ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಚೆಪಾಕ್ ಸ್ಟೇಡಿಯಂನಲ್ಲಿ ಭಾರತದ ಏಕದಿನ ಸಾಧನೆ ಹೇಗಿದೆ?

India's Odi record at Chennai: 50 ಓವರ್‌ಗಳ ಪಂದ್ಯಗಳಲ್ಲಿ ಭಾರತ ತಂಡವು ಈ ಸ್ಥಳದಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ. ಭಾರತ ಮೊದಲ ಬಾರಿಗೆ ಇಲ್ಲಿ 1987 ರ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿತ್ತು. ಆದರೆ ಸೋಲು ಕಂಡಿತ್ತು. ಒಟ್ಟು ಇಲ್ಲಿ 16 ಪಂದ್ಯಗಳಲ್ಲಿ ಎಂಟರಲ್ಲಿ ಗೆದ್ದಿದ್ದಾರೆ. 2 ಪಂದ್ಯ ಫಲಿತಾಂಶ ಕಂಡಿಲ್ಲ.

Chidambaram Stadium

ಚೆನ್ನೈ, ಜೂ.20: ಇಂದು ನಡೆಯಲಿರುವ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ(IND vs AFG 3rd ODI)ದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ತಂಡ ಮುಖಾಮುಖಿಯಾಗಲಿವೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣ(India's Odi record at Chennai) ಪಂದ್ಯಕ್ಕೆ ಅಣಿಯಾಗಿದೆ. ಸುಮಾರು ಮೂರು ವರ್ಷಗಳ ಬಳಿಕ ಭಾರತ ತಂಡ ಇಲ್ಲಿ ಏಕದಿನ ಪಂದ್ಯವನ್ನಾಡಲಿದೆ. ಈ ಮೈದಾನದಲ್ಲಿ ಭಾರತ ಏಕದಿನ ಸಾಧನೆ ಹೇಗಿದೆ ಎಂಬ ವರದಿ ಇಲ್ಲಿದೆ.

50 ಓವರ್‌ಗಳ ಪಂದ್ಯಗಳಲ್ಲಿ ಭಾರತ ತಂಡವು ಈ ಸ್ಥಳದಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ. ಭಾರತ ಮೊದಲ ಬಾರಿಗೆ ಇಲ್ಲಿ 1987 ರ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿತ್ತು. ಆದರೆ ಸೋಲು ಕಂಡಿತ್ತು. ಒಟ್ಟು ಇಲ್ಲಿ 16 ಪಂದ್ಯಗಳಲ್ಲಿ ಎಂಟರಲ್ಲಿ ಗೆದ್ದಿದ್ದಾರೆ. 2 ಪಂದ್ಯ ಫಲಿತಾಂಶ ಕಂಡಿಲ್ಲ.

ಇಂದಿನ ಭಾರತ-ಆಫ್ಘಾನ್‌ ಅಂತಿಮ ಪಂದ್ಯಕ್ಕೆ ಭಾರೀ ಮಳೆ ಭೀತಿ; ಪಂದ್ಯ ರದ್ದು ಸಾಧ್ಯತೆ!

ಭಾರತ ಇಲ್ಲಿ ಕೊನೆಯ ಬಾರಿಗೆ ಏಕದಿನ ಪಂದ್ಯ ಆಡಿದ್ದು 2023ರ ವಿಶ್ವಕಪ್‌ನಲ್ಲಿ. ಆಸ್ಟ್ರೇಲಿಯಾ ವಿರುದ್ಧದ ಲೀಗ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರ 85 ಮತ್ತು ಕೆಎಲ್ ರಾಹುಲ್ ಅವರ ಅಜೇಯ 97 ರನ್‌ಗಳ ನೆರವಿನಿಂದ ಭಾರತ ಗೆಲುವು ಸಾಧಿಸಿತ್ತು. ಈ ಬಾರಿ ಸರಣಿಯಲ್ಲಿ ಕೊಹ್ಲಿ ಆಡುತ್ತಿಲ್ಲ. ಆದರೆ ರಾಹುಲ್‌ ತಂಡದಲ್ಲಿರುವ ಕಾರಣ ಅವರಿಂದ ಇಲ್ಲಿ ಮತ್ತೊಂದು ಉತ್ತಮ ಪ್ರದರ್ಶನ ದಾಖಲಾಗುವುದೇ ಕಾದು ನೋಡಬೇಕಿದೆ.

ಭಾರತದ ಹಿರಿಯ ಆರಂಭಿಕ ಆಟಗಾರ ರೋಹಿತ್ ಶರ್ಮಾ ಈ ಕ್ರೀಡಾಂಗಣದಲ್ಲಿ ಕಳಪೆ ದಾಖಲೆಯನ್ನು ಹೊಂದಿದ್ದಾರೆ. ಇಲ್ಲಿ ಆಡಿದ ಎಂಟು ಪಂದ್ಯಗಳಲ್ಲಿ ಅವರು 20.00 ಸರಾಸರಿಯಲ್ಲಿ ಕೇವಲ 140 ರನ್ ಗಳಿಸಿದ್ದಾರೆ. ಚೆನ್ನೈನಲ್ಲಿ ಅಫ್ಘಾನಿಸ್ತಾನದ ಪರ ರಹಮತ್ ಶಾ ಅತಿ ಹೆಚ್ಚು ರನ್ ಗಳಿಸಿದ್ದಾರೆ. ಇದರಲ್ಲಿ ಎರಡು ಇನ್ನಿಂಗ್ಸ್‌ಗಳಲ್ಲಿ 113 ರನ್ ಗಳಿಸಿದ್ದಾರೆ. ಇದರಲ್ಲಿ ಅಜೇಯ 77 ರನ್ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

FIFA World Cup 2026: ಗೆಲುವಿನ ಖಾತೆ ತೆರೆದ ಬ್ರೆಜಿಲ್‌, ನಾಕೌಟ್‌ಗೆ ಲಗ್ಗೆಯಿಟ್ಟ ಅಮೆರಿಕ

ಸಂಭಾವ್ಯ ತಂಡಗಳು

ಭಾರತ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್‌, ಇಶಾನ್ ಕಿಶನ್ (ವಿ.ಕೀ.), ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಕುಲ್‌ದೀಪ್‌ ಯಾದವ್‌, ಹರ್ಷಿತ್ ರಾಣಾ/ ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಪ್ರಿನ್ಸ್‌ ಯಾದವ್‌.

ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ.), ಇಬ್ರಾಹಿಂ ಜದ್ರಾನ್, ಸೇದಿಕ್ ಅಟಲ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತ್ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ಎಎಮ್ ಗಜನ್ಫರ್, ಜಿಯಾವುರ್ ರೆಹಮಾನ್, ಮೊಹಮ್ಮದ್ ಸಲೀಮ್.