ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಅಂಡರ್-19 ಏಷ್ಯಾ ಕಪ್: 361 ರನ್ ಸಿಡಿಸಿ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದ ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್

U19 Asia Cup: ಶನಿವಾರ ನಡೆದ 19 ವರ್ಷದೊಳಗಿನ ಪುರುಷರ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 1 ವಿಕೆಟ್‌ನಿಂದ ರೋಚಕವಾಗಿ ಮಣಿಸಿದ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರ ನಡುವೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್‌ ಅವರ ಪುತ್ರ ಆರ್ಯವೀರ್ ಸೆಹ್ವಾಗ್ ಸ್ಫೋಟಕ ಬ್ಯಾಟಿಂಗ್‌ನಿಂದ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆರ್ಯನ್‌ ಸೆಹ್ವಾಗ್‌ (ಸಂಗ್ರಹ ಚಿತ್ರ)

ನವದೆಹಲಿ: ಶನಿವಾರ ನಡೆದ 19 ವರ್ಷದೊಳಗಿನ ಪುರುಷರ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ (U19 Asia Cup) ಫೈನಲ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು 1 ವಿಕೆಟ್‌ನಿಂದ ರೋಚಕವಾಗಿ ಮಣಿಸಿದ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪಾಕಿಸ್ತಾನ ನೀಡಿದ್ದ 338 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ, ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ 339 ರನ್ ಗಳಿಸಿ ಐತಿಹಾಸಿಕ ಗೆಲುವು ದಾಖಲಿಸಿತು. ಇಡೀ ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ವೀರೇಂದ್ರ ಸೆಹ್ವಾಗ್ ಪುತ್ರ ಆರ್ಯವೀರ್ ಸೆಹ್ವಾಗ್ (Aaryavir Sehwag) 'ಸರಣಿ ಶ್ರೇಷ್ಠ' ಪ್ರಶಸ್ತಿಗೆ ಭಾಜನರಾದರು.

ಟೂರ್ನಿಯುದ್ದಕ್ಕೂ ಸ್ಥಿರ ಪ್ರದರ್ಶನ ನೀಡಿದ ಆರಂಭಿಕ ಆಟಗಾರ ಆರ್ಯವೀರ್ ಸೆಹ್ವಾಗ್, ಆಡಿದ ಐದು ಇನ್ನಿಂಗ್ಸ್‌ಗಳಲ್ಲಿ 90.25ರ ಸರಾಸರಿಯಲ್ಲಿ ಒಟ್ಟು 361 ರನ್ ಕಲೆಹಾಕಿ ಅಗ್ರ ಸ್ಕೋರರ್ ಎನಿಸಿಕೊಂಡರು. ಇದರಲ್ಲಿ ಯುಎಇ ವಿರುದ್ಧ ಸಿಡಿಸಿದ 160 ರನ್‌ಗಳ ಭರ್ಜರಿ ಶತಕ ಹಾಗೂ ಮೂರು ಅರ್ಧಶತಕಗಳು ಸೇರಿದ್ದು, ಇಂದಿನ ಪಂದ್ಯದಲ್ಲಿಯೂ 61 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ 58 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಇಡೀ ಟೂರ್ನಿಯಲ್ಲಿ ಐದು ಇನ್ನಿಂಗ್ಸ್‌ಗಳಿಂದ ಒಟ್ಟು 361 ರನ್ ಕಲೆಹಾಕಿದರು. ಇದು ಅಂಡರ್-19 ಏಷ್ಯಾ ಕಪ್‌ನ ಒಂದೇ ಆವೃತ್ತಿಯಲ್ಲಿ ಆಟಗಾರನೊಬ್ಬ ಗಳಿಸಿದ ಗರಿಷ್ಠ ರನ್‌ಗಳ ದಾಖಲೆಯಾಗಿದೆ.



ದಾಖಲೆಗಳು ಪುಡಿ-ಪುಡಿ

ಫೈನಲ್‌ನಲ್ಲಿ ಗಳಿಸಿದ 58 ರನ್‌ಗಳ ನೆರವಿನಿಂದ ಆರ್ಯವೀರ್ ಟೂರ್ನಿಯಲ್ಲಿ ಒಟ್ಟು 361 ರನ್ ಪೂರೈಸಿದರು. ಈ ಮೂಲಕ ಪಾಕಿಸ್ತಾನದ ಉಸ್ಮಾನ್ ಖಾನ್ (345 ರನ್) ಅವರನ್ನು ಹಿಂದಿಕ್ಕಿ 2026ರ ಆವೃತ್ತಿಯ ಗರಿಷ್ಠ ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದರು. 5 ಪಂದ್ಯಗಳಲ್ಲಿ 90.25ರ ಸರಾಸರಿಯಲ್ಲಿ 1 ಶತಕ ಹಾಗೂ 3 ಅರ್ಧಶತಕಗಳನ್ನು ಸಿಡಿಸಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಟೂರ್ನಿಯಲ್ಲಿ ಒಟ್ಟು 38 ಬೌಂಡರಿಗಳು ಮತ್ತು 16 ಸಿಕ್ಸರ್‌ಗಳನ್ನು ಬಾರಿಸಿದರು. ಯುಎಇ ವಿರುದ್ಧ 168 ಎಸೆತಗಳಲ್ಲಿ 17 ಬೌಂಡರಿ ಹಾಗೂ 7 ಸಿಕ್ಸರ್‌ಗಳ ನೆರವಿನಿಂದ 160 ರನ್ ಸಿಡಿಸಿದ್ದು ಟೂರ್ನಿಯ ಅವರ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

Vishakha Bhat Heggar

View all posts by this author