ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs PAK: ಇಂದಿನ ಭಾರತ-ಪಾಕ್‌ ಪಂದ್ಯಕ್ಕೆ ಸಾಮಾಜಿಕ ತಾಣದಲ್ಲಿ ಬಾಯ್ಕಾಟ್‌ ಅಭಿಯಾನ

Asia Cup 2025: ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ್ದ ಕಾನ್ಪುರದ ಉದ್ಯಮಿ ಶುಭಂ ದ್ವಿವೇದಿ ಅವರ ಪತ್ನಿ ಪಂದ್ಯದ ವಿರುದ್ಧ ಕಿಡಿ ಕಾರಿದ್ದು, ಪಾಕಿಸ್ತಾನ ವಿರುದ್ಧ ಭಾರತದ ತಂಡ ಪಂದ್ಯ ಆಡುವುದು ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಮಾಡುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರೀ ವಿರೋಧದ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌

-

Abhilash BC Abhilash BC Sep 14, 2025 9:10 AM

ನವದೆಹಲಿ: ಪಹಲ್ಗಾಂನಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿ ಬಳಿಕ ಭಾರತ ತಂಡ ಪಾಕಿಸ್ತಾನ(IND vs PAK) ವಿರುದ್ಧ ಕ್ರಿಕೆಟ್‌ ಪಂದ್ಯವನ್ನಾಡಲು ಸಜ್ಜಾಗಿದೆ. ಇಂದು(ಭಾನುವಾರ) ನಡೆಯುವ ಏಷ್ಯಾಕಪ್‌ ಟಿ20 ಟೂರ್ನಿಯ(Asia Cup 2025) ಮಹತ್ವದ ಪಂದ್ಯದಲ್ಲಿ ಕಣಕ್ಕಿಳಯಲಿದೆ. ಪಂದ್ಯಕ್ಕೆ ಯುಎಇ ದೇಶದ ದುಬೈ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಪಂದ್ಯಕ್ಕೂ ಮುನ್ನನೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಯಾವುದೇ ಕಾರಣಕ್ಕೂ ಭಾರತ ತಂಡ ಪಾಕ್‌ ವಿರುದ್ಧ ಆಡಬಾರದು ಎಂಬ ಕೂಗು ಜೋರಾಗಿದೆ.

ಈ ಬಗ್ಗೆ ಸಾಮಾಜಿಕ ತಾಣಗಳಲ್ಲೂ ಅಭಿಯಾನ ಕೈಗೊಂಡಿದ್ದು, ಪಂದ್ಯ ವೀಕ್ಷಿಸದಂತೆ ಕರೆ ನೀಡುತ್ತಿದ್ದಾರೆ. ಕೆಲ ರಾಜಕೀಯ ಪಕ್ಷಗಳು, ಗಣ್ಯರು ಕೂಡಾ ಭಾರತ-ಪಾಕ್‌ ಬಹಿಷ್ಕರಿಸಬೇಕೆಂದು ಒತ್ತಾಯಿಸಿದ್ದಾರೆ. ಈ ನಡುವೆ, ಐಪಿಎಲ್‌ನ ಪಂಜಾಬ್‌ ಕಿಂಗ್ಸ್‌ ತಂಡ ಶನಿವಾರ ಪಂದ್ಯದ ಬಗ್ಗೆ ಸಾಮಾಜಿಕ ತಾಣದಲ್ಲಿ ಪೋಸ್ಟ್‌ ಮಾಡಿದ್ದು, ಭಾರತದ ಧ್ವಜದ ಚಿಹ್ನೆ ಬಳಸಿ ಪಾಕಿಸ್ತಾನದ ಧ್ವಜವನ್ನು ಕಡೆಗಣಿಸಿದೆ.



ಇದನ್ನೂ ಓದಿ Asia Cup 2025: ತಾವು ಖರೀದಿಸಿದ ಮೊಟ್ಟ ಮೊದಲ ಕಾರು ಯಾವುದೆಂದು ರಿವೀಲ್‌ ಮಾಡಿದ ಶುಭಮನ್‌ ಗಿಲ್‌!

ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ್ದ ಕಾನ್ಪುರದ ಉದ್ಯಮಿ ಶುಭಂ ದ್ವಿವೇದಿ ಅವರ ಪತ್ನಿ ಪಂದ್ಯದ ವಿರುದ್ಧ ಕಿಡಿ ಕಾರಿದ್ದು, ಪಾಕಿಸ್ತಾನ ವಿರುದ್ಧ ಭಾರತದ ತಂಡ ಪಂದ್ಯ ಆಡುವುದು ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಮಾಡುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಷ್ಟೇ ವಿರೋಧ ವ್ಯಕ್ತವಾಗುತ್ತಿದರೂ, ಕೇಂದ್ರ ಸರ್ಕಾರದ ಅನುಮತಿ ಸಿಕ್ಕಿದ್ದರಿಂದ ಪಾಕಿಸ್ತಾನ ವಿರುದ್ಧ ಆಡಲು ಭಾರತ ಸಜ್ಜಾಗಿದೆ. ಪಂದ್ಯ ರಾತ್ರಿ 8ಕ್ಕೆ ಆರಂಭವಾಗಲಿದೆ.