ಅಹಮದಾಬಾದ್: ಇಂದಿನಿಂದ ದೇಶದಲ್ಲಿ ವಿವೋ ಪ್ರೊ ಕಬಡ್ಡಿ ಲೀಗ್ ಸೀಸನ್ 10ರ ಹವಾ ಶುರುವಾಗಲಿದೆ. ಪಂದ್ಯಾವಳಿಗಳಿಗೆ ಅಧಿಕೃತವಾಗಿ ಚಾಲನೆ ಸಿಗಲಿದ್ದು, ಅಹಮದಾಬಾದ್‌ನ ಟ್ರಾನ್ಸ್‌ಸ್ಟೇಡಿಯಾ ಸ್ಟೇಡಿಯಂನಲ್ಲಿ ಮೊದಲಿಗೆ ತೆಲುಗು ಟೈಟನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ಕಣಕ್ಕಿಳಿಯಲಿದೆ.
ಆರಂಭದಲ್ಲೇ ಸ್ಟಾರ್ ಆಟಗಾರರಾದ ಫಜೆಲ್ ಅತ್ರಾಚಲಿ ಮತ್ತು ಪವನ್ ಸೆಹ್ರಾವತ್ ಮುಖಾಮುಖಿಯಾಗಲಿದ್ದು, ಕುತೂಹಲ ಕೆರಳಿಸಿದೆ. ಸದ್ಯ 4 ವರ್ಷಗಳ ನಂತರ ಆರಂಭವಾಗಿರುವ ಪ್ರೊ ಕಬಡ್ಡಿ ಲೀಗ್‌ನ 10ನೇ ಸೀಸನ್‌ನಲ್ಲಿ ಎಲ್ಲಾ 12 ಫ್ರಾಂಚೈಸಿಗಳು ತಮ್ಮ ತವರಿನ ಅಂಗಳದಲ್ಲಿ ಆಡಲು ಸಿದ್ಧವಾಗಿವೆ.
ಮುಖ್ಯವಾಗಿ ಇಂದಿನಿಂದ ಪ್ರಾರಂಭವಾಗಲಿರುವ ಪಂದ್ಯಾವಳಿಗಳು 2024ರ ಫೆಬ್ರವರಿ 21ರವರೆಗೆ ನಡೆಯಲಿವೆ. ಇನ್ನು ಸೀಸನ್ 10 ಪಂದ್ಯಾವಳಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಟಿವಿ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು.