ಉಳಿದಿದೆ. ಹೀಗಿರುವಾಗಲೇ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ(Virat Kohli) ಅವರು ತಮ್ಮ ಟ್ವಿಟರ್ ಎಕ್ಸ್ ಖಾತೆಯಲ್ಲಿ ಮಾಡಿರುವ ಪೋಸ್ಟ್(Virat Kohli's X post) ಒಂದು ಭಾರೀ ಸಂಚಲನ ಮೂಡಿಸಿದೆ. ಈ ಪೋಸ್ಟ್ 2027ರ ವಿಶ್ವಕಪ್ ಭವಿಷ್ಯದ ಬಗ್ಗೆ ವ್ಯಾಪಕ ಊಹಾಪೋಹಗಳಿಗೆ ಕಾರಣವಾಗಿದೆ.
ಆಸೀಸ್ ಸರಣಿಯೇ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಗೆ ವಿದಾಯದ ಸರಣಿಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಆಸೀಸ್ ಸರಣಿ ಬಳಿಕ ಏಕದಿನದಲ್ಲಿ ಮುಂದುವರಿಯಲು ನಿರ್ಧರಿಸಿದರೂ, ಬಿಸಿಸಿಐ ಅವರನ್ನು 2027ರ ಏಕದಿನ ವಿಶ್ವಕಪ್‌ವರೆಗೂ ಮುಂದುವರಿಸುವ ಸಾಧ್ಯತೆ ಕಡಿಮೆ ಎನ್ನಲಾಗಿತ್ತು.
ಇದೀಗ ಕೊಹ್ಲಿ ಸರಣಿ ಆರಂಭಕ್ಕೂ ಮುನ್ನವೇ 'ನೀವು ನಿಜವಾಗಿಯೂ ವಿಫಲರಾಗುವ ಏಕೈಕ ಸಮಯವೆಂದರೆ ನೀವು ಬಿಟ್ಟುಕೊಡಲು ನಿರ್ಧರಿಸಿದಾಗ' ಎಂದು ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಕೊಹ್ಲಿ ಅವರು ಆಸೀಸ್ ಸರಣಿ ಬಳಿಕ ಏಕದಿನ ಕ್ರಿಕೆಟ್‌ಗೂ ನಿವೃತ್ತಿ ಘೋಷಿಸಲು ಮುಂದಾದಂತಿದೆ. ಒಟ್ಟಾರೆ ಅವರ ನಿಗೂಡ ಪೋಸ್ಟ್ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಕೊಹ್ಲಿ ಅವರು ಜಾಹಿರಾತಿನ ಭಾಗವಾಗಿ ಈ ಪೋಸ್ಟ್ ಮಾಡಿದ್ದಾ ಅಥವಾ ನಿವೃತ್ತಿಯ ಸುಳಿವಾಗಿ ಮಾಡಿದ್ಧ ಎನ್ನುವುದು ಇನ್ನಷ್ಟೇ ಸ್ಪಷ್ವಾಗಬೇಕಿದೆ.
ವಿರಾಟ್ ಕೊಹ್ಲಿ ಎಕ್ಸ್ ಪೋಸ್ಟ್
The only time you truly fail, is when you decide to give up.
— Virat Kohli (@imVkohli) October 16, 2025
ಇದನ್ನೂ ಓದಿ ಕೊಹ್ಲಿ-ರೋಹಿತ್ ಅವರೇ..... ಇನ್ನೂ ಸ್ವಲ್ಪ ದಿನ ಆಡಬಹುದಿತ್ತಲ್ವಾ? ಯಾಕಿಷ್ಟು ಆತುರ!
ಫಿಟ್ನೆಸ್ ಕಾಯ್ದುಕೊಳ್ಳಬಹುದಾಗಿದ್ದರೂ ಬಿಸಿಸಿಐ ತನ್ನ ವಿಶ್ವಕಪ್ ತಂಡದ ಯೋಜನೆಯಲ್ಲಿ 36 ವರ್ಷದ ಕೊಹ್ಲಿಯನ್ನು ಹೊರಗಿಡಬಹುದು ಎಂದು ಹೇಳಲಾಗುತ್ತಿದೆ. ಅಂದರೆ, ಈ ವರ್ಷಾಂತ್ಯಕ್ಕೆ ಅಥವಾ ಮುಂದಿನ ವರ್ಷ ಕೊಹ್ಲಿ ನಿವೃತ್ತಿ ಘೋಷಿಸಬೇಕಾದ ಅನಿವಾರ್ಯತೆ ಎದುರಾಗಬಹುದು ಎಂದು ವರದಿಯಾಗಿದೆ.