ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಐಪಿಎಲ್​ ಟ್ರೋಫಿಗೂ 1983ರ ವಿಶ್ವಕಪ್​ಗೂ ಇದೆ ನಂಟು; ಏನದು?

IPL Trophy Sanskrit Shlok: ಐಪಿಎಲ್​ ಎಂಬುದು ಸ್ಥಳೀಯ ಆಟಗಾರರ ಪ್ರತಿಭೆಯನ್ನು ಅನಾವರಣ ಮಾಡಿಸಲು ಇರುವಂತ ಉತ್ತಮ ವೇದಿಕೆಯಾಗಿದೆ. ಈ ಟೂರ್ನಿಯಿಂದ ಅದೆಷ್ಟೋ ಆಟಗಾರರು ಬೆಳಕಿಗೆ ಬಂದು ಇಂದು ವಿಶ್ವದ ನಂ.1 ಆಟಗಾರರಾಗಿಯೂ ಮೆರೆದಾಡಿದ್ದಾರೆ. ಕೇವಲ 15 ವರ್ಷ ವೈಭವ್‌ ಸೂರ್ಯವಂಶಿಯಂತಹ ಸ್ಫೋಟಕ ಬ್ಯಾಟರನ್ನು ವಿಶ್ವಕ್ಕೆ ಪರಿಚಯಿಸಿದ ನಿದರ್ಶನವೇ ಇದಕ್ಕೆ ಉತ್ತಮ ಸಾಕ್ಷಿ.

ipl trophy sanskrit shlok

ಅಹಮದಾಬಾದ್‌, ಮೇ 31: ಇನ್ನೇನು ಕೆಲ ಗಂಟೆಗಳಲ್ಲಿ ವಿಶ್ವದಲ್ಲೇ ಅತ್ಯಂತ ಶ್ರೀಮಂತ ಟಿ20 ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿಯ ಫೈನಲ್‌ ಪಂದ್ಯ ಆರಂಭವಾಗಲಿದೆ. ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುವ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿವೆ. ಎರಡೂ ತಂಡಗಳು ತಮ್ಮ ಎರಡನೇ ಪ್ರಶಸ್ತಿಯನ್ನು ಪಡೆಯಲು ಸಿದ್ದವಾಗಿವೆ.

ಈ ಬಾರಿ ಚಾಂಪಿಯನ್​ ಯಾರಾಗಬಹುದು ಎನ್ನುವ ಕುತೂಹಲದ ಮಧ್ಯೆ ಟ್ರೋಫಿಯಲ್ಲಿ(IPL Trophy) ಬರೆದಿರುವ ಸಂಸ್ಕೃತ ಶ್ಲೋಕದ(IPL Trophy Shlok) ಅರ್ಥವೇನು? 1983ರ ವಿಶ್ವಕಪ್(1983 Cricket World Cup) ಟ್ರೋಫಿಗೂ ಇರುವ ನಂಟೇನು?​ ಎಂಬ ಮತ್ತೊಂದು ಕುತೂಹಲ ಅಭಿಮಾನಿಗಳದ್ದು.

ಭಾರತದ ಮೊದಲ ವಿಶ್ವಕಪ್​ ನಂಟು

ಹೌದು, ಐಪಿಎಲ್​ ಟ್ರೋಫಿಯಲ್ಲಿ ಬರೆದಿರುವ ಸಂಸ್ಕೃತ ಶ್ಲೋಕಕ್ಕೂ 1983ರ ವಿಶ್ವಕಪ್ ಟ್ರೋಫಿಗೂ ನಂಟಿದೆ. ಭಾರತ ತಂಡ 1983ರಲ್ಲಿ ಗೆದ್ದ ಏಕದಿನ ವಿಶ್ವಕಪ್ ಟ್ರೋಫಿ ಮೇಲೆ “ಯತ್ರಾ ಅವಸರ ಪ್ರಾಪ್ನೋತಿಹಿ”(Yatra Pratibha Avsara Prapnotihi) ಎಂದು ಸಂಸ್ಕೃತ ಶ್ಲೋಕವೊಂದನ್ನು ಬರೆಯಲಾಗಿದೆ. ಇದೇ ಶ್ಲೋಕವನ್ನು ಐಪಿಎಲ್​ ಟ್ರೋಫಿಯಲ್ಲಿಯೂ ಬರೆಯಲಾಗಿದೆ. ಇದರ ಅರ್ಥ ಎಲ್ಲಿ ಪ್ರತಿಭೆಗಳು ಇರುತ್ತಾರೋ ಅಲ್ಲಿ ಅವಕಾಶವೂ ಇರುತ್ತದೆ ಎಂದು. ಇದನ್ನೇ ಸ್ಫೂರ್ತಿಯನ್ನಾಗಿಟ್ಟುಕೊಂಡು ಐಪಿಎಲ್​ ಟ್ರೋಫಿಯ ಮೇಲೂ ಈ ಶ್ಲೋಕವನ್ನು ಕೆತ್ತಲಾಗಿದೆ.

IPL 2026 winner prize money: ಐಪಿಎಲ್‌ ಚಾಂಪಿಯನ್ ತಂಡಕ್ಕೆ ಸಿಗುವ ಬಹುಮಾನ ಮೊತ್ತವೆಷ್ಟು?

1983ರಲ್ಲಿ ಕಪಿಲ್​ ದೇವ್​ ಸಾರಥ್ಯದ ಭಾರತ ತಂಡ ಲಂಡನ್​ಗೆ ವಿಶ್ವಕಪ್​ ಆಡಲು ತೆರಳಿದ್ದಾಗ ಭಾರತ ತಂಡವನ್ನು ಅತ್ಯಂತ ಕೀಳು ಮಟ್ಟದಲ್ಲಿ ಅಪಮಾನ ಮಾಡಲಾಗಿತ್ತು. ಅದರಲ್ಲೂ ಇಂಗ್ಲೆಂಡ್​ ಮತ್ತು ಆಸ್ಟ್ರೇಲಿಯಾ ಮಾಧ್ಯಮಗಳು ಕೆಲ ಸವಾಲನ್ನು ಹಾಕಿದ್ದವು. ಸ್ವತಃ ಭಾರತೀಯರೀಗೂ ಕಪ್​ ಗೆಲ್ಲುವ ವಿಶ್ವಾಸವಿರಲಿಲ್ಲ. ಆದರೆ ಅಂದು ಕಪೀಲ್​ ದೇವ್​ ಪಡೆ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು.



ಅರ್ಥಪೂರ್ಣವಾಗಿದೆ ಈ ಶ್ಲೋಕ

ಕಪಿಲ್​ ಸಾರಥ್ಯದಲ್ಲಿ ಗೆದ್ದ ವಿಶ್ವಕಪ್​ ಮೇಲೆ “ಯತ್ರಾ ಅವಸರ ಪ್ರಾತ್ನೋತಿನಿ” ಎಂದು ಬರೆಯಲಾಗಿತ್ತು. ಇದನ್ನೇ ಪ್ರಸಿದ್ಧ ಐಪಿಎಲ್​ ಟ್ರೋಫಿಯಲ್ಲಿಯೂ ಬರೆಯಲಾಗಿದೆ. ಐಪಿಎಲ್​ ಎಂಬುದು ಸ್ಥಳೀಯ ಆಟಗಾರರ ಪ್ರತಿಭೆಯನ್ನು ಅನಾವರಣ ಮಾಡಿಸಲು ಇರುವಂತ ಉತ್ತಮ ವೇದಿಕೆಯಾಗಿದೆ. ಈ ಟೂರ್ನಿಯಿಂದ ಅದೆಷ್ಟೋ ಆಟಗಾರರು ಬೆಳಕಿಗೆ ಬಂದು ಇಂದು ವಿಶ್ವದ ನಂ.1 ಆಟಗಾರರಾಗಿಯೂ ಮೆರೆದಾಡಿದ್ದಾರೆ. ಕೇವಲ 15 ವರ್ಷ ವೈಭವ್‌ ಸೂರ್ಯವಂಶಿಯಂತಹ ಸ್ಫೋಟಕ ಬ್ಯಾಟರನ್ನು ವಿಶ್ವಕ್ಕೆ ಪರಿಚಯಿಸಿದ ನಿದರ್ಶನವೇ ಇದಕ್ಕೆ ಸಾಕ್ಷಿ. ಈ ಕಾರಣದಿಂದ ಟ್ರೋಫಿ ಮೇಲೆ ಬರೆದಿರುವ ಶ್ಲೋಕ ಅರ್ಥಪೂರ್ಣವಾಗಿದೆ.