ಭಾರತ ವಿರುದ್ಧದ ಟಿ20 ವಿಶ್ವಕಪ್ ಪಂದ್ಯ ಬಹಿಷ್ಕಾರಕ್ಕೆ ಪಾಕ್ ಚಿಂತನೆ
T20 World Cup 2026: ಒಂದೊಮ್ಮೆ ಪಾಕಿಸ್ತಾನ ತಂಡ ಭಾರತ ವಿರುದ್ಧದ ಪಂದ್ಯದಿಂದ ಹಿಂದೆ ಸರಿದರೆ ಐಸಿಸಿಗೆ ಆರ್ಥಿಕ ನಷ್ಟವಾಗುವುದು ಖಚಿತ. ಪ್ರಸಾರಕರಿಗೂ ಇದರಿಂದ ದೊಡ್ಡ ನಷ್ಟ ಉಂಟಾಗಲಿದೆ. ಹಾಗಾಗಿ ಐಸಿಸಿ ಕೂಡ ಪಿಸಿಬಿ ಮೇಲೆ ಹಲವು ನಿರ್ಬಂಧ ಹೇರಬಹುದು.
Mohsin Naqvi and Jay Shah -
ಕರಾಚಿ, ಜ.27: ಫೆಬ್ರವರಿ 7 ರಿಂದ ಆರಂಭವಾಗುವ ಟಿ20 ವಿಶ್ವಕಪ್ ಟೂರ್ನಿಯ ವಿಚಾರದಲ್ಲಿ ಪಾಕಿಸ್ತಾನ(Pakistan) ಹೊಸ ಕ್ಯಾತೆ ತೆಗೆದಿದೆ. ವಿಶ್ವಕಪ್(T20 World Cup 2026)ನಲ್ಲಿ ಪಾಲ್ಗೊಂಡರೂ ಭಾರತ ವಿರುದ್ಧ ಪಂದ್ಯ ಆಡದಿರಲು ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.
ವಿಶ್ವಕಪ್‌ನಿಂದ ಬಾಂಗ್ಲಾದೇಶವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯು(ಐಸಿಸಿ) ಹೊರಗಿಟ್ಟಿದ್ದಕ್ಕೆ ತನ್ನ ಬೆಂಬಲ ಘೋಷಿಸಿರುವ ಪಾಕಿಸ್ತಾನವು, ಬಾಂಗ್ಲಾವನ್ನು ಹೊರಗಿಟ್ಟರೆ ತಾನೂ ವಿಶ್ವಕಪ್‌ನಿಂದ ಹೊರಗುಳಿಯುವುದಾಗಿ ಬೆದರಿಸಿತ್ತು. ಇದಕ್ಕೆ ಐಸಿಸಿ ತೀಕ್ಷ್ಣವಾಗಿ ಉತ್ತರಿಸಿ ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ತನ್ನ ನಿರ್ಧಾರವನ್ನು ಅಲ್ಪ ಬದಲಿಸಿದಂತಿರುವ ಪಾಕ್, ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದೆ. ಆದರೆ ಭಾರತ ವಿರುದ್ಧ ಪಂದ್ಯ ಆಡದಿರಲು ತೀರ್ಮಾನಿಸಿದೆ ಎನ್ನಲಾಗುತ್ತಿದೆ.
ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಭೇಟಿಯಾದ ನಂತರ ನಖ್ವಿ ಎಕ್ಸ್ ನಲ್ಲಿ ಟ್ವೀಟ್ ಮಾಡಿ, ಈ ವಿಷಯದಲ್ಲಿ ಶುಕ್ರವಾರ ಅಥವಾ ಸೋಮವಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಒಂದೊಮ್ಮೆ ಪಾಕಿಸ್ತಾನ ತಂಡ ಭಾರತ ವಿರುದ್ಧದ ಪಂದ್ಯದಿಂದ ಹಿಂದೆ ಸರಿದರೆ ಐಸಿಸಿಗೆ ಆರ್ಥಿಕ ನಷ್ಟವಾಗುವುದು ಖಚಿತ. ಪ್ರಸಾರಕರಿಗೂ ಇದರಿಂದ ದೊಡ್ಡ ನಷ್ಟ ಉಂಟಾಗಲಿದೆ. ಹಾಗಾಗಿ ಐಸಿಸಿ ಕೂಡ ಪಿಸಿಬಿ ಮೇಲೆ ಹಲವು ನಿರ್ಬಂಧ ಹೇರಬಹುದು. ವಾರ್ಷಿಕವಾಗಿ ನೀಡುವ ಲಾಭಾಂಶದಲ್ಲೂ ಪಾಕಿಸ್ತಾನಕ್ಕೆ ಹಣ ಕಡಿತಗೊಳಿಸುವ ಸಾಧ್ಯತೆ ಇದೆ. ಭಾರತ-ಪಾಕ್ ಪಂದ್ಯ ಆರ್ಥಿಕವಾಗಿ ಐಸಿಸಿಗೆ ಬಹಳ ಪ್ರಾಮುಖ್ಯವಾದದ್ದು. ಈ ಪಂದ್ಯದ ಪ್ರಸಾರದಿಂದಲೇ ಬಹುಕೋಟಿ ಲಾಭ ಸಿಗುತ್ತದೆ.
ಐಸಿಸಿ ಕೈಗೊಳ್ಳುವ ಕ್ರಮವೇನು?
ಐಸಿಸಿ ಪಾಕಿಸ್ತಾನದ ಮೇಲೆ ಭಾರಿ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಯಿದೆ. ಮತ್ತು ಇದು ಪಿಸಿಬಿಗೆ ದೊಡ್ಡ ಆರ್ಥಿಕ ಹೊಡೆತ ಬೀಳಲಿದೆ. ಭಾರತ ಪಂದ್ಯ ಅಥವಾ ವಿಶ್ವಕಪ್ ಅನ್ನು ಬಹಿಷ್ಕರಿಸುವುದು ಐಸಿಸಿಯೊಂದಿಗಿನ ಅವರ ಭಾಗವಹಿಸುವಿಕೆ ಒಪ್ಪಂದದ ಉಲ್ಲಂಘನೆಯಾಗುತ್ತದೆ. ಈ ಸಂದರ್ಭದಲ್ಲಿ, ಕ್ರಿಕೆಟ್ ಸಂಸ್ಥೆಯು ವಿಶ್ವಕಪ್ ಮತ್ತು ಏಷ್ಯಾ ಕಪ್‌ನಂತಹ ಜಾಗತಿಕ ಮತ್ತು ದ್ವಿಪಕ್ಷೀಯ ಪಂದ್ಯಾವಳಿಗಳಿಂದ ಪಾಕ್ ತಂಡವನ್ನು ಅಮಾನತುಗೊಳಿಸಬಹುದು.
75 ವರ್ಷ ಹಳೆಯ ಡಾನ್ ಬ್ರಾಡ್ಮನ್ ಕ್ಯಾಪ್ ಹರಾಜು; ಸಿಕ್ಕ ಮೊತ್ತವೆಷ್ಟು?
ಇದಲ್ಲದೆ, ಪಾಕಿಸ್ತಾನವನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮುದಾಯದಿಂದ ಪ್ರತ್ಯೇಕಿಸಬಹುದು ಮತ್ತು ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ನಲ್ಲಿ ವಿದೇಶಿ ಆಟಗಾರರಿಗೆ ಎನ್‌ಒಸಿಗಳನ್ನು ಹಿಂತೆಗೆದುಕೊಳ್ಳುವ ಸಾಧ್ಯತೆಯಿದೆ.
ಟಿ20 ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ತಂಡ
ಸಲ್ಮಾನ್ ಅಲಿ ಆಘಾ (ನಾಯಕ), ಬಾಬರ್ ಅಜಂ, ಶಾಹೀನ್ ಶಾ ಆಫ್ರಿದಿ, ಫಖರ್ ಜಮಾನ್, ಶಾದಾಬ್ ಖಾನ್, ನಸೀಮ್ ಶಾ, ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಖವಾಜಾ ಮೊಹಮ್ಮದ್ ನಫಯ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ಸಾಹಿಬ್‌ಜಾದಾ ಫರ್ಹಾನ್, ಸೈಮ್ ಅಯೂಬ್, ಉಸ್ಮಾನ್ ಖಾನ್, ಉಸ್ಮಾನ್ ತಾರಿಖ್.